ಸಾಲ ಮರುಪಾವತಿಸಿಲ್ಲವೆಂದು ಪಿಂಚಣಿ ತಡೆ ಸರಿಯಲ್ಲ


Team Udayavani, Feb 24, 2017, 1:09 PM IST

hub6.jpg

ಹುಬ್ಬಳ್ಳಿ: ಸಾಲ ಮರುಪಾವತಿಸಿಲ್ಲ ಎಂಬ ಕಾರಣಕ್ಕೆ ಬ್ಯಾಂಕ್‌ಗಳು ಸಾಮಾಜಿಕ ಭದ್ರತೆ ಪಿಂಚಣಿಯನ್ನು ತಡೆಹಿಡಿಯುವುದು ಸೂಕ್ತವಲ್ಲ ಎಂದು ಸಂಸದ ಪ್ರಹ್ಲಾದ ಜೋಶಿ ಹೇಳಿದರು. ಜಿಲ್ಲಾ ಅಗ್ರಣೀಯ ಬ್ಯಾಂಕ್‌ ವಿಜಯಾ ಬ್ಯಾಂಕ್‌ ಆಯೋಜಿಸಿದ್ದ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಬರದ ಹಿನ್ನೆಲೆಯಲ್ಲಿ ಜನರು ಸಂಕಷ್ಟದಲ್ಲಿದ್ದಾರೆ. ಟ್ಯಾಂಕರ್‌ಗಳ ಮೂಲಕ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಪ್ರತಿ ಕುಟುಂಬಕ್ಕೆ ದಿನಕ್ಕೆ 5 ಕೊಡ ನೀರು ವಿತರಿಸಲಾಗುತ್ತಿದೆ. ಮೇವು, ನೀರು ಲಭಿಸದೇ ರೈತರು ದನ-ಕರುಗಳನ್ನು ಕೈಗೆ ಕಡಿಮೆ ಮೊತ್ತಕ್ಕೆ ಮಾರಾಟ ಮಾಡುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ತೊಂದರೆ ನೀಡುವುದು ಸೂಕ್ತವಲ್ಲ ಎಂದರು.

ಜನರು  ಡಿಜಿಟಲ್‌, ಮೊಬೈಲ್‌ ಬ್ಯಾಂಕಿಂಗ್‌ ಸೌಲಭ್ಯಗಳನ್ನು ಪಡೆಯಲು ಮುಂದಾಗಬೇಕು. ಕೆಲವು ಬ್ಯಾಂಕ್‌ಗಳು ಒಂದೂ ಆರ್ಥಿಕ ಸಾಕ್ಷರತಾ ಶಿಬಿರ ಮಾಡದಿರುವುದು ಬೇಸರದ  ಸಂಗತಿ ಎಂದರು. ಅರ್ಹ ರೈತರಿಗೆ ಪ್ರಧಾನಮಂತ್ರಿ ಫ‌ಸಲ್‌ ಬಿಮಾ ಯೋಜನೆಯಡಿ ಬೆಳೆವಿಮೆ ಸಮರ್ಪಕವಾಗಿ ಹಂಚಿಕೆಯಾಗಬೇಕು.

ಕೆಲ ರೈತರಿಗೆ 2015ರ ಬೆಳೆ ವಿಮೆ ಸಿಕ್ಕಿಲ್ಲ. ಸಮಸ್ಯೆಗಳನ್ನು ನಿವಾರಿಸಿ ಉಳಿದ ರೈತರಿಗೂ ಬೆಳೆ ವಿಮೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಹೇಳಿದರು. ಮುದ್ರಾ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಎಲ್ಲ ಬ್ಯಾಂಕ್‌ಗಳು ಸಹಕಾರ ನೀಡಬೇಕು. ಕೆಲವು ಖಾಸಗಿ ಬ್ಯಾಂಕ್‌ಗಳು ಮುದ್ರಾ ಯೋಜನೆಯಡಿ ಸಾಲ ನೀಡಲು ಹಿಂದೇಟು ಹಾಕುತ್ತಿವೆ.

ಭಾರತೀಯ ರಿಜರ್ವ್‌ ಬ್ಯಾಂಕ್‌ ಹಾಗೂ  ನಬಾರ್ಡ್‌ ಬ್ಯಾಂಕ್‌ ಅಧಿಕಾರಿಗಳು ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು. ಜಿಲ್ಲಾಧಿಕಾರಿ ಎಸ್‌.ಬಿ.ಬೊಮ್ಮನಹಳ್ಳಿ ಮಾತನಾಡಿ, ರೈತರಿಗೆ ಪ್ರಧಾನಮಂತ್ರಿ  ಬೆಳೆವಿಮೆ ಸಮರ್ಪಕ ಪಾವತಿಗಾಗಿ ರಾಷ್ಟ್ರಮಟ್ಟದಲ್ಲಿ ಆಯ್ಕೆ ಮಾಡಿದ 15 ಜಿಲ್ಲೆಗಳಲ್ಲಿ ಧಾರವಾಡವೂ ಒಂದಾಗಿದ್ದು, ಜಿಲ್ಲೆಗೆ ಪ್ರಶಸ್ತಿ ಸಿಗುವ ಸಾಧ್ಯತೆಯಿದೆ.

ಈ ಸಾಧನೆಗೆ ಎಲ್ಲ ಬ್ಯಾಂಕ್‌ಗಳ ಸಹಕಾರ ಮಹತ್ವದ್ದಾಗಿದೆ ಎಂದರು. ನಬಾರ್ಡ್‌ ಬ್ಯಾಂಕ್‌ ಅಧಿಕಾರಿ ಶೀಲಾ ಭಂಡಾರಕರ, ರಿಸರ್ವ್‌ ಬ್ಯಾಂಕ್‌ ಅಧಿಕಾರಿ ಗೋಪಿನಾಥ ಮಾತನಾಡಿದರು. ಕೆಂಚಣ್ಣವರ ಇದ್ದರು. 

ಟಾಪ್ ನ್ಯೂಸ್

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Basavaraj-horatti

CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.