ವಿಶ್ವಶ್ರೇಷ್ಠ ಸಂವಿಧಾನ ನೀಡಿದವರು ಅಂಬೇಡ್ಕರ್
Team Udayavani, Apr 14, 2017, 2:59 PM IST
ಧಾರವಾಡ: ಅತ್ಯುತ್ತಮ ಸಾಮಾಜಿಕ ಮೌಲ್ಯಗಳು ಹಾಗೂ ಆಶಯಗಳನ್ನೊಳಗೊಂಡ ಶ್ರೇಷ್ಠ ಮತ್ತು ಜಗತ್ತಿನಲ್ಲಿಯೇ ಪ್ರಬಲವಾದ ಸಂವಿಧಾನ ನೀಡಿದ ಶ್ರೇಯಸ್ಸು ಡಾ| ಬಿ.ಆರ್.ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ ಎಂದು ಜಿಲ್ಲಾಧಿಕಾರಿ ಡಾ| ಎಸ್.ಬಿ. ಬೊಮ್ಮನಹಳ್ಳಿ ಹೇಳಿದರು.
ಇಲ್ಲಿನ ಸನ್ಮತಿ ಮಾರ್ಗದಲ್ಲಿರುವ ಡಾ| ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಡಾ| ಬಿ.ಆರ್.ಅಂಬೇಡ್ಕರ್ ಅವರ 126ನೇ ಜಯಂತಿಯ ಮುನ್ನಾದಿನ ಗುರುವಾರ ಹಮ್ಮಿಕೊಂಡಿದ್ದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮ ಹಿರಿಯರು ಅಹಿಂಸಾ ಮಾರ್ಗದಲ್ಲಿ ಹೋರಾಡಿ ಸ್ವಾತಂತ್ರ ತಂದುಕೊಟ್ಟಿದ್ದನ್ನು ಉಳಿಸಿಕೊಳ್ಳಲು ಸಂವಿಧಾನ ಪೂರಕವಾಗಿದೆ. ದೇಶದ ಸರ್ವಾಂಗೀಣ ಏಳ್ಗೆಗೆ ಸಂವಿಧಾನ ಅವಕಾಶ ಕಲ್ಪಿಸಿದೆ. ಡಾ|ಬಿ.ಆರ್. ಅಂಬೇಡ್ಕರ್ ಅವರ ವಿಚಾರಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಕವಿವಿ ಇತಿಹಾಸ ಹಾಗೂ ಪ್ರಾಚ್ಯಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ|ಶಿವರುದ್ರ ಎಸ್. ಕಲ್ಲೋಳಿಕರ್ ಉಪನ್ಯಾಸ ನೀಡಿ, ಜಗತ್ತಿನಲ್ಲಿಯೇ ಶ್ರೇಷ್ಠ ವಿದ್ವಾಂಸ, ಸಮಾಜ ಸುಧಾರಕ ಎಂಬ ಅಧಿಕೃತ ಮಾನ್ಯತೆಯನ್ನು ಅಮೆರಿಕದ ಕೋಲಂಬಿಯಾ ವಿಶ್ವವಿದ್ಯಾಲಯವು ತನ್ನ 250 ವರ್ಷಗಳ ಇತಿಹಾಸದ ಸಮೀಕ್ಷೆ ನಡೆಸಿ, ಡಾ| ಅಂಬೇಡ್ಕರ್ ಅವರಿಗೆ ಆ ಗೌರವ ನೀಡಿರುವದು ಸಮಸ್ತ ಭಾರತೀಯರು ಹೆಮ್ಮೆಪಡಬೇಕಾದ ಸಂಗತಿಯಾಗಿದೆ ಎಂದರು.
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಹಿರಿಯ ಉಪನಿರ್ದೇಶಕ ಸದಾಶಿವ ಮರ್ಜಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಗಿರೀಶ ಕಾಂಬಳೆ, ಮಹದೇವ ದೊಡ್ಡಮನಿ, ಪ್ರಿಯಾ ಪುರಾಣಿಕ, ಶಿವರಾಜಕುಮಾರ ಕಲ್ಲಿಗನೂರ ಇದ್ದರು. ಎನ್.ಮುನಿರಾಜು ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Varanasi: ಕುಟುಂಬಿಕರ ಎದುರಿಗೆ ಪೊಲೀಸ್ ಅಧಿಕಾರಿಗೆ ಥಳಿಸಿದ ಗುಂಪು
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್‌ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.