ಕೈ ಭದ್ರಕೋಟೆಯಲ್ಲಿ ಪೂರ್ವಾಪರ ಚರ್ಚೆ

| ಕಮಲೋದಯವೋ, ಕರತಾಡನವೋ | ಅಭಯ ಹಸ್ತಕ್ಕೆ ಕೇಸರಿ ಪಡೆ ಸಮಬಲದ ಸಡ್ಡು

Team Udayavani, May 1, 2019, 10:48 AM IST

hubali-tdy-3..03

ಹುಬ್ಬಳ್ಳಿ: ಕಳೆದೆರಡು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಜೈ ಎಂದಿರುವ ಹು-ಧಾ ಪೂರ್ವ ಕ್ಷೇತ್ರದಲ್ಲೀಗ ಲೋಕಸಭೆ ಚುನಾಣೋತ್ತರದ ಬಲಾಬಲದ ಚರ್ಚೆ ಜೋರಾಗಿದ್ದು, ಕೈ ಭದ್ರಕೋಟೆ ಛಿದ್ರವಾಗಲಿದೆ ಎಂಬುದು ಕೇಸರಿ ಪಡೆ ಲೆಕ್ಕಾಚಾರವಾದರೆ, ತನ್ನ ಅಭ್ಯರ್ಥಿಗೆ ಹೆಚ್ಚಿನ ಲೀಡ್‌ ದೊರೆಯಲಿದೆ ಎಂಬ ಉತ್ಸಾಹ ಕೈ ಪಾಳಯದ್ದಾಗಿದೆ.

ಕಳೆದ ಐದು ವರ್ಷಗಳ ಚುನಾವಣೆ ಫ‌ಲಿತಾಂಶ ನೋಡಿದಾಗ ಹು-ಧಾ ಪೂರ್ವ ಕ್ಷೇತ್ರದ ಮತದಾರರು ಹಸ್ತಕ್ಕೆ ಹೆಚ್ಚು ಒಲವು ತೋರಿರುವುದು ಸ್ಪಷ್ಟವಾಗುತ್ತದೆ. 2013 ಹಾಗೂ 2018 ವಿಧಾನಸಭೆ, 2014 ಲೋಕಸಭೆ ಚುನಾವಣೆಯಲ್ಲಿ ಎರಡು ಪಕ್ಷದ ಅಭ್ಯರ್ಥಿಗಳು ಪಡೆದ ಮತಗಳನ್ನು ನೋಡಿದಾಗ ಕೈ ಅಭ್ಯರ್ಥಿಗೆ ಅದೃಷ್ಟ ಖುಲಾಯಿಸಿದೆ. ಕ್ಷೇತ್ರದಲ್ಲಿ ಹೇಳುವಷ್ಟರ ಮಟ್ಟಿಗೆ ಜೆಡಿಎಸ್‌ ಪ್ರಾಬಲ್ಯ ಹೊಂದಿಲ್ಲ. ಆದರೂ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಒಂದಾಗಿರುವುದು ಮೈತ್ರಿ ಅಭ್ಯರ್ಥಿಗೆ ಹೆಚ್ಚಿನ ಲೀಡ್‌ ದೊರೆಯಲಿದೆ ಎನ್ನುವ ಅಭಿಪ್ರಾಯ ಕ್ಷೇತ್ರದಲ್ಲಿದೆ. 2014ರಲ್ಲಿ ಶೇ. 66.46 ಮತದಾನವಾಗಿದ್ದು, ಈ ಬಾರಿ ಶೇ.71.56 ಮತದಾನವಾದೆ. ಶೇ. 5.01 ಹೆಚ್ಚಿನ ಮತಗಳು ತಮ್ಮ ಅಭ್ಯರ್ಥಿ ಕೈ ಹಿಡಿಯಲಿದೆ ಎನ್ನುವ ಲೆಕ್ಕಾಚಾರ ಉಭಯ ಪಕ್ಷದ ನಾಯಕರಲ್ಲಿದೆ.

ಹಿಂದಿನ ಚುನಾವಣೆ ಬಲಾಬಲ: ಪೂರ್ವ ಕ್ಷೇತ್ರದಲ್ಲಿ ಹೆಚ್ಚಾಗಿ ಅಲ್ಪಸಂಖ್ಯಾತರ ಮತಗಳು ಪ್ರಬಲವಾಗಿರುವುದರಿಂದ ಕಾಂಗ್ರೆಸ್‌ಗೆ ಲಾಭದಾಯಕ ಎಂಬುದು ಸಾಮಾನ್ಯ ಲೆಕ್ಕಾಚಾರ. 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಹಾಗೂ ಕಾಂಗ್ರೆಸ್‌ ಅಭ್ಯರ್ಥಿ ವಿನಯ ಕುಲಕರ್ಣಿ ನಡುವಿನ ಸೆಣಸಾಟದಲ್ಲಿ ಈ ಕ್ಷೇತ್ರದಲ್ಲಿ ಪ್ರಹ್ಲಾದ ಜೋಶಿ 55,903 ಮತಗಳನ್ನು ಪಡೆದರೆ ವಿನಯ ಕುಲಕರ್ಣಿ 64,038 ಮತಗಳನ್ನು ಗಿಟ್ಟಿಸಿಕೊಂಡಿದ್ದರು. ಮೋದಿಯ ಅಬ್ಬರ, ಯುಪಿಎ ಸರಕಾರದ ವೈಫ‌ಲ್ಯದ ಪ್ರಚಾರದ ನಡುವೆಯೂ ವಿನಯ ಕುಲಕರ್ಣಿ 8135 ಮತಗಳ ಲೀಡ್‌ ಪಡೆದುಕೊಂಡಿದ್ದರು.

ಕಾಂಗ್ರೆಸ್‌ ಪ್ರಚಾರ, ಸಭೆಗಳು, ಚುನಾವಣಾ ತಂತ್ರಗಾರಿಕೆ ಹಾಗೂ ಕಳೆದ ಬಾರಿಗಿಂತ ಈ ಚುನಾವಣೆಯನ್ನು ಅಭ್ಯರ್ಥಿ ವಿನಯ ಕುಲಕರ್ಣಿ ಹಾಗೂ ಸ್ಥಳೀಯ ಶಾಸಕ ಪ್ರಸಾದ ಅಬ್ಬಯ್ಯ ಗಂಭೀರವಾಗಿ ಪರಿಗಣಿಸಿ ಕಾಲಿಗೆ ಚಕ್ರ ಕಟ್ಟಿಕೊಂಡು ಕ್ಷೇತ್ರ ಸುತ್ತಾಡಿದ್ದಾರೆ. ಕ್ಷೇತ್ರ ವ್ಯಾಪ್ತಿಯ ಹಳೇ ಹುಬ್ಬಳ್ಳಿ, ಮಂಟೂರ ರಸ್ತೆ, ಎಸ್‌.ಎಂ. ಕೃಷ್ಣ ನಗರ, ಮಸ್ತಾನ ಸೋಫಾ, ಗಣೇಶ ನಗರ, ಮುಲ್ಲಾ ಓಣಿ, ಯಲ್ಲಾಪುರ ಓಣಿ ಸೇರಿದಂತೆ ಕೆಲ ಪ್ರದೇಶಗಳ ಕಾಂಗ್ರೆಸ್‌ನ ಸಾಂಪ್ರದಾಯಿಕ ಮತಗಳು ಬೇರೆಡೆ ಹೋಗದು ಎಂಬುದು ಕೈ ಕಾರ್ಯಕರ್ತರ ವಿಶ್ವಾಸ.

ಹಿಂದಿನ ಎರಡು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪಡೆದ ಅಂತರವನ್ನು ಲೋಕಸಭೆಯಲ್ಲಿ ಉಳಿಸಿಕೊಳ್ಳಲು ಸಾಧ್ಯವಿಲ್ಲ. 2013ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಬಿಜೆಪಿ ಅಭ್ಯರ್ಥಿಗಿಂತ 12,831 ಮತಗಳ ಅಂತರದಿಂದ ಗೆದ್ದಿದ್ದರು. 2018ರಲ್ಲಿ 21,467 ಮತಗಳ ಹೆಚ್ಚು ಅಂತರ ಸಾಧಿಸಿದ್ದಾರೆ. 2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪಡೆದ ಲೀಡ್‌ 8135 ಮತಗಳು ಮಾತ್ರ.

ಮತದಾನಕ್ಕೆ ಒಂದು ವಾರ ಇದ್ದಾಗ ದೊಡ್ಡ ಸದ್ದು ಮಾಡಿದ ಲಿಂಗಾಯತ ಧರ್ಮ ವಿಚಾರ ತಮ್ಮ ಪಕ್ಷಕ್ಕೆ ವರ್ಕೌಟ್ ಆಗಲಿದೆ ಎನ್ನುವ ಲೆಕ್ಕಾಚಾರ ಎರಡು ಪಕ್ಷದಲ್ಲಿದೆ. ಇಲ್ಲಿ ಬಹಿರಂಗಕ್ಕಿಂತ ಹೆಚ್ಚಾಗಿ ಗೌಪ್ಯವಾಗಿಯೇ ಈ ವಿಚಾರ ದೊಡ್ಡ ಕೆಲಸ ಮಾಡಿದೆ. ಈ ವಿಚಾರದಲ್ಲಿ ಎರಡು ಪಕ್ಷಗಳಿಂದ ತಂತ್ರ-ಪ್ರತಿ ತಂತ್ರಗಾರಿಕೆ ನಡೆದಿದೆಯಾದರೂ ಯಾರಿಗೆ ಅದೃಷ್ಟವಾಗಿ ಪರಿಣಮಿಸಲಿದೆ ಎಂಬುದು ಚರ್ಚೆಗೆ ಆಹಾರವಾಗಿದೆ.

ಮೋದಿ ಅಲೆ, ಕ್ಷೇತ್ರದಲ್ಲಾದ ಅಭಿವೃದ್ಧಿ ಕಾರ್ಯ, ಕಾಂಕ್ರಿಟ್ ರಸ್ತೆಗಳು, ಪಕ್ಷದ ಬಲಿಷ್ಠ ಸಂಘಟನೆ, ಕಾರ್ಯಕರ್ತರ ಪರಿಶ್ರಮ ಯಶಸ್ವಿಯಾಗಲಿದೆ. ಶೇ.5.01 ಮತದಾನ ಹೆಚ್ಚಾಗಿದ್ದು, ಇವೆಲ್ಲವೂ ಹೊಸ ಮತದಾರರು. ಮೋದಿ ಆಡಳಿತಕ್ಕೆ ಬೆಂಬಲ ನೀಡಿದವರಾಗಿದ್ದಾರೆ ಎನ್ನುವ ವಿಶ್ವಾಸ ಕಮಲ ನಾಯಕರಲ್ಲಿದೆ. ತಮ್ಮ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರಿಗೆ 2 ರಿಂದ 3 ಸಾವಿರ ಮತಗಳ ಲೀಡ್‌ ದೊರೆಯಲಿದೆ ಎಂಬುದು ಬಿಜೆಪಿ ನಾಯಕರ ಲೆಕ್ಕಾಚಾರವಾಗಿದೆ.

ಗರಿಷ್ಠ ಮತದಾನ ಯೋಜನೆಗೆ ಕೊಂಚ ಹಿನ್ನಡೆ:

ವಿವಿಧ ಅಂಶಗಳನ್ನು ಮುಂದಿಟ್ಟುಕೊಂಡು ತಮ್ಮ ಅಭ್ಯರ್ಥಿಗೆ ಲೀಡ್‌ ದೊರೆಯಲಿದೆ ಎಂಬುದು ಉಭಯ ಪಕ್ಷಗಳ ರಾಜಕೀಯ ನಾಯಕರ ಅಭಿಮತ. ಶೇ. 65 ಕಾಂಗ್ರೆಸ್‌ನ ಸಾಂಪ್ರದಾಯಿಕ ಮತಗಳು ಇಲ್ಲಿರುವುದರಿಂದ ಮೈತ್ರಿ ಅಭ್ಯರ್ಥಿಗೆ ಲೀಡ್‌ ದೊರೆಯಲಿದೆ. ಆದರೆ ವಿಧಾಸಭೆ ಹಾಗೂ ಸ್ಥಳೀಯ ಚುನಾವಣೆಗೆ ಹೋಲಿಸಿದರೆ ಲೋಕಸಭೆ ಚುನಾವಣೆಗೆ ಅಲ್ಪಸಂಖ್ಯಾತರು ಅಷ್ಟೊಂದು ಆಸಕ್ತಿ ತೋರಿಲ್ಲ ಎನ್ನುವ ಅಭಿಪ್ರಾಯ ಕ್ಷೇತ್ರದಲ್ಲಿದೆ. ಗರಿಷ್ಠ ಪ್ರಮಾಣದಲ್ಲಿ ಇವರನ್ನು ಬೂತ್‌ಗೆ ಕರೆದುಕೊಂಡು ಹೋಗಿ ಮತ ಹಾಕಿಸಬೇಕು ಎನ್ನುವ ಯೋಜನೆಗೆ ಒಂದಿಷ್ಟು ಹಿನ್ನಡೆಯಾಗಿದೆ ಎನ್ನಲಾಗುತ್ತಿದೆ.
•ಹೇಮರಡ್ಡಿ ಸೈದಾಪುರ

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ

ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.