ಸ್ಮಾರ್ಟ್ ರಸ್ತೆಗಳಿಗೆ ಡಿಸೆಂಬರ್ ಗಡುವು
ವಿಳಂಬ ಮಾಡುವ ಗುತ್ತಿಗೆದಾರರಿಗೆ ನೋಟಿಸ್
Team Udayavani, Nov 21, 2020, 4:37 PM IST
ಹುಬ್ಬಳ್ಳಿ: ಪ್ರತಿಷ್ಠಿತ ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿ ಯೋಜನೆಯ ಕುರಿತು ಸಾರ್ವಜನಿಕರಿಗೆಹೆಚ್ಚಿನ ಮಾಹಿತಿ ನೀಡಬೇಕು. ಅವರಲ್ಲಿರುವ ತಪ್ಪು ಅಭಿಪ್ರಾಯಗಳನ್ನು ದೂರ ಮಾಡುವನಿಟ್ಟಿನಲ್ಲಿ ಯೋಜನೆಯಡಿ ಪೂರ್ಣಗೊಂಡಿರುವ ಹಾಗೂ ಪ್ರಗತಿಯಲ್ಲಿರುವ ಕಾಮಗಾರಿಗಳ ಬಗ್ಗೆ ಮಾಧ್ಯಮಗಳ ಮುಖಾಂತರ ಪ್ರಚಾರ ಕೈಗೊಳ್ಳಿಎಂದು ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ| ರವಿಕುಮಾರ ಸುರಪುರ ಹೇಳಿದರು.
ಐಟಿ ಪಾರ್ಕ್‌ನಕೆಯುಐಡಿಎಫ್‌ಸಿ ಬೋರ್ಡ್ ರೂಮ್‌ನಲ್ಲಿ ಶುಕ್ರವಾರ ಸ್ಮಾರ್ಟ್ ಸಿಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು. ಟೆಂಡರ್ ಕರೆದು ಕಾರ್ಯಾದೇಶ ನೀಡಿದ ಕಾಮಗಾರಿಗಳನ್ನು ನಿಗದಿತಅವಧಿಯೊಳಗೆ ಪೂರ್ಣಗೊಳಿಸಬೇಕು. ಈಗಾಗಲೇ ಉದ್ಘಾಟನೆಯಾಗಿ ಸಾರ್ವಜನಿಕರಿಗೆ ಬಳಕೆಯಾಗುತ್ತಿರುವ ಯೋಜನೆಗಳ ಸ್ಥಳದಲ್ಲಿ ಸ್ಮಾರ್ಟ್ ಸಿಟಿ ಲಾಂಛನ ಹಾಗೂ ಕಾಮಗಾರಿ ವೆಚ್ಚದ ಬಗ್ಗೆ ಮಾಹಿತಿ ಫಲಕ ಅಳವಡಿಸಿ ಎಲ್ಲಾ ವಿವರಗಳನ್ನು ಸಾರ್ವಜನಿಕರಿಗೆ ಮುಕ್ತವಾಗಿ ಒದಗಿಸಬೇಕು. ಕಾಮಗಾರಿ ವಿಳಂಬ ಮಾಡುವ ಗುತ್ತಿಗೆದಾರರಿಗೆ ನೋಟಿಸ್ ನೀಡಬೇಕು. ಯೋಜನೆಯಡಿ ಅಭಿವೃದ್ಧಿ ಪಡಿಸುತ್ತಿರುವ ಎಲ್ಲಾ ರಸ್ತೆಗಳನ್ನು ಡಿಸೆಂಬರ್ ಅಂತ್ಯದ ವೇಳೆ ಪೂರ್ಣಗೊಳಿಸಬೇಕು ಎಂದು ತಾಕೀತು ಮಾಡಿದರು.
ಘನತ್ಯಾಜ್ಯ ವಿಲೇವಾರಿ ಕಾರ್ಯ ಸಮರ್ಪಕವಾಗಿನಿರ್ವಹಿಸಬೇಕು. ಮನೆಗಳಲ್ಲಿ, ಅಪಾರ್ಟ್‌ಮೆಂಟ್ ಗಳಲ್ಲಿ ಕಸ ವಿಂಗಡಣೆ ಮಾಡದವರಿಗೆ ದಂಡ ವಿಧಿಸಬೇಕು. ಇಂಟಿಗ್ರೇಟೆಡ್ ಕಮಾಂಡಿಂಗ್ ಸೆಂಟರ್‌ಹೆಚ್ಚು ಕ್ರಿಯಾಶೀಲವಾಗಬೇಕು. ಇದಕ್ಕೆ ತಗುಲಿರುವ45 ಕೋಟಿ ರೂ. ವೆಚ್ಚ ಸಾರ್ಥಕವಾಗಬೇಕು. ಆದಷ್ಟು ಬೇಗ ಮಹಾನಗರ ಪಾಲಿಕೆ, ಹೆಸ್ಕಾಂ, ಅಗ್ನಿಶಾಮಕ,
ಆಂಬ್ಯುಲೆನ್ಸ್, ಬಿಆರ್‌ಟಿಎಸ್ ಹೀಗೆ ಎಲ್ಲಾ ವಿಭಾಗಗಳಕಮಾಂಡಿಂಗ್ ಅಲ್ಲಿ ನೆರವೇರಬೇಕು. ಸ್ಮಾರ್ಟ್ ಸಿಟಿ ಯೋಜನೆ ಗುತ್ತಿಗೆದಾರರು ನಿಗದಿತ ಅವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಅಧಿಕಾರಿಗಳು, ಇಂಜಿನಿಯರ್‌ಗಳು ಕಾಮಗಾರಿಯ ಸ್ಥಳಗಳಿಗೆ ತೆರಳಿ ಗುಣಮಟ್ಟ ಪರಿಶೀಲಿಸಬೇಕು ಎಂದರು.
ಮಾಸ್ಕ್ ಧರಿಸದವರಿಗೆ ದಂಡ: ಅವಳಿನಗರದಲ್ಲಿ ಜನನಿಬಿಡ ಪ್ರದೇಶದಲ್ಲಿ ಬಹಳಷ್ಟು ಜನ ಮಾಸ್ಕ್ ಧರಿಸದೇ ಓಡಾಡುತ್ತಿರುವುದು ಕಂಡು ಬಂದಿದೆ. ಪಾಲಿಕೆ, ಪೊಲೀಸ್ ಇಲಾಖೆಯವರು ಮಾಸ್ಕ್ ಧರಿಸದವರಿಗೆ ದಂಡ ವಿಧಿಸಬೇಕು. ಪಾಲಿಕೆ ವತಿಯಿಂದ ಮಾರ್ಷಲ್‌ಗಳನ್ನು ನೇಮಕ ಮಾಡಿ ಎಂದು ಪಾಲಿಕೆ ಆಯುಕ್ತರಿಗೆ ನಿರ್ದೇಶಿಸಿದರು. ಹು-ಧಾ ಮಹಾನಗರ ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ, ಸ್ಮಾರ್ಟ್ ಸಿಟಿ ಯೋಜನೆ ವ್ಯವಸ್ಥಾಪಕ ನಿರ್ದೇಶಕ ಶಕೀಲ ಅಹ್ಮದ್ ಸೇರಿದಂತೆ ಹೆಸ್ಕಾಂ, ಸಂಚಾರಿ ಪೊಲೀಸರು, ಕುಡಿಯುವ ನೀರು ಹಾಗೂ ನೈರ್ಮಲ್ಯ ಮಂಡಳಿ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ಅವಳಿನಗರ ರಾಜ್ಯಕ್ಕೆ ಪ್ರಥಮ : ರಾಜ್ಯದ ಏಳು ನಗರಗಳಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನವಾಗುತ್ತಿದೆ. ಈ ನಗರಗಳ ಪೈಕಿ ಹುಬ್ಬಳ್ಳಿ-ಧಾರವಾಡ ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿದೆ. ಕರ್ನಾಟಕ ರಾಜ್ಯ ದೇಶದಲ್ಲಿ ಐದನೇ ಸ್ಥಾನದಲ್ಲಿದೆ. ಅವಳಿನಗರದಲ್ಲಿ ಒಟ್ಟು 80 ಕೋಟಿ ರೂ. ವೆಚ್ಚದ ಹೊಸ ಯೋಜನೆಗಳು, ವಿಸ್ತೃತ ಯೋಜನಾ ವರದಿ ಹಂತದಿಂದ ಟೆಂಡರ್ ಹಂತಕ್ಕೆ ಬಂದು ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಡಾ| ರವಿಕುಮಾರ ಸುರಪುರ ಹೇಳಿದರು.
ಸುಗಮ ಸಂಚಾರಕ್ಕೆ ಯೋಜನೆ : ಅವಳಿನಗರದ ರಸ್ತೆಗಳಲ್ಲಿ ಮಾರ್ಗದರ್ಶನ ನೀಡುವ ಸೈನ್‌ಬೋರ್ಡ್‌ಗಳಿಲ್ಲ. ಟ್ರಾಫಿಕ್ ಸಿಗ್ನಲ್‌ಗಳ ಕಾರ್ಯಕ್ಷಮತೆ ಹೆಚ್ಚಬೇಕು. ಸಂಚಾರಿವೃತ್ತಗಳಲ್ಲಿ ಜಿಬ್ರಾ ಕ್ರಾಸಿಂಗ್ ಪಟ್ಟಿಗಳಿರಬೇಕು. ಮುಂದಿನ ಹಲವು ವರ್ಷಗಳನ್ನು ಯೋಚಿಸಿ ರಸ್ತೆಗಳ ಅಗಲೀಕರಣ ಕೈಗೊಳ್ಳಿ. ಮುಂದಿನಸಭೆಯ ವೇಳೆ ಅವಳಿನಗರದ ಸಂಚಾರ ವ್ಯವಸ್ಥೆ ಸರಿಪಡಿಸುವ ನಿಟ್ಟಿನಲ್ಲಿ ಸಭೆ ನಡೆಸುತ್ತೇನೆ. – ಡಾ| ರವಿಕುಮಾರ ಸುರಪುರ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
MUST WATCH
ಹೊಸ ಸೇರ್ಪಡೆ
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.