ಸಹಕಾರಿ ಕ್ಷೇತ್ರಕ್ಕೆ ನೀಡಿ ಆದ್ಯತೆ
Team Udayavani, Nov 15, 2017, 12:17 PM IST
ಧಾರವಾಡ: ಸಮಾಜದಲ್ಲಿನ ಎಲ್ಲ ವಲಯಗಳ ಅಭಿವೃದ್ಧಿಯ ಪ್ರೇರಕ ಶಕ್ತಿಯಾಗಿರುವ ಸಹಕಾರ ಕ್ಷೇತ್ರದ ಬೆಳವಣಿಗೆಗೆ ಕೇಂದ್ರ ಸರ್ಕಾರ ಆದ್ಯತೆ ನೀಡಬೇಕು ಎಂದು ಮಾಜಿ ಸಹಕಾರ ಸಚಿವ ಎಸ್.ಆರ್. ಮೋರೆ ಹೇಳಿದರು.
ನಗರದ ಕೆಸಿಸಿ ಬ್ಯಾಂಕಿನ ಸಭಾಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ 64ನೇ ಸಹಕಾರ ಸಪ್ತಾಹ ಹಾಗೂ ಸಹಕಾರ ಸಂಸ್ಥೆಗಳ ಮೂಲಕ ಉತ್ತಮ ಆಡಳಿತ ಮತ್ತು ವೃತ್ತಿಪರತೆ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಭಾರತ ಕೃಷಿ ಪ್ರಧಾನ ದೇಶ. ಗ್ರಾಮೀಣ ಭಾಗದಲ್ಲಿನ ರೈತರು, ಕೂಲಿಕಾರರು ಹಾಗೂ ಬಡವರ್ಗದ ಜನರ ಆರ್ಥಿಕ ಸಮಸ್ಯೆಗಳ ನಿವಾರಣೆಗೆ ಸಹಕಾರ ಸಂಸ್ಥೆಗಳು ಉತ್ತಮ ರೀತಿಯಲ್ಲಿ ಕೊಡುಗೆ ನೀಡಬಲ್ಲವು. ಸಹಕಾರ ಕ್ಷೇತ್ರದಿಂದ ಮಾತ್ರ ಗ್ರಾಮಿಣ ಅಭಿವೃದ್ಧಿ ಸಾಧ್ಯ ಎಂಬುದನ್ನು ಅಲ್ಲಗಳೆಯುವಂತಿಲ್ಲ ಎಂದರು.
ಕೆಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಸ್.ವೈ. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಾಪುಗೌಡ ಪಾಟೀಲ, ರಾಜ್ಯ ಗ್ರಾಹಕರ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಪಿ. ಪಾಟೀಲ, ಬ್ಯಾಂಕಿನ ನಿರ್ದೇಶಕರಾದ ಪ್ರತಾಪ ಚವ್ಹಾಣ, ಮಲ್ಲಿಕಾರ್ಜುನ ಹೊರಕೇರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಪಿ. ಶೆಲ್ಲಿಕೇರಿ,
ಲೆಕ್ಕ ಪರಿಶೋಧನಾ ಇಲಾಖೆಯ ಉಪ ನಿರ್ದೇಶಕ ರಂಗಸ್ವಾಮಿ, ಹಿರಿಯ ಸಹಕಾರಿಗಳಾದ ಚಂದ್ರಕಾಂತ ಪಡಸಣ್ಣವರ, ಎಸ್.ಎನ್. ರಾಯನಾಳ, ಎಫ್.ಆರ್. ಕಲ್ಲನಗೌಡ್ರ, ದೇಸಾಯಿಗೌಡ ಪಾಟೀಲ, ಡಾ|ಸ್ಟಾನ್ಲಿ ವಿಲಿಯಂ ಐಝಾಕ್ಸ್, ಕೆಸಿಸಿ ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ವಿ.ಬಿ. ಪಾಟೀಲ, ವಸೂಲಾ ಧಿಕಾರಿ ಬಿ.ವಿ. ನಾಯಕ ಇದ್ದರು. ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಇಲಾಖೆಯ ನಿವೃತ್ತ ಉಪನಿರ್ದೇಶಕ ಪಿ.ಪಿ.ಗಾಯಕವಾಡ ಉಪನ್ಯಾಸ ನೀಡಿದರು.
ಇದೇ ಸಂದರ್ಭದಲ್ಲಿ ನಿವೃತ್ತ ಅಪರ ನಿಬಂಧಕರು ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹನುಮಾಕ್ಷಿ ಗೋಗಿ ಮತ್ತು ಉತ್ತಮ ಸಾಧನೆಗೈದ ಮೊರಬ, ದೇವಿಕೊಪ್ಪ, ಅರವಟಗಿ, ಛಬ್ಬಿ, ಕುಂದಗೋಳ, ಯರಗುಪ್ಪಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಸನ್ಮಾನಿಸಲಾಯಿತು. ಶಿವಾನಂದ ಹೂಗಾರ ನಿರೂಪಿಸಿದರು. ಐ.ಎಸ್. ಪಾಟೀಲ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jaiswal: ಚಾಂಪಿಯನ್ಸ್ ಟ್ರೋಫಿಗೆ ಯಶಸ್ವಿ ಜೈಸ್ವಾಲ್; ಇಂಗ್ಲೆಂಡ್ ಸರಣಿಯಲ್ಲೇ ಪದಾರ್ಪಣೆ?
Maha Kumbh Mela 2025: 144 ವರ್ಷಗಳಿಗೊಮ್ಮೆ ಮಹಾಕುಂಭ ಮೇಳ- ಇದರ ಹಿಂದಿದೆ ರೋಚಕ ಸಂಗತಿ!
Dharmasthala: ಭಾರತೀಯ ಆಧ್ಯಾತ್ಮಿಕ ತವರೂರು ಶ್ರೀ ಕ್ಷೇತ್ರ ಧರ್ಮಸ್ಥಳ: ಜಗದೀಪ್ ಧನ್‌ಕರ್
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
Girl Trapped: 24 ಗಂಟೆಗಳ ಕಾಲ 540 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಯುವತಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.