ಶೈಕ್ಷಣಿಕ ವರ್ಷಾರಂಭಕ್ಕೆ ಭರದ ಸಿದ್ಧತೆ


Team Udayavani, May 25, 2019, 10:49 AM IST

hub-2

ಹುಬ್ಬಳ್ಳಿ: ಸರಕಾರಿ, ಅನುದಾನಿತ ಹಾಗೂ ಅನುದಾನಿತ ರಹಿತ ಶಾಲೆಗಳಲ್ಲಿ ಪಠ್ಯಪುಸ್ತಕ-ಸಮವಸ್ತ್ರ ವಿತರಣೆ ವಿಳಂಬ ತಪ್ಪಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದ್ದು, 2019-20ನೇ ಸಾಲಿನ ಶೈಕ್ಷಣಿಕ ವರ್ಷಕ್ಕಾಗಿ ಶೇ.85 ಪಠ್ಯಪುಸ್ತಕ ಬಂದಿದ್ದು, ಸಮವಸ್ತ್ರ ಬರಬೇಕಿದೆ.

ಶಾಲೆ ಆರಂಭಕ್ಕೆ ಮುನ್ನವೇ ಎಲ್ಲ ಶಾಲೆಗಳಿಗೆ ಪಠ್ಯಪುಸ್ತಕ ವಿತರಣೆ ಮಾಡಲು ಇಲಾಖೆ ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸಿದೆ. ಈಗಾಗಲೇ ಹುಬ್ಬಳ್ಳಿ ಶಹರ ಹಾಗೂ ಗ್ರಾಮೀಣ ವಿಭಾಗದ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮಕ್ಕಳಿಗೆ ಪಠ್ಯಪುಸ್ತಕ ವಿತರಣೆ ಮಾಡಲಾಗುತ್ತಿದೆ. ಶಹರ ಹಾಗೂ ಗ್ರಾಮೀಣ ವಿಭಾಗದ ಶಾಲೆಗಳಿಗೆ ಕ್ಲಸ್ಟರ್‌ ಅನುಗುಣವಾಗಿ ಪಠ್ಯಪುಸ್ತಕ ವಿತರಣೆ ಮಾಡಲಾಗುತ್ತಿದೆ.

ಶಹರ ವಿಭಾಗ: ಶಹರ ವಿಭಾಗದಲ್ಲಿ ಒಟ್ಟು 12 ಕ್ಲಸ್ಟರ್‌ಗಳಲ್ಲಿ 89 ಪ್ರಾಥಮಿಕ ಶಾಲೆ, 7 ಸರಕಾರಿ ಪ್ರೌಢಶಾಲೆ, ಅನುದಾನಿತ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಾಶಾಲೆ 81, ಅನುದಾನರಹಿತ 144 ಒಟ್ಟು 320 ಶಾಲೆಗಳಿಗೆ ಪಠ್ಯಪುಸ್ತಕ ವಿತರಣೆ ಮಾಡಬೇಕಿದೆ. ಇದರಲ್ಲಿ ಸರಕಾರಿ, ಅನುದಾನಿತ ಶಾಲೆಗಳಿಗೆ ಉಚಿತ ಹಾಗೂ ಅನುದಾನ ರಹಿತ ಶಾಲೆಗಳಿಗೆ ಮಾರಾಟ ಪ್ರಕ್ರಿಯೆ ನಡೆಯಲಿದೆ.

ಈಗಾಗಲೇ ಎಸ್‌ಎಟಿಎಸ್‌ (ಸ್ಟುಡೆಂಟ್ ಅಚೀವ್‌ಮೆಂಟ್ ಟ್ರ್ಯಾಕಿಂಗ್‌ ಸಿಸ್ಟಮ್‌) ಮೂಲಕ ಆಯಾ ಶಾಲೆಗೆ ಬೇಕಾಗುವ ಪುಸ್ತಕದ ಮಾಹಿತಿಯನ್ನು ಕಲೆ ಹಾಕಿದ್ದು, ಅದರಂತೆ ಮಕ್ಕಳಿಗೆ ಪುಸ್ತಕ ವಿತರಣೆ ಮಾಡಲಾಗುತ್ತಿದೆ. ಶಹರ ವಿಭಾಗದಲ್ಲಿ ಒಟ್ಟು 12 ಕ್ಲಸ್ಟರ್‌ಗಳಿದ್ದು, ಎಲ್ಲ ಕ್ಲಸ್ಟರ್‌ಗಳು ಸೇರಿದಂತೆ ಸುಮಾರು 6,06,915 ಎಲ್ಲ ವಿಷಯಗಳ ಪಠ್ಯಪುಸ್ತಕಗಳ ಬೇಡಿಕೆ ಇದ್ದು, ಅದರಲ್ಲಿ ಸರಕಾರಿ ಶಾಲೆಗಳಿಗೆ ಉಚಿತವಾಗಿ ಪೂರೈಸಲು 3,38,689 ಹಾಗೂ ಮಾರಾಟಕ್ಕೆ 2,68,226 ಪಠ್ಯಪುಸ್ತಕಗಳ ಬೇಡಿಕೆ ಇದೆ.

ಸದ್ಯ ಸರಕಾರಿ ಶಾಲೆಗಳಿಗೆ ಉಚಿತವಾಗಿ ಪೂರೈಸಲು ಸುಮಾರು 6 ಲಕ್ಷ ಹಾಗೂ ಮಾರಾಟಕ್ಕೆ 2.50 ಲಕ್ಷ ಪಠ್ಯಪುಸ್ತಕಗಳು ಬಂದಿವೆ. ಇನ್ನುಳಿದ ಉಚಿತ ಹಾಗೂ ಮಾರಾಟಕ್ಕೆ ಬೇಕಾದ ಪಠ್ಯಪುಸ್ತಕಗಳು ಒಂದೆರಡು ದಿನಗಳಲ್ಲಿಯೇ ಬರಲಿವೆ. ಮೇ 31ರೊಳಗೆ ಎಲ್ಲ ಮಕ್ಕಳಿಗೆ ಪಠ್ಯಪುಸ್ತಕ ವಿತರಣೆ ಮಾಡಲು ವ್ಯವಸ್ಥೆ ಮಾಡಲಾಗಿದೆ. ಶಹರ ವಿಭಾಗದಿಂದ ಈಗಾಗಲೇ 2-3 ಕ್ಲಸ್ಟರ್‌ಗಳಿಗೆ ಪುಸ್ತಕ ವಿತರಣೆ ಮಾಡಲಾಗಿದ್ದು, ಇನ್ನುಳಿದ ಕ್ಲಸ್ಟರ್‌ಗಳಿಗೆ ಪಠ್ಯಪುಸ್ತಕ ವಿತರಣೆ ಮಾಡಬೇಕಿದೆ. ಇದರಲ್ಲಿ 3 ಕ್ಲಸ್ಟರ್‌ಗಳು ಉರ್ದು ಮಾಧ್ಯಮದ ಕ್ಲಸ್ಟರ್‌ಗಳಾಗಿವೆ. ಪ್ರತಿದಿನ ಎರಡು ಕ್ಲಸ್ಟರ್‌ಗಳಿಗೆ ಪಠ್ಯಪುಸ್ತಕ ನೀಡಲಾಗುತ್ತಿದೆ.

ಗ್ರಾಮೀಣ ವಿಭಾಗ: ಗ್ರಾಮೀಣ ವಿಭಾಗದಲ್ಲಿ ಬರುವ 12 ಕ್ಲಸ್ಟರ್‌ಗಳಲ್ಲಿ 115 ಸರಕಾರಿ ಪ್ರಾಥಮಿಕ ಶಾಲೆ, 22 ಉರ್ದು ಶಾಲೆ, 13 ಸರಕಾರಿ ಪ್ರೌಢಶಾಲೆ, 7 ಪ್ರಾಥಮಿಕ ಹಾಗೂ 15 ಅನುದಾನಿತ ಪ್ರೌಢಶಾಲೆ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು 63, ಸಮಾಜ ಕಲ್ಯಾಣ ಇಲಾಖೆಯ 3 ಶಾಲೆಗಳಿವೆ.

ಸದ್ಯ ಗ್ರಾಮೀಣ ವಿಭಾಗದ ಶಾಲೆಗಳಿಗೆ ವಿತರಣೆಗೆ 2,99, 136 ಪುಸ್ತಕಗಳ ಬೇಡಿಕೆ ಇದೆ. ಇದರಲ್ಲಿ 2,20,395 ಉಚಿತ ಹಾಗೂ 78741 ಮಾರಾಟಕ್ಕೆ ಪುಸ್ತಕಗಳ ಬೇಡಿಕೆ ಇದೆ. ಸದ್ಯ ಉಚಿತ ವಿತರಣೆಗೆ 2,02,253 ಪಠ್ಯಪುಸ್ತಕಗಳು ಹಾಗೂ ಮಾರಾಟಕ್ಕೆ 63,765 ಪಠ್ಯಪುಸ್ತಕಗಳು ಬಂದಿವೆ. ಇನ್ನುಳಿದ 33,118 ಪಠ್ಯಪುಸ್ತಕಗಳು ಶೀಘ್ರದಲ್ಲಿಯೇ ಬರಲಿದ್ದು ಪಠ್ಯಪುಸ್ತಕದ ಸಮಸ್ಯೆ ಇಲ್ಲವಾಗಿದೆ.

ಶಹರ ಹಾಗೂ ಗ್ರಾಮೀಣಕ್ಕೆ ಸಂಬಂಧಿಸಿದಂತೆ ಕನ್ನಡ ಮಾಧ್ಯಮದಲ್ಲಿ 3 ಶೀರ್ಷಿಕೆಗಳ ಪಠ್ಯಪುಸ್ತಕ, ಉರ್ದು ಮಾಧ್ಯಮದ 3 ಶೀರ್ಷಿಕೆಗಳ ಹಾಗೂ ಮಾರಾಟಕ್ಕೆ ಬೇಕಾದ 5 ಶೀರ್ಷಿಕೆಗಳ ಪಠ್ಯಪುಸ್ತಕಗಳು ಬರಬೇಕಿವೆ.

ಟಾಪ್ ನ್ಯೂಸ್

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

SriLanka ನೌಕಾಪಡೆಯಿಂದ 17 ತಮಿಳುನಾಡಿನ ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

12-google-search

Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?

Jaipur: 13 ಮಂದಿಯನ್ನು ಬಲಿ ಪಡೆದ ದುರಂತದಲ್ಲಿ LPG ಟ್ಯಾಂಕರ್ ಚಾಲಕ ಬದುಕುಳಿದಿದ್ದೇ ರೋಚಕ

ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.