ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಸಿದ್ಧತೆ; ಲಾಂಛನ ಬಿಡುಗಡೆ
Team Udayavani, Feb 22, 2020, 11:18 AM IST
ಧಾರವಾಡ: ಜಿಲ್ಲಾಡಳಿತ ಹಾಗೂ ರಾಜ್ಯ ಸರಕಾರಿ ನೌಕರರ ಸಂಘದ ಆಶ್ರಯದಲ್ಲಿ ಫೆ. 28, 29 ಮತ್ತು ಮಾ. 1ರಂದು ಜರುಗಲಿರುವ ರಾಜ್ಯ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಆಯೋಜನೆ ಸಿದ್ಧತೆ ಭರದಿಂದ ಸಾಗಿದೆ ಎಂದು ಕ್ರೀಡಾಕೂಟ ಸಮಿತಿ ಅಧ್ಯಕ್ಷರಾದ ಡಿಸಿ ದೀಪಾ ಚೋಳನ್ ಹೇಳಿದರು.
ಡಿಸಿ ಕಚೇರಿ ಸಭಾಂಗಣದಲ್ಲಿ ಜರುಗಿದ ವಿವಿಧ ಸಮಿತಿಗಳ ಸಭೆಯಲ್ಲಿ ಕ್ರೀಡಾಕೂಟ ಲಾಂಛನ ಬಿಡುಗಡೆಗೊಳಿಸಿ ಅವರು ಮಾತನಾಡಿದರು. 300ಕ್ಕೂ ಹೆಚ್ಚು ಅಧಿಕಾರಿಗಳು ವಿವಿಧ ಸಮಿತಿಗಳ ಮೂಲಕ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ವಸತಿ, ಸಾರಿಗೆ, ನಿರ್ಣಾಯಕರು, ವೇದಿಕೆ, ನೋಂದಣಿ, ಆಹಾರ ಸೇರಿದಂತೆ ಸುಮಾರು 15ಕ್ಕೂ ಹೆಚ್ಚು ಸಮಿತಿಗಳನ್ನು ರಚಿಸಲಾಗಿದೆ. ಕಳೆದ ಒಂದು ತಿಂಗಳಿಂದ ವಿವಿಧ ಸಮಿತಿ ಸದಸ್ಯರು ತಮಗೆ ವಹಿಸಿದ ಕೆಲಸಗಳನ್ನು ಅಚ್ಚುಕಟ್ಟಾಗಿ ಮಾಡುತ್ತಿದ್ದಾರೆ. ಹೊರ ಜಿಲ್ಲೆಗಳಿಂದ ಆಗಮಿಸುವ ಕ್ರೀಡಾಪಟುಗಳಿಗೆ ಊಟ, ವಸತಿ, ಸಾರಿಗೆ ಹಾಗೂ ಆಟದ ಮೈದಾನಗಳ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಯಾವುದೇ ಕೊರತೆ ಉಂಟಾಗದಂತೆ ಕ್ರಮ ವಹಿಸಲಾಗಿದೆ ಎಂದರು.
ನೌಕರರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಫ್. ಸಿದ್ದನಗೌಡರ ಮಾತನಾಡಿ, ರಾಜ್ಯ ಕ್ರೀಡಾಕೂಟದ ಸ್ಪರ್ಧೆಗಳನ್ನು ಕೆಸಿಡಿ ಮೈದಾನ, ಆರ್.ಎನ್. ಶೆಟ್ಟಿ ಕ್ರೀಡಾಂಗಣ, ಕೃಷಿ ವಿವಿ, ಎಸ್‌ಡಿಎಂ, ಜೆಎಸ್ಸೆಸ್ ಮಹಾವಿದ್ಯಾಲಯ ಸೇರಿದಂತೆ ಸುಮಾರು ಹತ್ತು ಸ್ಥಳಗಳಲ್ಲಿ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಲೂರು ಭವನ, ಕವಿಸಂ, ಡಯಟ್ ಸೇರಿದಂತೆ ಏಳು ಸ್ಥಳಗಳಲ್ಲಿ ಆಯೋಜಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಕ್ರೀಡಾಕೂಟದ ದಿನಾಂಕ, ಸ್ಥಳ, ಸಂಯೋಜಕರ ವಿವರಗಳನ್ನು ಆಯಾ ಜಿಲ್ಲಾಧ್ಯಕ್ಷರಿಗೆ ನೀಡಲಾಗಿದೆ ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ತಹಶೀಲ್ದಾರ್ ಸಂತೋಷಕುಮಾರ್ ಬಿರಾದಾರ, ನೌಕರರ ಸಂಘದ ಮಾಜಿ ಅಧ್ಯಕ್ಷ ಬಸವರಾಜ ಗುರಿಕಾರ, ಜಗದೀಶಗೌಡ ಪಾಟೀಲ, ಬಿ.ವಿ. ಶಿವರುದ್ರಪ್ಪ, ಶ್ರೀನಿವಾಸ, ಭೂಮಾಪನ ಇಲಾಖೆ ಚೇತನ ಕುಮಾರ, ಎಸ್.ಜಿ. ಸುಬ್ಟಾಪಿರಮಠ, ಪ್ರತಿಭಾರಾಣಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.