ಉದ್ಘಾಟನೆ ನಂತರವೂ ಅಪೂರ್ಣ ನಿಲ್ದಾಣ


Team Udayavani, Feb 7, 2020, 11:34 AM IST

huballi-tdy-1

ಧಾರವಾಡ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಧಾರವಾಡ ಗ್ರಾಮಾಂತರ ವಿಭಾಗದ ಉಪನಗರ ಹಾಗೂ ಗ್ರಾಮಾಂತರ ಬಸ್‌ ನಿಲ್ದಾಣ ಐದು ವರ್ಷದ ಕಾಮಗಾರಿ ಬಳಿಕ ಅಧಿಕೃತವಾಗಿ ಉದ್ಘಾಟನೆಗೊಂಡರೂ ಪೂರ್ಣ ಪ್ರಮಾಣದಲ್ಲಿ ಸಾರ್ವಜನಿಕ ವಲಯದ ಮುಕ್ತ ಬಳಕೆಗೆ ದೊರೆತಿಲ್ಲ.

ಕೆಲ ದಿನಗಳ ಹಿಂದಷ್ಟೆ ಉಪರಾಷ್ಟ್ರಪತಿಯಿಂದ ಬಿಆರ್‌ಟಿಎಸ್‌ ಯೋಜನೆ ಅಧಿಕೃತ ಉದ್ಘಾಟನೆಗೊಂಡಿದ್ದು, ಅದರ ಜೊತೆಗೆ ಈ ನಿಲ್ದಾಣವೂ ಉದ್ಘಾಟನೆಗೊಂಡಿದೆ. ಆದರೆ ಈವರೆಗೂ ಸಾರ್ವಜನಿಕರಿಗೆ ಈ ನಿಲ್ದಾಣ ಪೂರ್ಣ ಪ್ರಮಾಣದಲ್ಲಿ ಮುಕ್ತವಾಗಿಲ್ಲ. ಉಪನಗರ ಹಾಗೂ ಗ್ರಾಮಾಂತರ ಬಸ್‌ ಗಳ ಸಂಚಾರ ಆರಂಭಗೊಂಡು ಒಂದುವರ್ಷ ಕಳೆದ ಬಳಿಕ ಈಗ ಉದ್ಘಾಟನೆ ಆಗಿರುವ ನಿಲ್ದಾಣದಲ್ಲಿ ಕುಡಿವ ನೀರಿನ ವ್ಯವಸ್ಥೆ ಇಲ್ಲ. ಸ್ವತ್ಛತೆ ಕೊರತೆ ಜೊತೆಗೆ ವಾಣಿಜ್ಯ ಮಳಿಗೆಗಳು ಹಾಗೂ ಉಪಾಹಾರ ಗೃಹ ನಿರ್ಮಿಸಿದ್ದರೂ ಕಾರ್ಯಾರಂಭಗೊಂಡಿಲ್ಲ. ನಿಲ್ದಾಣದ ಕೆಳಮಹಡಿಯಲ್ಲಿ ನಿರ್ಮಿಸಿರುವಪಾರ್ಕಿಂಗ್‌ ಜಾಗದ ಸೌಲಭ್ಯವೂ ಸಾರ್ವಜನಿಕರಿಗೆ ಸಿಕ್ಕಿಲ್ಲ.

ಕಾರ್ಯಾರಂಭವಿಲ್ಲ: ನಿಲ್ದಾಣದ ಪಕ್ಕದಲ್ಲಿ 9ಕ್ಕೂ ಹೆಚ್ಚು ವಾಣಿಜ್ಯ ಮಳಿಗೆ ನಿರ್ಮಿಸಲಾಗಿದೆ. ಮುಖ್ಯ ಕಟ್ಟಡದಲ್ಲಿ ಉಪಾಹಾರ ಗೃಹ ನಿರ್ಮಿಸಲಾಗಿದ್ದು, ಶುದ್ಧ ಕುಡಿವ ನೀರಿನ ಘಟಕಗಳನ್ನು ಅಳವಡಿಸಲಾಗಿದೆ. ಆದರೆ ಇವುಗಳು ಇನ್ನೂ ಕಾರ್ಯಾರಂಭ ಮಾಡಿಲ್ಲ. ಕಟ್ಟಡದ ಮೊದಲ ಮಹಡಿಯಲ್ಲಿರುವ ಉಪಾಹಾರ ಗೃಹಕ್ಕೆ, ಅದರ ಪಕ್ಕದಲ್ಲೇ ಇರುವ ಅಧಿಕಾರಿಗಳ ಕೊಠಡಿಗಳಿಗೂ ಬೀಗ ಜಡಿಯಲಾಗಿದೆ. ಆದಷ್ಟು ಬೇಗ ಮಳಿಗೆಗಳ ಜೊತೆಗೆ ಉಪಾಹಾರ ಗೃಹ ಕಾರ್ಯಾರಂಭ ಮಾಡಿದರೆ ಸಾರ್ವಜನಿಕರಿಗೆ ಅನುಕೂಲವಾಗಲಿದೆ.

ಮುಕ್ತವಾಗದ ಪಾರ್ಕಿಂಗ್‌: ನಿಲ್ದಾಣ ಪಕ್ಕದಲ್ಲಿಯೇ ಸೂಪರ್‌ ಮಾರುಕಟ್ಟೆ ಸೇರಿದಂತೆ ಹೆಚ್ಚಿನ ಅಂಗಡಿ-ಮುಂಗಟ್ಟುಗಳು ಇರುವುದರಿಂದ ಪಾರ್ಕಿಂಗ್‌ ಸಮಸ್ಯೆ ಸಾಕಷ್ಟಿದೆ. ಈ ಹಿನ್ನೆಲೆಯಲ್ಲಿ ನಿಲ್ದಾಣದ ನೆಲಮಹಡಿಯಲ್ಲಿ ಸುಸಜ್ಜಿತ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗಿದೆ. ವಿಪರ್ಯಾಸವೆಂದರೆ ನಿಲ್ದಾಣ ಉದ್ಘಾಟನೆಗೊಂಡರೂ ಪಾರ್ಕಿಂಗ್‌ ಜಾಗ ಮಾತ್ರ ಸಾರ್ವಜನಿಕರಿಗೆ ಮುಕ್ತವಾಗಿಲ್ಲ. ಆದಷ್ಟು ಬೇಗ ಬಳಕೆಗೆ ಮುಕ್ತವಾದರೆ ಈ ಭಾಗದಲ್ಲಿ ಉಂಟಾಗುವಪಾರ್ಕಿಂಗ್‌ ಸಮಸ್ಯೆಯಾದರೂ ತಗ್ಗಬಹುದು. ಹಳೇ ಬಸ್‌ ನಿಲ್ದಾಣಕ್ಕೆ ಹೊಸ ರೂಪ ಸಿಕ್ಕಿದ್ದರೂ ಸ್ವತ್ಛತೆ ಕೊರತೆ ಎದ್ದು ಕಾಣುತ್ತಿದೆ. ಈ ಬಗ್ಗೆ ಅಧಿಕಾರಿ ವರ್ಗ ಲಕ್ಷ್ಯ ವಹಿಸುವುದರ ಜೊತೆಗೆ ಗ್ರಾಮೀಣ ಭಾಗಕ್ಕೂ ಹೊಸ ಬಸ್‌ಗಳ ಸಂಚಾರ ಆಗುವಂತೆ ಮಾಡಬೇಕಿದೆ.

ಪಾರ್ಕಿಂಗ್‌ ಜಾಗದ ನಿರ್ವಹಣೆ, ಮಳಿಗೆಗಳು, ಉಪಹಾರ ಗೃಹ, ಕುಡಿಯುವ ನೀರಿನ ಘಟಕ ನಿರ್ವಹಣೆಗಾಗಿ ಏಕರೂಪದದಲ್ಲಿ ಟೆಂಡರ್‌ ಕರೆಯಲು ತೀರ್ಮಾನಿಸಲಾಗಿದ್ದು, ಆದಷ್ಟು ಬೇಗ ಟೆಂಡರ್‌ ಕರೆಯಲಾಗುವುದು. ಈ ಟೆಂಡರ್‌ ಆಗುವವರೆಗೂ ತಾತ್ಕಾಲಿಕವಾಗಿ ನಮ್ಮ ಸಿಬ್ಬಂದಿಯಿಂದಲೇ ಪಾರ್ಕಿಂಗ್‌ ಜಾಗ ನಿರ್ವಹಣೆ ಮಾಡುವ ಮೂಲಕ 2-3 ದಿನದಲ್ಲಿ ಸಾರ್ವಜನಿಕರಿಗೆ ಮುಕ್ತಗೊಳಿಸಲಾಗುವುದು. ಬಸಲಿಂಗಪ್ಪ ಬೀಡಿ, ನಿಯಂತ್ರಣಾಧಿಕಾರಿ, ಧಾರವಾಡ ವಿಭಾಗ

 

-ಶಶಿಧರ್‌ ಬುದ್ನಿ

ಟಾಪ್ ನ್ಯೂಸ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

8-uv-fusion

Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.