![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 5, 2024, 6:03 PM IST
ಹುಬ್ಬಳ್ಳಿ: ರಾಜ್ಯದಲ್ಲಿ ತೀವ್ರ ಬರ ಆವರಿಸಿದ್ದು, ರಾಜ್ಯ ಸರ್ಕಾರ ಮೇ 8ರಿಂದ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದರು.
ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲೇ ಕಾಲಹರಣ ಮಾಡುತ್ತಿದೆ. ಅದನ್ನು ಹೊರತುಪಡಿಸಿ ಬರ ಪರಿಹಾರದಲ್ಲಿ ಯಾವುದೇ ಕ್ರಮವಹಿಸಿಲ್ಲ. ಇನ್ನಾದರೂ ಜಾನುವಾರುಗಳಿಗೆ ಆಹಾರ ಕಿಟ್, ಮೇವು ಬ್ಯಾಂಕ್ ಸ್ಥಾಪಿಸಬೇಕು. ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಜಾನುವಾರು ಶಿಬಿರ ನಡೆಸಬೇಕು. ತಾಲೂಕು ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚಿಸಬೇಕು. ಆದರೆ ಇದಕ್ಕೆಲ್ಲ ಜಿಲ್ಲಾಧಿಕಾರಿ ಬಳಿ ಹಣವೇ ಇವಲ್ಲ. ಇದು ಕಾಂಗ್ರೆಸ್‌ನ ನೀತಿ ಆಗಿದೆ ಎಂದು ಕುಟುಕಿದರು.
6-7 ತಿಂಗಳಿನಿಂದ ವೃದ್ಧಾಪ್ಯ, ಸಂಧ್ಯಾ ಸುರಕ್ಷಾ, ಭಾಗ್ಯಲಕ್ಷ್ಮಿ, ವಿಧವಾ ವೇತನ ನೀಡಿಲ್ಲ. ಸರ್ಕಾರ ಸಂಪೂರ್ಣ ವಿಫಲವಾಗಿದೆ. ಸರ್ಕಾರದ ಗ್ಯಾರಂಟಿ ಸುಸ್ಥಿರ ಗ್ಯಾರಂಟಿ ಇಲ್ಲದ ಮರಣ ಶಾಸನವಾಗಿದೆ ಎಂದು ಹರಿಹಾಯ್ದರು.
ರಾಜ್ಯದಲ್ಲಿನ ಸರ್ಕಾರವು ತುಷ್ಟೀಕರಣದ ಪರಾಕಾಷ್ಠೆ ತಲುಪಿದೆ. ನೇಹಾ ಹಿರೇಮಠ ಹತ್ಯೆ ಪ್ರಕರಣದಲ್ಲೂ ಅದನ್ನೇ ಮಾಡಿತು. ಈ ಚುನಾವಣೆಯಲ್ಲಿ ಇದನ್ನು ಸಾಧಿಸಲು ಹೊರಟಿದೆ ಎಂದು ಆರೋಪಿಸಿದರು.
ತಾಂತ್ರಿಕ ಸಮಸ್ಯೆ ಸರಿಪಡಿಸಿ ಆದಷ್ಟು ಬೇಗ ಅಂಕೋಲಾ ರೈಲು ಮಾರ್ಗಕ್ಕೆ ಒತ್ತು ಕೊಡಲಾಗುವುದು ಹಾಗೂ ಬೇಲೇಕೇರಿ ಬಂದರು ನಿರ್ಮಾಣ ಮಾಡಲಾಗುವುದು. ಪಕ್ಷವು ಕಳಸಾ ಬಂಡೂರಿ ಯೋಜನೆ ಅನುಷ್ಠಾನಕ್ಕೆ ಬದ್ಧವಾಗಿದ್ದು, ಆದಷ್ಟು ಬೇಗ ವೈಲ್ಡ್ ಲೈಫ್ ಕ್ಲಿಯರನ್ಸ್ ಕೊಡಿಸಿ ಸಮಸ್ಯೆ ಬಗೆಹರಿಸಲಾಗುವುದು ಎಂದರು.
ಕಾಂಗ್ರೆಸ್ ನಿಮ್ಮ ಪಿಎಂ ಅಭ್ಯರ್ಥಿ ಹೆಸರು ಘೋಷಿಸಿ. ಈ ಚುನಾವಣೆಯಲ್ಲಿ ಅದು ಸ್ಪರ್ಧಿಸಿದ್ದೆ 232 ಸ್ಥಾನಕ್ಕೆ. ಅದು ನಾಯಕತ್ವ ಇಲ್ಲದ, ಕನಸಿನಲ್ಲೇ ತುಪ್ಪ ತಿನ್ನುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದರು.
ಶಹಜಾದೆ ಯುಪಿ ಬಿಟ್ಟು ಕೇರಳಕ್ಕೆ ಹೋಗಿದ್ದರು. ಈಗ ಮತ್ತೆ ರಾಯಬರೇಲಿಗೆ ಹೋಗಿದ್ದಾರೆ. ರಾಹುಲ್ ಗಾಂಧಿ ಟೂರಿಂಗ್ ಟಾಕೀಸ್ ಇದ್ದ ಹಾಗೆ. ಮುಸ್ಲಿಂ ಲೀಗ್‌ನ ಪ್ರಣಾಳಿಕೆ ರೀತಿ ಕಾಂಗ್ರೆಸ್‌ನದ್ದಾಗಿದೆ. ಅದರದು ನಕ್ಸಲ್‌ವಾದದ ಮಾನಸಿಕತೆ ಆಗಿದೆ ಎಂದರು.
ರೈತರ ಸಮಸ್ಯೆಗಳನ್ನು ಬಗೆಹರಿಸಲು ಸ್ವಾಮಿನಾಥನ್ ವರದಿ ಜಾರಿ ಬಿಜೆಪಿಯಿಂದ ಮಾತ್ರ ಸಾಧ್ಯವೆಂದು ಅವರೇ ಟ್ವೀಟ್ ಮಾಡಿದ್ದಾರೆ. ಮತದಾರರು ಮೇ 7ರಂದು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ಆಗಮಿಸಿ ಮತ ಚಲಾವಣೆ ಮಾಡಬೇಕು ಎಂದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.