ಬಾಣಂತಿ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ 


Team Udayavani, Aug 29, 2018, 4:27 PM IST

29-agust-21.jpg

ಹುಬ್ಬಳ್ಳಿ: ವೈದ್ಯರ ನಿರ್ಲಕ್ಷ್ಯದಿಂದಲೇ ಬಾಣಂತಿ ಮತೃಪಟ್ಟಿದ್ದಾಳೆಂದು ಆರೋಪಿಸಿ ಕುಟುಂಬಸ್ಥರು ಮಂಗಳವಾರ ಬೆಳಿಗ್ಗೆ ಇಲ್ಲಿನ ಮಾಧವಪುರದ ಸಿಟಿ ಕ್ಲಿನಿಕ್‌ ಎದುರು ಪ್ರತಿಭಟನೆ ನಡೆಸಿದರು. ಇಲ್ಲಿನ ಬಮ್ಮಾಪುರ ಓಣಿ ನಿವಾಸಿ ಬಾಣಂತಿ ನಿಖಿತಾ ಭರತ ಗೋಟೆಕರ (23) ಎಂಬುವರೆ ಮೃತಪಟ್ಟವರು. ನಿಖಿತಾ ಅವರು ಸೋಮವಾರ ಹೆರಿಗೆಗೆಂದು ಸಿಟಿ ಕ್ಲಿನಿಕ್‌ ಆಸ್ಪತ್ರೆಗೆ ದಾಖಲಾಗಿದ್ದರು. ಸಂಜೆ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆಯಾಗಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಆದರೆ ಹೆರಿಗೆ ನಂತರ ವಿಪರೀತ ರಕ್ತಸ್ರಾವವಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಮೃತರ ಸಂಬಂಧಿಕರು ಆರೋಪಿಸಿದರು.

ನಿಖಿತಾಳ ಹೆರಿಗೆ ನಂತರ ತೀವ್ರ ರಕ್ತಸ್ರಾವವಾಗಿತ್ತು. ವೈದ್ಯರ ಸಲಹೆಯಂತೆ ಸುಮಾರು 16 ಬಾಟಲಿ ರಕ್ತ ತಂದು ಕೊಟ್ಟಿದ್ದೆವು. ಆದರೆ, ತಡರಾತ್ರಿ 3:00 ಗಂಟೆ ಸುಮಾರಿಗೆ ಬಾಣಂತಿ ನಿಖೀತಾ ಮೃತಪಟ್ಟಿದ್ದಾಳೆಂದು ಹೇಳಿದರು. ನಮ್ಮ ತೀವ್ರ ಆಕ್ಷೇಪದ ನಂತರ ಇನ್ನು ಜೀವಂತವಾಗಿದ್ದಾಳೆ. ತುರ್ತು ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡುವುದಾಗಿ ಹೇಳಿದರಾದರೂ, ಬೆಳಗಿನ ಜಾವ 4:00ಗಂಟೆಗೆ ಮೃತಪಟ್ಟಿದ್ದಾಗಿ ಹೇಳಿದರು. ವೈದ್ಯರ ನಿರ್ಲಕ್ಷ್ಯದಿಂದ ಈ ರೀತಿ ಆಗಿದೆ ಎಂಬುದು ನಿಖಿತಾ ಕುಟುಂಬಸ್ಥರ ಆರೋಪ. ಮೃತಳ ಪತಿ ಭರತ ಹಾಗೂ ತಂದೆ-ತಾಯಿ, ಸಹೋದರಿ ಸೇರಿದಂತೆ ಕುಟುಂಬಸ್ಥರ ಆಕ್ರಂದನ ಮನ ಕಲಕುವಂತ್ತಿತ್ತು. ಉಪನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿ ಪರಿಸ್ಥಿತಿ ತಿಳಿಗೊಳಿಸಿದರು.

ನಿಖಿತಾ ದೇಹ ಚಿಕಿತ್ಸೆಗೆ ಸ್ಪಂದಿಸಲಿಲ್ಲ: ಡಾ|ವಿದ್ಯಾ 
ಬಾಣಂತಿ ಸಾವಿಗೆ ನಾವು ಕಾರಣವಲ್ಲ. ಅವರನ್ನು ಉಳಿಸಿಕೊಳ್ಳಲು ಬಹಳ ಶ್ರಮಿಸಿದೆವು. ಆದರೆ ಫಲಕಾರಿಯಾಗಲಿಲ್ಲ. ನಿಖೀತಾ ದೇಹ ಚಿಕಿತ್ಸೆಗೆ ಸ್ಪಂದಿಸಲಿಲ್ಲವೆಂದು ಸಿಟಿ ಕ್ಲಿನಿಕ್‌ ಆಸ್ಪತ್ರೆ ವೈದ್ಯೆ ಡಾ| ವಿದ್ಯಾ ಜೋಶಿ ಸ್ಪಷ್ಟಪಡಿಸಿದರು. ಅತಿಯಾದ ರಕ್ತಸ್ರಾವ ಉಂಟಾಗಿ ರಕ್ತದೊತ್ತಡ ಕುಸಿತವಾಯಿತು. ಸುಮಾರು 14 ಬಾಟಲ… ರಕ್ತ ಪೂರೈಸಿದರೂ ಬಿಪಿ ಕ್ಷೀಣಿಸುವುದು ನಿಲ್ಲಲಿಲ್ಲ. ಕೊನೆಗೆ ಗರ್ಭಕೋಶ ತೆಗೆದ ಮೇಲೂ ರಕ್ತಸ್ರಾವ ನಿಲ್ಲುತ್ತದೆ ಎಂದು ಭಾವಿಸಿದೆವು. ಆದರೂ ರಕ್ತಸ್ರಾವ ನಿಲ್ಲಲಿಲ್ಲ. ಬೆಳಿಗ್ಗೆ 9:10 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ. ನಿಖಿತಾಳಿಗೆ ಹೃದಯ ಸಂಬಂಧಿ ಸೇರಿದಂತೆ ದೈಹಿಕ ಸಮಸ್ಯೆ ಇರಲಿಲ್ಲ. ಸಂಪೂರ್ಣ ಆರೋಗ್ಯವಾಗಿದ್ದರು. ಹೆರಿಗೆಯಾದ ನಂತರ ಬಿಪಿ ಇಳಿತದಿಂದ ಸಮಸ್ಯೆಯಾಗಿದೆ. ಈ ಕುರಿತು ಪ್ರತಿ ಹಂತದಲ್ಲೂ ಚಿಕಿತ್ಸೆಗಳ ಬಗ್ಗೆ ಸಂಬಂಧಿಗಳನ್ನು ಐಸಿಯುಗೆ ಕರೆಯಿಸಿ ಸಂಪೂರ್ಣ ವಿವರ ನೀಡಲಾಗಿತ್ತು. ಪ್ರತಿ ಹಂತದ ಚಿಕಿತ್ಸೆ ವಿಧಾನಗಳ ವಿಡಿಯೋ ರಿಕಾರ್ಡಿಂಗ್‌ ದಾಖಲೆ ನಮ್ಮ ಬಳಿಯಿದೆ. ಅವರ ಒಪ್ಪಿಗೆ ಮೇರೆಗೆ ಚಿಕಿತ್ಸೆ ಮುಂದುವರಿಸಲಾಗಿತ್ತು. ಇಂಥ ಪ್ರಕರಣಗಳು ಲಕ್ಷಕ್ಕೆ 200 ಜನರಲ್ಲಿ ಕಂಡು ಬರುತ್ತದೆ. ಇವರನ್ನು ಉಳಿಸಿಕೊಳ್ಳಲಾಗಲಿಲ್ಲ ಎಂಬ ನೋವು ನಮಗಿದೆ. ಶವಪರೀಕ್ಷೆಯ ವರದಿ ನಂತರವೇ ಇದೆಲ್ಲ ಸ್ಪಷ್ಟವಾಗಲಿದೆ ಎಂದರು.

ಟಾಪ್ ನ್ಯೂಸ್

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

1-aaccc

PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

CM-siddu

Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ

b s yediyurappa

By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್‌ ವೈ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Suilla

Punjalkatte: ಬೈಕ್‌ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.