ಬಕ್ರೀದ್; ಈದ್ಗಾ ಮೈದಾನಗಳಲಿ ಪ್ರಾರ್ಥನೆ ನಿಷೇಧ
ಮುಸ್ಲಿಂ ಮುಖಂಡರ ಜತೆ ವಿಡಿಯೋ ಸಂವಾದ |ಕೋವಿಡ್ ಮುನ್ನೆಚ್ಚರಿಕಾ ಕ್ರಮ ಪಾಲನೆಗೆ ಸೂಚನೆ
Team Udayavani, Jul 18, 2021, 9:36 PM IST
ಹುಬ್ಬಳ್ಳಿ: ಕೋವಿಡ್ ಸೋಂಕು ತಗ್ಗಿದ್ದರೂ 3ನೇ ಅಲೆ ತಡೆಗಟ್ಟುವ ದೃಷ್ಟಿಯಿಂದ ಎಲ್ಲರೂ ಎಚ್ಚರಿಕೆ ವಹಿಸಬೇಕೆಂದು ಉಪವಿಭಾಗಾಧಿಕಾರಿ ಗೋಪಾಲಕೃಷ್ಣ ಹೇಳಿದರು.
ತಹಶೀಲ್ದಾರ್ ಕಾರ್ಯಾಲಯದಲ್ಲಿ ಶನಿವಾರ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಮುಸ್ಲಿಂ ಮುಖಂಡರ ಜೊತೆ ವಿಡಿಯೋ ಸಂವಾದದ ಮೂಲಕ ಅವರು ಮಾತನಾಡಿದರು. ಬಕ್ರೀದ್ ಹಬ್ಬದಂದು ಮಸೀದಿಗಳಲ್ಲಿ ಸ್ಯಾನಿಟೈಸ್ ಮಾಡಬೇಕು. ಪ್ರಾರ್ಥನೆ ವೇಳೆ ಪ್ರತಿಯೊಬ್ಬರ ನಡುವೆ ಆರು ಅಡಿ ಸಾಮಾಜಿಕ ಅಂತರ ಇರಬೇಕು. ಹಬ್ಬದಂದು ಮಸೀದಿಗಳಲ್ಲಿ ಪ್ರಾರ್ಥನೆ ಮಾಡಲು ಒಂದು ಬಾರಿಗೆ 50 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಸರದಿಯಂತೆ ಪ್ರಾರ್ಥನೆ ಮಾಡಬಹುದಾಗಿದೆ. ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ನಿಷೇಧಿಸಲಾಗಿದೆ.
60 ವಯಸ್ಸು ಮೇಲ್ಪಟ್ಟ ಹಾಗೂ 10 ವರ್ಷದ ಕೆಳಗಿನವರಿಗೆ ಮಸೀದಿಗಳಲ್ಲಿ ಪ್ರಾರ್ಥಿಸಲು ಅವಕಾಶವಿರುವುದಿಲ್ಲ. ಅವರು ಮನೆಯಲ್ಲಿಯೇ ಪ್ರಾರ್ಥಿಸಬೇಕು. ಮಸೀದಿಗೆ ಬರುವ ಮುನ್ನ ದೇಹದ ತಾಪಮಾನ ಪರೀಕ್ಷೆ ಮಾಡಿಸಿರಬೇಕು. ಹಸ್ತಲಾಘವ ಮತ್ತು ಆಲಿಂಗನ ನಿಷೇಧಿಸಲಾಗಿದೆ. ಆಸ್ಪತ್ರೆ, ಶಾಲೆ-ಕಾಲೇಜು ಆವರಣ, ಆಟದ ಮೈದಾನ, ಫುಟ್‌ಪಾತ್ ಹಾಗೂ ಉದ್ಯಾನವನದ ಒಳಗಡೆ ಮತ್ತು ಹೊರಗಡೆ ಬಲಿದಾನ ಮಾಡುವುದನ್ನು ನಿಷೇಧಿಸಲಾಗಿದೆ ಎಂದರು. ಕೋವಿಡ್ ನಿಯಮಗಳ ಪಾಲನೆ ಜೊತೆಗೆ ಈದ್ಗಾ ಮೈದಾನದಲ್ಲಿ 50 ಜನರಿಗೆ ಪ್ರಾರ್ಥನೆ ಮಾಡಲು ಅವಕಾಶ ನೀಡಬೇಕೆಂದು ಅಂಜುಮನ್ ಸಂಸ್ಥೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಮನವಿ ಮಾಡಿಕೊಂಡರು.
ಇದಕ್ಕೆ ಪ್ರತಿಕ್ರಿಯಿಸಿದ ಉಪವಿಭಾಗಾಧಿಕಾರಿ, ಸಾಮೂಹಿಕವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾರ್ಥಿಸುವುದನ್ನು ನಿಷೇಧಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿಯವರೊಂದಿಗೆ ಚರ್ಚಿಸುತ್ತೇನೆ. ಸರ್ಕಾರದ ಆದೇಶ ಪ್ರಕಾರ ರಾಜ್ಯಾದ್ಯಂತ ಈದ್ಗಾ ಮೈದಾನದಲ್ಲಿ ಪಾರ್ಥನೆ ಸಲ್ಲಿಸಲು ಅವಕಾಶವಿಲ್ಲ ಎಂದು ಹೇಳಿದರು. ಶಹರ ತಹಶೀಲ್ದಾರ್ ಶಶಿಧರ ಮಾಡ್ಯಾಳ, ಅಂಜುಮನ್ ಸಂಸ್ಥೆ ಅಧ್ಯಕ್ಷ ಯೂಸಫ್ ಸವಣೂರು, ಉಪಾಧ್ಯಕ್ಷ ಅಲ್ತಾಫ್ ಕಿತ್ತೂರು ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
MUST WATCH
ಹೊಸ ಸೇರ್ಪಡೆ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫನ್‌ರೈಡ್
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.