ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Team Udayavani, Apr 19, 2024, 1:25 PM IST
ಹುಬ್ಬಳ್ಳಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎನ್ನುವುದಕ್ಕೆ ನೇಹಾ ಹಿರೇಮಠ ಹತ್ಯೆ, ಗದಗಿನಲ್ಲಿ ನಾಲ್ವರ ಕೊಲೆ ಇಂಥಹ ಅನೇಕ ಘಟನೆಗಳು ಸಾಕ್ಷಿಯಾಗಿವೆ. ಲಕ್ಷಾಂತರ ರೂಪಾಯಿ ಹಣ ಪಡೆದು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದರೆ ಅವರಿಂದ ಕಾನೂನು ವ್ಯವಸ್ಥೆ ನಿರೀಕ್ಷಿಸಲು ಸಾಧ್ಯವೇ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಅರವಿಂದನಗರದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿಭಾಗ ಮಟ್ಟದ ಮಾಧ್ಯಮ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಈ ಸರಕಾರದಲ್ಲಿ ಪೋಲಿಸ್ ಅಧಿಕಾರಿಗಳ ಪ್ರತಿ ವರ್ಗಾವಣೆಯು ಹಣವಿಲ್ಲದೆ ಆಗುತ್ತಿಲ್ಲ. ಇಂತಹ ಪೊಲೀಸ್ ಅಧಿಕಾರಿಗಳಿಂದ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಯನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಮುಕ್ತ ವರ್ಗಾವಣೆಯಿಂದ ಮಾತ್ರ ಅವರಿಂದ ಉತ್ತಮ ಕಾರ್ಯ ನಿರ್ವಹಿಸಲು ಸಾಧ್ಯ ಎಂದರು.
ಕಾಲೇಜು ಆವರಣಕ್ಕೆ ಮಾದಕ ವಸ್ತುಗಳು ಪೂರೈಕೆ ಆಗುತ್ತಿವೆ ಎನ್ನುವುದು ಬಹಳ ಆತಂಕಕಾರಿ ವಿಚಾರ. ಸರಕಾರ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಸಣ್ಣ ಸಣ್ಣ ಪ್ರಕರಣಗಳಿಗೂ ರಾಜಕೀಯ ಹಸ್ತಕ್ಷೇಪ ಮಾಡಿದರೆ ಪೊಲೀಸರು ಮುಕ್ತವಾಗಿ ಕಾರ್ಯನಿರ್ವಸಲು ಅಸಾಧ್ಯ ಎಂದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.