ಕೋವಿಡ್ ನಿಯಂತ್ರಣಕ್ಕೆ ಖಾಸಗಿ ಆಸ್ಪತ್ರೆ ಸಹಕಾರ ಮುಖ್ಯ: ಶೆಟ್ಟರ
Team Udayavani, Jul 18, 2020, 10:12 AM IST
ಧಾರವಾಡ: ಕೋವಿಡ್ ನಿಯಂತ್ರಣಕ್ಕೆ ಸರ್ಕಾರದ ಪ್ರಯತ್ನಗಳೊಂದಿಗೆ ಖಾಸಗಿ ಆಸ್ಪತ್ರೆಗಳು ಮತ್ತು ಸಾರ್ವಜನಿಕರ ಸಹಕಾರವೂ ಮುಖ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ ಹೇಳಿದರು.
ಸತ್ತೂರಿನ ಎಸ್‌ಡಿಎಂ ಆಸ್ಪತ್ರೆಯಲ್ಲಿ ಶುಕ್ರವಾರ ಸಂಜೆ ಕೋವಿಡ್ ತಪಾಸಣೆ ವೈರಾಲಜಿ ಪ್ರಯೋಗಾಲಯ ಉದ್ಘಾಟಿಸಿ ಅವರು ಮಾತನಾಡಿದರು. ಕೋವಿಡ್ ಸೋಂಕಿತರ ತ್ವರಿತ ಪತ್ತೆಗೆ ಮತ್ತೂಂದು ಪ್ರಯೋಗಾಲಯ ಆರಂಭವಾಗುತ್ತಿರುವುದು ನೆರವಾಗಲಿದೆ ಎಂದ ಅವರು ಜಿಲ್ಲಾಡಳಿತಕ್ಕೆ ಉತ್ತಮ ಸಹಕಾರ ನೀಡುತ್ತಿರುವ ಎಸ್‌ಡಿಎಂ ಆಸ್ಪತ್ರೆ ಉಳಿದ ಖಾಸಗಿ ಆಸ್ಪತ್ರೆಗಳಿಗೆ ಮಾದರಿಯಾಗಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು. ಆನ್‌ಲೈನ್ ಗೂಗಲ್ ಮೀಟ್ ಮೂಲಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಕೇಂದ್ರ ಗಣಿ, ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಪ್ರಹ್ಲಾದ ಜೋಶಿ, ಈ ವಿಷಮ ಪರಿಸ್ಥಿತಿ ಎದುರಿಸಿ ಜಯಿಸಬೇಕಾಗಿದೆ. ಸೋಂಕಿನ ಸರಪಳಿ ತುಂಡರಿಸಲು, ಸಾಮಾಜಿಕ ಅಂತರ, ಮಾಸ್ಕ್ ಧರಿಸುವಿಕೆ ಜತೆಗೆ ಹೆಚ್ಚು ಪರೀಕ್ಷೆಗಳೂ ಆಗಬೇಕು. ನಮ್ಮ ದೇಶದ ಜನಸಂಖ್ಯೆ, ಜನಸಾಂದ್ರತೆಗೆ ಹೋಲಿಸಿದಾಗ ಕೋವಿಡ್ ನಿಯಂತ್ರಣದಲ್ಲಿ ಪ್ರಧಾನ ಮಂತ್ರಿಗಳ ದೂರದೃಷ್ಟಿಯುಳ್ಳ ಕ್ರಮಗಳು ಉತ್ತಮ ಪರಿಣಾಮ ನೀಡುತ್ತಿವೆ ಎಂದರು.
ಗೂಗಲ್ ಮೀಟ್ ಮೂಲಕ ಮಾತನಾಡಿದ, ಧರ್ಮಸ್ಥಳ ಧರ್ಮಾಧಿಕಾರಿ ಡಾ|ವೀರೇಂದ್ರ ಹೆಗ್ಗಡೆಯವರು, ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಅವರ ಒತ್ತಾಸೆಯಿಂದ ಎಸ್‌ಡಿಎಂ ವಿಶ್ವವಿದ್ಯಾಲಯದಲ್ಲಿ ಕೋವಿಡ್ ತಪಾಸಣೆ ಪ್ರಯೋಗಾಲಯ ಸ್ಥಾಪಿಸಲು, ಐಸಿಎಂಆರ್ ಹಾಗೂ ಎನ್‌ಎಬಿಎಲ್ ಮಾನ್ಯತೆ ಶೀಘ್ರ ದೊರಕಲು ಸಾಧ್ಯವಾಗಿದೆ ಎಂದರು.
ಎಸ್‌ಡಿಎಂ ವಿವಿ ಉಪಕುಲಪತಿ , ಕಾಲೇಜು ನಿರ್ದೇಶಕ ಡಾ| ನಿರಂಜನಕುಮಾರ, ಪ್ರಾಚಾರ್ಯೆ ಡಾ| ರತ್ನಮಾಲಾ ದೇಸಾಯಿ, ವೈದ್ಯಕೀಯ ಅ ಧೀಕ್ಷಕ ಡಾ|ಕಿರಣ ಹೆಗಡೆ, ಮೈಕ್ರೊಬಯಾಲಜಿ ವಿಭಾಗದ ಮುಖ್ಯಸ್ಥ ಡಾ| ಆರ್ .ಡಿ.ಕುಲಕರ್ಣಿ, ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿ ಕಾರಿ ನಾಗರಾಜ ಕಲ್ಲಾಪುರ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.