ಬಿತ್ತನೆ ಪೂರ್ವ ಚಟುವಟಿಕೆ ಆರಂಭ
Team Udayavani, May 25, 2018, 5:41 PM IST
ಬೆಳಗಾವಿ: ತಾಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ ಇದುವರೆಗೆ ಉತ್ತಮ ಮಳೆಯಾಗಿದ್ದು ರೈತರು ಹೊಲದಲ್ಲಿ ಬಿತ್ತನೆ ಪೂರ್ವ ಚಟುವಟಿಕೆಗಳನ್ನು ಪ್ರಾರಂಭಿಸಿದ್ದು, ಭೂಮಿ ಸಿದ್ಧತೆ ಕಾರ್ಯ, ಮಣ್ಣಿಗೆ ಸಾವಯವ ಗೊಬ್ಬರ ಕೂಡಿಸುವ ಕಾರ್ಯಗಳು ಭರದಿಂದ ಸಾಗಿವೆ.
ತಾಲೂಕಿನಲ್ಲಿ ಇದುವರೆಗೆ ವಾಡಿಕೆಯಂತೆ 112 ಮಿಮೀ ಮಳೆ ಆಗಬೇಕಾಗಿದ್ದು, ಇಲ್ಲಿಯವರೆಗೆ 101 ಮಿಮೀ ಮಳೆಯಾಗಿದೆ. ಮುಂದಿನ ದಿನಗಳಲ್ಲಿ ಉತ್ತಮ ಮಳೆಯ ನಿರೀಕ್ಷೆಯಿಂದ ತಾಲೂಕಿನ ಕೃಷಿ ಇಲಾಖೆಯು ರೈತರಿಗೆ ಬೇಕಾಗುವ ಬಿತ್ತನೆ ಬೀಜ, ರಸಗೊಬ್ಬರ, ಲಘು ಪೋಷಕಾಂಶ, ಸಾವಯವ
ಗೊಬ್ಬರ, ಮುಂತಾದವುಗಳನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಮಾಡಿ ವಿತರಿಸುತ್ತಿದೆ.
ಬೆಳಗಾವಿ ತಾಲೂಕಿನಲ್ಲಿ ರೈತರಿಗೆ ಬೀಜ ಖರೀದಿಸಲು ಅನುಕೂಲವಾಗುವಂತೆ ಒಟ್ಟು 12 ಬೀಜ ವಿತರಣಾ ಕೇಂದ್ರಗಳನ್ನು ತೆಗೆಯಲಾಗಿದೆ. ತಾಲೂಕಿನಲ್ಲಿ 48,050 ಹೆಕ್ಟೇರ್ ಮುಂಗಾರು ಬಿತ್ತನೆ ಗುರಿಯಿದ್ದು ಭತ್ತ, ಸೋಯಾಬೀನ್ ಪ್ರಮುಖ ಬೆಳೆಯಾಗಿದೆ. ರೈತರಿಗೆ ಅನುಕೂಲವಾಗುವಂತೆ ಸೋಯಾಬೀನ್ 4000 ಕ್ವಿಂ, ಭತ್ತ 350 ಕ್ವಿಂ, ಬೀಜಗಳನ್ನು 12 ವಿತರಣಾ ಕೇಂದ್ರಗಳ ಮೂಲಕ
ರಿಯಾಯತಿ ದರದಲ್ಲಿ ನೀಡಲಾಗುತ್ತಿದೆ.
ಬೆಳಗಾವಿಯ ಶಿವಾಜಿ ನಗರದಲ್ಲಿ ರೈತ ಸಂಪರ್ಕ ಕೇಂದ್ರ, ಕಾಕತಿ ಪಿಕೆಪಿಎಸ್ ಸೊಸೈಟಿಯಲ್ಲಿ ರೈತ ಸಂಪರ್ಕ ಕೇಂದ್ರ-ಕಾಕತಿ, ಉಚಗಾಂವ ರೈತ ಸಂಪರ್ಕ ಕೇಂದ್ರ, ಬೆಳಗುಂದಿ ಹಾಗೂ ನಂದಿಹಳ್ಳಿ ಪಿ.ಕೆ.ಪಿ.ಎಸ್, ಹಿರೇಬಾಗೇವಾಡಿ ಪಿ.ಕೆ.ಪಿ.ಎಸ್, ಹಲಗಾ ಪಿ.ಕೆ.ಪಿ.ಎಸ್, ಬೆಂಡಿಗೇರಿ ಪಿ.ಕೆ.ಪಿ.ಎಸ್, ಬಡಾಲ ಅಂಕಲಗಿ, ಮಾರೀಹಾಳ ಪಿ.ಕೆ.ಪಿ.ಎಸ್ ಹಾಗೂ, ಮೋದಗಾ ಪಿ.ಕೆ.ಪಿ.ಎಸ್ ಕೇಂದ್ರಗಳಲ್ಲಿ ಬೀಜ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರೈತರು ತಮ್ಮ ಮಣ್ಣಿನ ಫಲವತ್ತತೆ ಹೆಚ್ಚಿಸಲು ಹಾಗೂ ಉಪಯೋಗ ಮಾಡಿದ ರಸಗೊಬ್ಬರ ಬೆಳೆಗಳಿಗೆ ಸಮರ್ಪಕವಾಗಿ ತಲುಪುವಂತೆ ಮಾಡಲು ಜೈವಿಕ ಗೊಬ್ಬರ ಹಾಗೂ ಲಘು ಪೋಷಕಾಂಶಗಳಾದ ಜಿಂಕ್, ಬೋರಾಕ್ಸ ಹುಡಿ ದ್ರವ ರೂಪದ ಗೊಬ್ಬರಗಳನ್ನು ತಪ್ಪದೇ ಬಳಸಬೇಕು ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.