ಹೊಲ್ತಿಕೋಟಿ ಕೆರೆ ಶಾಶ್ವತ ದುರಸ್ತಿಗೆ ಕ್ರಮ

ಹೊಲ್ತಿಕೋಟಿ ಕೆರೆಯು 30 ವರ್ಷಗಳ ಹಿಂದೆ ಒಮ್ಮೆ ಒಡೆದಿತ್ತು ಎಂಬುದನ್ನು ಸ್ಥಳೀಯ ರೈತರು ಹೇಳಿದ್ದಾರೆ.

Team Udayavani, Nov 19, 2021, 2:54 PM IST

ಹೊಲ್ತಿಕೋಟಿ ಕೆರೆ ಶಾಶ್ವತ ದುರಸ್ತಿಗೆ ಕ್ರಮ

ಧಾರವಾಡ: ಹೊಲ್ತಿಕೋಟಿ ಗ್ರಾಮದ ಕೆರೆ ಒಡೆದು ಅಪಾರ ಪ್ರಮಾಣದ ನೀರು ಪೋಲಾದ ಪರಿಣಾಮವಾಗಿ ರೈತರ ಬೆಳೆಗಳು, ಪ್ರಾಣಿ, ಪಕ್ಷಿಗಳಿಗೆ ಅಪಾರ ಹಾನಿಯಾಗಿದೆ. ಕೆರೆಯ ಶಾಶ್ವತ ದುರಸ್ತಿಗೆ ಆದ್ಯತೆಯಡಿ ಕ್ರಮ ವಹಿಸಲಾಗುವುದು ಎಂದು ಕೈಮಗ್ಗ, ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು.

ಹೊಲ್ತಿಕೋಟಿಯ ಕೆರೆ ಒಡೆದ ಸ್ಥಳಕ್ಕೆ ಭೇಟಿ ನೀಡಿ ಹಾನಿ ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮಾರು 110 ಮಿಲಿ ಮೀಟರ್‌ ಪ್ರಮಾಣದ ಮಳೆಯಾದ ಪರಿಣಾಮ ಹೊಲ್ತಿಕೋಟಿ ಕೆರೆಗೆ ಒಳಹರಿವು ಹೆಚ್ಚಾಗಿ ತಡೆಗೋಡೆ ಒಡೆದು ಸುಮಾರು 27 ಎಕರೆ ವಿಸ್ತಾರದ ಕೆರೆಯಲ್ಲಿ ಸಂಗ್ರಹವಾಗಿದ್ದ ನೀರು ಪೋಲಾಗಿದೆ. ಸದ್ಯ ಸೂಕ್ತ ತಾಂತ್ರಿಕತೆಯೊಂದಿಗೆ ಪೋಲಾಗುತ್ತಿರುವ ನೀರನ್ನು ತಡೆಯಲು ಪ್ರಯತ್ನಿಸಲಾಗುವುದು. ಸುಮಾರು 300 ಎಕರೆಗೂ ಅಧಿ ಕ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬು, ಭತ್ತ ಹಾನಿಯಾಗಿದೆ ಎಂದರು.

ಕುಂದಗೋಳ, ನವಲಗುಂದ, ಹುಬ್ಬಳ್ಳಿ, ಕಲಘಟಗಿ ತಾಲೂಕುಗಳಲ್ಲಿಯೂ ಮಳೆಯಿಂದ ಹತ್ತಿ ಬೆಳೆ ಹಾನಿಯಾಗಿದೆ. ರಾಜ್ಯದಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಸಮೀಕ್ಷೆ ಮಾಡಲು ಸೂಚಿಸಲಾಗಿದೆ. ಬೆಳೆ ಹಾಗೂ ಮನೆ ಹಾನಿಗೊಳಗಾದವರಿಗೆ ಸಮೀಕ್ಷೆ ವರದಿ ಆಧರಿಸಿ ಪರಿಹಾರ ಒದಗಿಸಲಾಗುವುದು ಎಂದು ಹೇಳಿದರು.

ಹೊಲ್ತಿಕೋಟಿ ಕೆರೆಯು 30 ವರ್ಷಗಳ ಹಿಂದೆ ಒಮ್ಮೆ ಒಡೆದಿತ್ತು ಎಂಬುದನ್ನು ಸ್ಥಳೀಯ ರೈತರು ಹೇಳಿದ್ದಾರೆ. ಕೆರೆಯ ಶಾಶ್ವತ ದುರಸ್ತಿಗೆ ಕ್ರಮ ವಹಿಸಲಾಗುವುದು. ಹೊಲ್ತಿಕೋಟಿ ಟೆನೆಂಟ್‌ ಫಾರ್ಮಿಂಗ್‌ ಸೊಸೈಟಿಯ ಹೆಸರಿನ ಮಾಲೀಕತ್ವದಲ್ಲಿರುವ ಸುಮಾರು 220 ಎಕರೆ ಭೂಮಿಯನ್ನು ರೈತರ ಹೆಸರಿಗೆ ವರ್ಗಾಯಿಸಲು ಸ್ಥಳೀಯರ ಬೇಡಿಕೆ ಇದೆ. ಅಗತ್ಯ ದಾಖಲೆಗಳನ್ನು ಪಡೆದು ವರ್ಗಾಯಿಸಲು ಕಂದಾಯ ಇಲಾಖೆ ಅಧಿಕಾರಿಗಳಿಗೆ ತಿಳಿಸಲಾಗಿದೆ.

ಸರ್ಕಾರದ ಮಟ್ಟದಲ್ಲಿಯೂ ನೆರವು ನೀಡಲಾಗುವುದು ಎಂದರು. ಹಳ್ಳಿಗೇರಿ ಗ್ರಾಪಂ ಅಧ್ಯಕ್ಷೆ ರುಕ್ಮಿಣಿ ಅರಳಿಕಟ್ಟಿ, ಜಿಪಂ ಉಪ ಕಾರ್ಯದರ್ಶಿ ರೇಖಾ ಡೊಳ್ಳಿನವರ, ತಹಶೀಲ್ದಾರ್‌ ಡಾ| ಸಂತೋಷ ಕುಮಾರ ಬಿರಾದಾರ, ಪಂಚಾಯತರಾಜ್‌ ಎಂಜಿನಿಯರಿಂಗ್‌ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್‌ ಎಂ.ಎಂ. ಗೌಡರ್‌ ಇನ್ನಿತರರಿದ್ದರು.

ಮುಂದಿನ ಎರಡ್ಮೂರು ದಿನ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ರೈತರು ಜೀವ ರಕ್ಷಣೆಗೆ ಎಚ್ಚರಿಕೆ ವಹಿಸಬೇಕು. ಹೊಲ-ಗದ್ದೆಗಳಿಗೆ ತೆರಳುವಾಗ, ಹಳ್ಳ-ಕೊಳ್ಳಗಳನ್ನು ದಾಟುವ ಮುನ್ನ ತೀವ್ರ ಎಚ್ಚರಿಕೆ ವಹಿಸಬೇಕು. ಮಳೆ ಬೀಳುವಾಗ ಸುರಕ್ಷಿತ ಸ್ಥಳಗಳಲ್ಲಿ ಇರಬೇಕು.
ಶಂಕರಪಾಟೀಲ ಮುನೇನಕೊಪ್ಪ, ಸಚಿವ

ಟಾಪ್ ನ್ಯೂಸ್

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

Naxaliam-End

Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

siddaramaih-Meeting

State Budget Meeting: ಇಂದಿನಿಂದ ಸಿಎಂ ಬಜೆಟ್‌ ಪೂರ್ವಭಾವಿ ಸರಣಿ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.