ವಿವಿ ಧನಸಹಾಯ ಆಯೋಗದ ಶಿಫಾರಸ್ಸಿಗೆ ಶೀಘ್ರ ಒಪ್ಪಿಗೆ ಭರವಸೆ
Team Udayavani, Jul 26, 2017, 12:31 PM IST
ಹುಬ್ಬಳ್ಳಿ: ವಿಶ್ವವಿದ್ಯಾಲಯ ಧನಸಹಾಯ ಆಯೋಗ 7ನೇ ವೇತನ ಪರಿಷ್ಕರಣೆಗೆ ರಚಿಸಿದ ಚವ್ಹಾಣ ಸಮಿತಿ ವರದಿಯನ್ನು ಜುಲೈ ಅಂತ್ಯದಲ್ಲಿ ಅನುಷ್ಠಾನಕ್ಕೆ ಒಪ್ಪಿಗೆ ನೀಡಲು ತೀರ್ಮಾನಿಸಿದೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ ಜಾವಡೇಕರ ಅವರು ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶೈಕ್ಷಿಕ ಸಂಘ ಹಾಗೂ ಅಖೀಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ ಸಂಘದ ನಿಯೋಗಕ್ಕೆ ತಿಳಿಸಿದರು.
ನವದೆಹಲಿಯಲ್ಲಿ ನಿಯೋಗವು ಸಚಿವರನ್ನು ಭೇಟಿ ಮಾಡಿತು. ಈ ವೇಳೆ ಪ್ರಕಾಶ ಜಾವಡೇಕರ ಹಾಗೂ ರಾಜ್ಯ ಸಚಿವ ಡಾ| ಮಹೇಂದ್ರನಾಥ ಪಾಂಡೆ ಸಮ್ಮುಖದಲ್ಲಿ ನಡೆದ ಚರ್ಚೆಯಲ್ಲಿ 6ನೇ ವೇತನ ಆಯೋಗದ ತಾರತಮ್ಯಗಳಿಗೆ ಪರಿಹಾರ, ಹೊಸ ಪಿಂಚಣಿ ಯೋಜನೆಯ ಬದಲಾಗಿ 2004ಕ್ಕಿಂತ ಮೊದಲಿದ್ದ ಹಳೆಯ ಪಿಂಚಣಿಗೆ ಒತ್ತಾಯ, ಕಾರ್ಯನಿರತ ಅಧ್ಯಾಪಕರಿಗೆ ಪಿಎಚ್‌ಡಿ ಕೋರ್ಸ್ ವಕ್‌ನಿಂದ ವಿನಾಯಿತಿ,
ಪ್ರಾಚಾರ್ಯರ ಸೇವಾವಧಿಯನ್ನು ನಿವೃತ್ತಿಯವರೆಗೆ ವಿಸ್ತರಣೆ, ಕಾಲ ಕಾಲಕ್ಕೆ ಅಧ್ಯಾಪಕರ ನೇಮಕಾತಿ ಹೀಗೆ ಹಲವಾರು ವಿಷಯಗಳ ಕುರಿತು ಒತ್ತಾಯಿಸಲಾಯಿತು. ಸಚಿವರು ಇವುಗಳನ್ನು ಪರಿಹರಿಸಲು ತಾತ್ವಿಕ ಒಪ್ಪಿಗೆ ನೀಡಿದರು ಹಾಗೂ ವಿಶೇಷವಾಗಿ ವಿಶ್ವವಿದ್ಯಾಲಯ ಹಾಗೂ ಕಾಲೇಜು ಅಧ್ಯಾಪಕರಿಗೆ 7ನೇ ವೇತನದ ಆಯೋಗ ಶಿಫಾರಸ್ಸುಗಳನ್ನು ಜುಲೈ ಕೊನೆಯಲ್ಲಿ ಕ್ಯಾಬಿನೆಟ್ ಒಪ್ಪಿಗೆ ಪಡೆದು ಅನುಷ್ಠಾನಗೊಳಿಸಲಾಗುವುದು ಎಂದು ಸಚಿವರು ಹೇಳಿದರು.
ನಿಯೋಗದಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ| ಜಗದೀಶ ಪ್ರಸಾದ ಸಿಂಗಾಲ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಮಹೇಂದ್ರ ಕಪೂರ, ಮಹೇಂದ್ರಕುಮಾರ, ಅನುರಾಗ ಮಿಶ್ರಾ ಇದ್ದರು. ಸಚಿವರಿಗೆ ಹಾಗೂ ರಾಷ್ಟ್ರೀಯ ಶೈಕ್ಷಿಕ ಸಂಘದ ಪದಾಧಿಕಾರಿಗಳಿಗೆ ಕಾಲೇಜು ಶಿಕ್ಷಕ ಸಂಘದ ಡಾ| ರಘು ಅಕ್ಮಂಚಿ, ಡಾ| ಗುರುನಾಥ ಬಡಿಗೇರ, ಡಾ| ರಾಜಣ್ಣ, ನಾರಾಯಣ ಉಪಾಧ್ಯ ಕೃತಜ್ಞತೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.