ಕೋವಿಡ್ ಜನಜಾಗೃತಿ ಹೆಚ್ಚಿಸಲು ಆದ್ಯತೆ: ಡಿಸಿ
Team Udayavani, Jul 17, 2020, 1:32 PM IST
ಧಾರವಾಡ: ಸಾರ್ವಜನಿಕರಲ್ಲಿ ಮಾಸ್ಕ್ ಬಳಕೆ, ಸಾಮಾಜಿಕ ಅಂತರ ಕಾಪಾಡುವ, ಸ್ಯಾನಿಟೈಜರ್ ಬಳಕೆ ಕುರಿತು ಜನಜಾಗೃತಿ ಮೂಡಿಸುವ ಕಾರ್ಯ ಅಗತ್ಯವಿದ್ದು, ಸ್ವಯಂ ಸೇವಕರಾಗಿ ಪಾಲ್ಗೊಳ್ಳಲು ಸಿದ್ಧರಿರುವವರ ತಂಡ ರಚಿಸಿ, ಜನಜಾಗೃತಿ ಹೆಚ್ಚಿಸಲು ಆದ್ಯತೆ ನೀಡಲಾಗುವುದೆಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.
ಜಿಲ್ಲಾಧಿಕಾರಿ ನೂತನ ಸಭಾಂಗಣದಲ್ಲಿ ಗುರುವಾರ ನಡೆದ ಸಾಮಾಜಿಕ ಅಂತರ ಕಾಪಾಡಲು ರಚಿಸಿರುವ ಸಮಿತಿ ಹಾಗೂ ವಿವಿಧ ಸ್ವಯಂ ಸೇವಾ ಸಮಿತಿ, ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ಕೋವಿಡ್ ನಿಯಂತ್ರಣಕ್ಕೆ ಸಮುದಾಯದಲ್ಲಿ ಕೋವಿಡ್ ವೈರಸ್ ಕುರಿತು ತಿಳಿವಳಿಕೆ ಮೂಡಿಸಬೇಕು. ಈ ಕಾರ್ಯಕ್ಕಾಗಿ ಹು-ಧಾ ಮಹಾನಗರ ಪಾಲಿಕೆ ವ್ಯಾಪ್ತಿಯ 67 ವಾರ್ಡ್ ಗಳಲ್ಲಿ 67 ವಾರ್ಡ್ ಟಾಸ್ಕ್ ಪೊರ್ಸ್ ಸಮಿತಿಗಳನ್ನು ಪಾಲಿಕೆ ಆಯುಕ್ತರ ನೇತೃತ್ವದಲ್ಲಿ ರಚಿಸಲಾಗಿದೆ. ಸಮಿತಿಯಲ್ಲಿ ವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿ ಸೇರಿ 5 ಜನ ಸದಸ್ಯರಿರುತ್ತಾರೆ. ಇದರಲ್ಲಿ ಆಸಕ್ತ ಸ್ವಯಂ ಸೇವಕರನ್ನು ಸೇರಿಸಲಾಗುತ್ತದೆ. ಸಮಿತಿ ಸದಸ್ಯರಿಗೆ ಗುರುತಿನ ಚೀಟಿ ನೀಡಲಾಗುತ್ತದೆ ಎಂದರು.
ಮಹಾನಗರ ಪಾಲಿಕೆ ಆಯುಕ್ತ ಡಾ|ಸುರೇಶ ಇಟ್ನಾಳ ಮಾತನಾಡಿ, ವಾರ್ಡ್ ಟಾಸ್ಕ್ ಪೋರ್ಸ್ ಸಮಿತಿ ಸದಸ್ಯರಾಗಿ ಪಾಲಿಕೆ, ಕಂದಾಯ, ಪೊಲೀಸ್ ಇಲಾಖೆ ಅಧಿಕಾರಿಗಳು ಇರುತ್ತಾರೆ. ಅವರು ಮಾಸ್ಕ್ ಧರಿಸದೆ ಇರುವವರಿಗೆ, ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವ, ತ್ಯಾಜ್ಯ ಚೆಲ್ಲುವವರ ವಿರುದ್ಧ ಅವರು ದಂಡ ವಿಧಿಸಲಿದ್ದಾರೆಂದರು. ಜಿಪಂ ಸಿಇಒ ಡಾ|ಬಿ.ಸಿ.ಸತೀಶ, ಉಪ ಅರಣ್ಯ ಸಂರಕ್ಷಣಾಧಿಕಾರಿ ಯಶವಂತ ಕ್ಷೀರಸಾಗರ, ಅಬಕಾರಿ ಉಪ ಆಯುಕ್ತ ಶಿವನಗೌಡ ಪಾಟೀಲ, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕ ಭರಮಕ್ಕನವರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.