30ರವರೆಗೆ ನಿಷೇಧಾಜ್ಞೆ ಮುಂದುವರಿಕೆ
Team Udayavani, Jun 10, 2020, 9:47 AM IST
ಧಾರವಾಡ: ಕೋವಿಡ್ ಹರಡದಂತೆ ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಜೂನ್.8 ರಿಂದ ಜೂ.30ರವರೆಗೆ ಜಿಲ್ಲೆಯಾದ್ಯಂತ ಸಿಆರ್‌ಪಿಸಿ 1973ರ ಕಲಂ 144 ರನ್ವಯ ನಿಷೇಧಾಜ್ಞೆ ಮುಂದುವರಿಸಿ ಡಿಸಿ ದೀಪಾ ಚೋಳನ್ ಆದೇಶ ಹೊರಡಿಸಿದ್ದಾರೆ.
ಸಂತೆ, ಜಾತ್ರೆ, ಸಮಾವೇಶ, ಮೆರವಣಿಗೆ, ಸಮ್ಮೇಳನ, ಕ್ರೀಡಾಕೂಟ ಹಾಗೂ ಎಲ್ಲ ಚಟುವಟಿಕೆಗಳನ್ನು ನಿಷೇಧಿಸಲಾಗಿದ್ದು, 05ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು ನಿಬಂರ್ಧಿಸಿದೆ. ರಾತ್ರಿ 9:00 ಗಂಟೆಯಿಂದ ಬೆಳಿಗ್ಗೆ 5:00 ಗಂಟೆಯವರೆಗೆ ಸಾರ್ವಜನಿಕ ತುರ್ತು ವೈದ್ಯಕೀಯ ಕಾರ್ಯ ಹೊರತುಪಡಿಸಿ ಅನಗತ್ಯ ತಿರುಗಾಡುವುದನ್ನು ನಿಬಂರ್ಧಿಸಿದೆ. ದೇವಸ್ಥಾನ, ಮಸೀದಿ, ಚರ್ಚ್‌ಗಳನ್ನು ತೆರೆಯುವುದಕ್ಕೆ ಸಂಬಂಧಿಸಿ ನೀಡಿರುವ ನಿರ್ದೇಶನ, ಹೋಟೆಲ್, ರೆಸ್ಟೋರೆಂಟ್ ತೆರೆಯುವುದಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಕಡ್ಡಾಯ ಪಾಲಿಸುವಂತೆ ತಿಳಿಸಿದ್ದಾರೆ. ಕರ್ಫ್ಯೂ ಅವಧಿಯಲ್ಲಿ ಜಿಲ್ಲೆಯಲ್ಲಿನ ಮದುವೆ ಕಾರ್ಯಕ್ರಮದಲ್ಲಿ ಕೇವಲ 50 ಜನರಿಗೆ ಮಾತ್ರ ಭಾಗವಹಿಸಲು ಅವಕಾಶವಿದೆ. ಶವ ಸಂಸ್ಕಾರದಲ್ಲಿ 20 ಜನರಿಗೆ ಮಾತ್ರ ಭಾಗವಹಿಸಲು ಅವಕಾಶವಿದೆ. ಶಿಕ್ಷಣ, ತರಬೇತಿ, ಕೋಚಿಂಗ್ ಸಂಸ್ಥೆಗಳು, ಹೊಟೆಲ್ ರೆಸ್ಟೋರೆಂಟ್, ಬಾರ್ ಸೇರಿದಂತೆ ಅತಿಥ್ಯ ಸೇವೆಗಳೆಲ್ಲವನ್ನು ನಿಬಂರ್ಧಿ ಸಲಾಗಿದ್ದು, ಆದರೆ ಆನ್ ಲೈನ್ ಕ್ಲಾಸ್‌ಗಳು ಹಾಗೂ ದೂರ ಸಂವೇದಿ ಕಲಿಕೆಗೆ ಇದು ಅನ್ವಯಿಸಲ್ಲ. ಸಂತೆ, ಜಾತ್ರೆ,ಸಮಾವೇಶ ಸಿನಿಮಾ ಮೆರವಣಿಗೆ ಸಮ್ಮೇಳನ, ಕ್ರೀಡಾಕೂಟ, ಪ್ರಾರ್ಥನೆ ಸ್ಥಳಗಳು, ಚಿತ್ರಮಂದಿರ, ಮಾಲ್, ಜಿಮ್ ರಾಜಕೀಯ ಪಕ್ಷಗಳ ಸಮಾವೇಶ ಹಾಗೂ ಯಾವುದೇ ಧಾರ್ಮಿಕ ಸಮಾರಂಭಗಳು ಜರುಗುವುದನ್ನು ನಿಬಂರ್ಧಿಸಲಾಗಿದೆ.
ಎಲ್ಲಾ ಸಾಮಾಜಿಕ ರಾಜಕೀಯ ಶೈಕ್ಷಣಿಕ ಸಾಂಸ್ಕೃತಿಕ ಧಾರ್ಮಿಕ ಹಾಗೂ ಕ್ರೀಡಾ ಚಟುವಟಿಕೆಗಳು ಜರುಗುವುದನ್ನು ನಿಬಂರ್ಧಿಸಲಾಗಿದೆ. ಸರಕಾರಿ ವಾಹನಗಳಿಗೆ ಮತ್ತು ಕೋವಿಡ್-19 ಕಾರ್ಯಾಚರಣೆಯಲ್ಲಿ ಕರ್ತವ್ಯನಿರತ ಸಿಬ್ಬಂದಿ ಮತ್ತು ವಾಹನಗಳಿಗೆ ಈ ಆದೇಶ ಅನ್ವಯಿಸಲ್ಲ. ಈ ಆದೇಶ ಉಲ್ಲಂಘಿಸುವವರ ವಿರುದ್ಧ ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆ 1897, ಕರ್ನಾಟಕ ಸಾಂಕ್ರಾಮಿಕ ರೋಗಗಳ (ಕೋವಿಡ್) ನಿಯಂತ್ರಣ ಕಾಯ್ದೆ-2020 ಹಾಗೂ ಭಾರತೀಯ ದಂಡ ಸಂಹಿತೆ ಕಲಂ 188 ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಆದೇಶದಲ್ಲಿ ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ
MUST WATCH
ಹೊಸ ಸೇರ್ಪಡೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.