CBI ಕೇವಲ ಬುರುಡೆ..: ಜೈನ ಮುನಿ ಪ್ರಕರಣದಲ್ಲಿ ಬಿಜೆಪಿ ನಾಯಕರ ವಿರುದ್ಧ ಮುತಾಲಿಕ್ ಕಿಡಿ
Team Udayavani, Jul 11, 2023, 2:55 PM IST
ಹುಬ್ಬಳ್ಳಿ: ಕಾಮಕುಮಾರ ನಂದಿ ಸ್ವಾಮೀಜಿ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸುತ್ತಿದ್ದಾರೆ. ಆದರೆ, ಸಿಬಿಐ ಕೇವಲ ಬುರುಡೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಹಿಂದೂಗಳ ಹತ್ಯೆ ಪ್ರಕರಣಗಳನ್ನು ಸಿಬಿಐಗೆ ಕೊಟ್ಟರು, ನಂತರ ಏನಾಯ್ತು? 22 ಪ್ರಕರಣಗಳಿಗೆ ನ್ಯಾಯ ಸಿಕ್ಕಿದೆಯೇ ಎಂದು ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್ ಪ್ರಶ್ನಿಸಿದ್ದಾರೆ.
ಇಲ್ಲಿನ ವರೂರು ನವಗ್ರಹ ತೀರ್ಥಕ್ಷೇತ್ರದ ಶ್ರೀ ಗುಣಧರ ನಂದಿ ಸ್ವಾಮೀಜಿ ಅವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೇಶ್ ಮೇಸ್ತಾ ಪ್ರಕರಣ ಯಾವ ಹಂತದಲ್ಲಿದೆ? ಬಿಜೆಪಿಯವರು ಇದೀಗ ಸಿಬಿಐಗೆ ವಹಿಸಿ ಎಂದು ಹೇಳುತ್ತಿದ್ದಾರೆ. ಇವರೇನು ಸಾಚಾಗಳಾ? ರಾಜಕಾರಣಿಗಳು ನಿರ್ಲಜ್ಜರು. ನಾನು ಹಿಂದೂತ್ವ ಉಳಿಸಲು ರಾಜಕಾರಣಕ್ಕೆ ಬಂದಿದ್ದೇನೆ. ರಾಜಕಾರಣ ಮಾಡಲಿಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಹಿಂದೂ ವಿರೋಧಿ ವಾತಾವರಣ ಸೃಷ್ಟಿಯಾಗಿದೆ. ಆತಂಕ ಕೂಡಾ ಶುರುವಾಗಿದೆ. ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಆತಂಕ ಇತ್ತು. ಬಿಜೆಪಿ ಇದ್ದಾಗ ಸುರಕ್ಷಿತ ಏನಿಲ್ಲ. ಅವಾಗಲೂ ಗೋ ಹತ್ಯೆ, ಹಿಂದೂ ಕಾರ್ಯಕರ್ತರು ಹತ್ಯೆ ಆಗಿದೆ. ಇಂತಹ ಪ್ರಕರಣಗಳ ಬಗ್ಗೆ ಮಾತನಾಡಲು ಅವರಿಗೆ ನೈತಿಕತೆ ಇಲ್ಲ. ಇವರು ಹಿಂದೂ ಕಾರ್ಯಕರ್ತರ ಜೊತೆ ಗಟ್ಟಿಯಾಗಿ ನಿಂತಿದ್ದರೆ ಅವರನ್ನು ತಲೆ ಮೇಲೆ ಹೊತ್ತುಕೊಳ್ಳುತ್ತಿದ್ದೆವು. ಇದಕ್ಕಾಗಿ ನಿಮ್ಮನ್ನು ಕರ್ನಾಟಕದಲ್ಲಿ ನೆಲಸಮ ಮಾಡಿದ್ದಾರೆ. ಸತ್ಯಶೋಧನೆ ಹೆಸರಲ್ಲಿ ಕಾಂಗ್ರೆಸ್ ಮೇಲು ಹಾಕುತ್ತೀರಿ. ಈ ಪ್ರಕರಣಗಳನ್ನು ಸುಮ್ಮನೆ ಬಿಡುವುದಿಲ್ಲ. ಸರಕಾರಕ್ಕೆ ತಕ್ಕ ಪಾಠ ಕಲಿಸುತ್ತೇವೆ ಎಂದು ಗುಡುಗಿದರು.
ಇದನ್ನೂ ಓದಿ:Mount Everest ನೋಡಲು ಹೋದವರ ಹೆಲಿಕಾಪ್ಟರ್ ಪತನ: ಐವರ ಮೃತದೇಹ ಪತ್ತೆ
ಮಠದಲ್ಲಿ ಒಬ್ಬರೇ ಇರುತ್ತಿದ್ದರು. ಹಿರೇಖೋಡಿಯಿಂದ ಎರಡು ಕಿಲೋಮೀಟರ್ ದೂರ ಇದೆ. ಒಂಟಿತನ ನೋಡಿ ವ್ಯವಸ್ಥಿತವಾಗಿ ಕೊಲೆ ಮಾಡಿದ್ದಾರೆ. ಘಟನೆಯ ಸಂಪೂರ್ಣ ಮಾಹಿತಿಯನ್ನು ಸರ್ಕಾರ ಹೊರ ಹಾಕಬೇಕು. ಇದರ ಹಿಂದೆ ಹಣದ ಕಾರಣ ಇಲ್ಲ, ಬೇರೆ ಏನೋ ಷಡ್ಯಂತ್ರ ಇದೆ. ಕರ್ನಾಟಕ ಪೊಲೀಸರು ಕೇವಲ ನಾಲ್ಕು ಗಂಟೆಯಲ್ಲಿ ಬಂಧಿಸಿದ್ದಾರೆ. ಉತ್ತರ ಪ್ರದೇಶ ಮಾದರಿಯಲ್ಲಿ ಮೂರು ಆರೋಪಿಗಳ ಮನೆಗೆ ಬುಲ್ಡೋಜರ್ ಹತ್ತಿಸಬೇಕು. ಕೊಲೆಗಾರರದ್ದು ತಾಲಿಬಾನ್ ಮನಸ್ಥಿತಿ. ಇದರಲ್ಲಿ ಮುಚ್ಚು ಮರೆ ಮಾಡಿದರೆ ದೇಶಕ್ಕೆ ಅಪಾಯಕಾರಿ. ಕಾಂಗ್ರೆಸ್ ಬಿಜೆಪಿ ಜೆಡಿಎಸ್ ಎಲ್ಲರೂ ಬಾಯಿ ಮುಚ್ಚಿ. ತನಿಖೆಗೆ ಮುಕ್ತ ಅವಕಾಶ ಕೊಡಬೇಕು ಎಂದು ಪ್ರಮೋದ್ ಮುತಾಲಿಕ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.