ಮನಸೂರಲ್ಲಿ ಬಾಲ್ಯವಿವಾಹಕ್ಕೆ ತಡೆ
Team Udayavani, May 8, 2019, 11:00 AM IST
ಧಾರವಾಡ: ಮನಸೂರ ಗ್ರಾಮದ ಅಪ್ರಾಪ್ತ ವಯಸ್ಸಿನ ಯುವತಿಯೊಂದಿಗೆ ಮೇ 8 ರಂದು ನಿಗದಿಯಾಗಿದ್ದ ಬಾಲ್ಯವಿವಾಹ ತಡೆಯುವಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಯಶಸ್ವಿಯಾಗಿದೆ.
ತಡಕೋಡ ಗ್ರಾಮದ ಕರೆಪ್ಪ ಮೇಲಿನಮನಿ ಅವರ ಮಗ ಬಸವರಾಜನಿಗೆ ಮನಸೂರಿನ ಅಪ್ರಾಪ್ತ ಯುವತಿಯೊಂದಿಗೆ ಮದುವೆ ಮಾಡಲು ಮೇ 8ರಂದು ನಿಶ್ಚಯ ಮಾಡಲಾಗಿತ್ತು. ಅದರಂತೆ ಎರಡೂ ಕುಟುಂಬದಲ್ಲಿ ಮದುವೆ ತಯಾರಿ ಕೂಡ ಜೋರಾಗಿಯೇ ನಡೆದಿತ್ತು. ಆದರೆ ವಧುವಿಗೆ ಇನ್ನೂ 18 ವರ್ಷ ತುಂಬಿಲ್ಲ ಎಂಬ ಮಾಹಿತಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ತಲುಪಿದ ಕೂಡಲೇ ಕಾರ್ಯ ಪ್ರವೃತ್ತರಾದ ಘಟಕದ ಅಧಿಕಾರಿಗಳು ಮನಸೂರಿಗೆ ತೆರಳಿದ್ದರು. ಅಲ್ಲಿ ವಧುವಿನ ಮನೆಗೆ ಭೇಟಿ ನೀಡಿ, ಪೋಷಕರ ಮನವೊಲಿಸಿ ಮದುವೆ ಆಗದಂತೆ ತಡೆದಿದ್ದಾರೆ. ಈ ವೇಳೆ ಮಗಳಿಗೆ ಮದುವೆ ಮಾಡಲ್ಲ ಎಂದು ಪೋಷಕರಿಂದ ಮುಚ್ಚಳಿಕೆ ಪತ್ರವನ್ನೂ ಬರೆಸಿಕೊಂಡಿರುವ ಘಟಕದ ಅಧಿಕಾರಿಗಳು, ಪೋಷಕರಿಗೆ ನೋಟಿಸ್ ನೀಡಿ ಮೇ 10ರಂದು ಮಧ್ಯಾಹ್ನ 3 ಗಂಟೆಯೊಳಗೆ ಮಗಳೊಂದಿಗೆ ಮಕ್ಕಳ ಕಲ್ಯಾಣ ಸಮಿತಿ ಎದುರು ಹಾಜರಾಗುವಂತೆ ಸೂಚಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಘಟಕದ ಸಿಬ್ಬಂದಿಗಳಾದ ಮಹ್ಮದಲಿ ತಹಶೀಲ್ದಾರ, ವಿಶಾಲಾ ಕಾನಪೇಟ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಮೇಲ್ವಿಚಾರಕಿ ರೇಣುಕಾ ಸುಂಡಿ, ಅಂಗನವಾಡಿ ಕಾರ್ಯಕರ್ತೆ ಮಮತಾ ಮಲ್ಲಿಕಾರ್ಜುನ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
BJP ಡಬಲ್ ಗೇಮ್; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು
Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್
Hubli: ಹಣಕಾಸು ಆಯೋಗದ ಅನ್ಯಾಯದ ಬಗ್ಗೆ ಬಿಜೆಪಿಯರಿಂದ ಮೌನ: ಸಿದ್ದರಾಮಯ್ಯ ಕಿಡಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.