Hubli; ಸಿದ್ದರಾಮಯ್ಯರಿಗೆ ಮಾನ ಮರ್ಯಾದೆ ಇಲ್ಲ; ಕಿಡಿಕಾರಿದ ಪ್ರಹ್ಲಾದ ಜೋಶಿ
Team Udayavani, Feb 26, 2024, 11:34 AM IST
ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾನ ಮರ್ಯಾದೆ ಇಲ್ಲ. ಹಾಗಂತ ಬೇರೆಯವರಿಗೂ ಇಲ್ಲ ಎಂದು ಸಿದ್ದರಾಮಯ್ಯ ಭಾವಿಸಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹರಿಹಾಯ್ದರು.
ಸೋಮವಾರ ಸುದ್ದಿಗಾರರೊಂದೊಗೆ ಮಾತನಾಡಿದ ಅವರು, ನವಲಗುಂದ ಕಾಂಗ್ರೆಸ್ ಕಾರ್ಯಕ್ರಮದ ಭಾಷಣದಲ್ಲಿ ತಮ್ಮ ವಿರುದ್ಧ ಏಕ ವಚನದಲ್ಲಿ ಮಾತನಾಡಿದ ಸಿಎಂ ಸಿದ್ಧರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡರು.
ಸಿದ್ದರಾಮಯ್ಯ ಅವರಷ್ಟು ನೀಚತನಕ್ಕೆ ನಾವು ಇಳಿಯುವುದಿಲ್ಲ. ನೀವು ಹೇಗೆ ಪ್ರಮಾಣವಚನ ಸ್ವೀಕರಿಸಿದ್ದಿರಿ ಹಾಗೆಯೇ ನಾನು ಕೂಡ ಪ್ರಮಾಣವಚನ ಸ್ವೀಕಾರ ಮಾಡಿರುವೆ. ಆಡಳಿತ, ಅಧಿಕಾರ ನಿಮಗೆ ಜಾಸ್ತಿ ಇರಬಹುದು. ಆದರೆ, ಸಂವಿಧಾನದಲ್ಲಿ ಕೇಂದ್ರ ಸರ್ಕಾರದ ಒಬ್ಬ ಮಂತ್ರಿ ಹಾಗೂ ರಾಜ್ಯದ ಮುಖ್ಯಮಂತ್ರಿ ಸಮಾನರು. ನಾನು ಮಾನ ಮರ್ಯಾದೆ ಬಿಟ್ಟು ವರ್ತನೆ ಮಾಡುವುದಿಲ್ಲ ಎಂದು ಕಿಡಿಕಾರಿದರು.
ಸಿದ್ದರಾಮಯ್ಯ ಯಾವುದೇ ಪೂರ್ವಾಪರ ತಿಳಿದುಕೊಳ್ಳದೆ ಉಡಾಫೆ ಹೊಡಿತಾರೆ. ಕಾಂಗ್ರೆಸ್ ಎಲ್ಲ ಸಂದರ್ಭದಲ್ಲಿ ಕಳಸಾ ಬಂಡೂರಿ ಯೋಜನೆಗೆ ತೊಡಕುಂಟು ಮಾಡಿದೆ. ಸೋನಿಯ ಗಾಂಧಿ ಅವರು ಗೋವಾಕ್ಕೆ ಹೋಗಿ ಹನಿ ನೀರು ಕೊಡಲ್ಲ ಎಂದಿದ್ದರು. ಇವರಿಗೆ ಎಷ್ಟು ನಾಲಿಗೆ ಇದೆ. ಕಾಂಗ್ರೆಸ್ ನವರು ವಿವೇಚನ ರಹಿತವಾಗಿ ಮಾತನಾಡುತ್ತಿದ್ದಾರೆ ಎಂದರು.
ಸಿ.ಟಿ ರವಿ ಮತ್ತು ಶೋಭಾ ಕರಂದ್ಲಾಜೆ ಗೋ ಬ್ಯಾಕ್ ವಿಚಾರ, ಕಾಂಗ್ರೆಸ್ ಸ್ವಂತ ಬಲ ಮತ್ತು ಅಭಿವೃದ್ಧಿಯಿಂದ ಗೆಲ್ಲುವುದಿಲ್ಲ. ಆದ್ದರಿಂದ ಈ ರೀತಿಯ ಹೇಳಿಕೆ ನೀಡುತ್ತಿದೆ. ಆ ಪಕ್ಷದ ಷಡ್ಯಂತರಕ್ಕೆ ಜನ ಬಲಿಯಾಗುವುದಿಲ್ಲ ಎಂದರು.
ಮಂಡ್ಯ ಕ್ಷೇತ್ರಕ್ಕೆ ಸುಮಲತಾ ವಿಚಾರವಾಗಿ ಮಾತನಾಡಿ, ಮಂಡ್ಯ ವಿಚಾರದಲ್ಲಿ ಎಲ್ಲರಿಗೂ ಸಮಾಧಾನವಾಗುವ ಪರಿಹಾರ ಕಂಡು ಹಿಡಿಯುತ್ತೇವೆ. ಅಧಿವೇಶನದಲ್ಲಿ ಸುಮಲತಾ ಜೊತೆಗೆ ಮಾತನಾಡಿದ್ದೇನೆ. ಒಂದು ಮನೆಯಿಂದ ಇನ್ನೊಂದು ಮನೆಗೆ ಮದುವೆ ಸಂಬಂಧ ಆದ ಕೂಡಲೇ ಎಲ್ಲಾ ಹೊಂದಾಣಿಕೆ ಆಗುವುದಿಲ್ಲ. ದೊಡ್ಡ ಪಕ್ಷಗಳು, ದೊಡ್ಡ ವ್ಯವಸ್ಥೆ, ಕೋಟ್ಯಾಂತರ ಜನ, ಲಕ್ಷಾಂತರ ಜನರ ಹೊಂದಾಣಿಕೆಗೆ ಸಮಯಬೇಕು. ಕುಮಾರಸ್ವಾಮಿ ಅವರ ಮೇಲೆ ನನಗೆ ಸಂಪೂರ್ಣ ನಂಬಿಕೆಯಿದೆ ಎಂದರು.
ನಿರ್ಮಲಾ ಸೀತಾರಾಮನ್ ಲೋಕಸಭೆಗೆ ಸ್ಪರ್ಧೆ ಮಾಡುವುದು ನಿಶ್ಚಿತ. ಆದರೆ, ಯಾವ ರಾಜ್ಯದಿಂದ ಸ್ಪರ್ಧೆ ಮಾಡುತ್ತಾರೆ ಎಂಬುದು ಇನ್ನು ತೀರ್ಮಾನವಾಗಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಡಬಲ್ ಗೇಮ್; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು
Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್
Hubli: ಹಣಕಾಸು ಆಯೋಗದ ಅನ್ಯಾಯದ ಬಗ್ಗೆ ಬಿಜೆಪಿಯರಿಂದ ಮೌನ: ಸಿದ್ದರಾಮಯ್ಯ ಕಿಡಿ
Hubli: ಜನರ ದಿಕ್ಕು ತಪ್ಪಿಸಲು ಬಿಜೆಪಿಯಿಂದ ವಕ್ಫ್ ಹೋರಾಟ: ಸಿಎಂ ಸಿದ್ದರಾಮಯ್ಯ
By Election: ಶಿಗ್ಗಾವಿ ಸಮರ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಮುಖಂಡರ ಸಭೆ
MUST WATCH
ಹೊಸ ಸೇರ್ಪಡೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.