ಉಕ ಕೈಗಾರಿಕೆ ಅಭಿವೃದ್ಧಿಗೆ ಉತ್ತೇಜನ

Team Udayavani, Aug 30, 2019, 9:44 AM IST

huballi-tdy-3

ಹುಬ್ಬಳ್ಳಿ: ಸಚಿವ ಜಗದೀಶ ಶೆಟ್ಟರ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಯಿತು.

ಹುಬ್ಬಳ್ಳಿ: ಉಕ ಭಾಗದಲ್ಲಿ ಹೊಸ ಕೈಗಾರಿಕೆಗಳ ಆರಂಭಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸರಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದು, ಅಧಿಕಾರಿ ವರ್ಗ ಉದ್ಯಮಿಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸಹಕಾರ ನೀಡಬೇಕು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ ಹೇಳಿದರು.

ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ಸಂಸ್ಥೆ(ಕೆಯುಐಡಿಎಫ್‌ಸಿ)ಯಲ್ಲಿ ಗುರುವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಈ ಭಾಗದಲ್ಲಿ ಹೊಸ ಕೈಗಾರಿಕೆಗಳ ಆರಂಭಕ್ಕೆ ಬೇಕಾದ ಎಲ್ಲ ಸೌಲಭ್ಯಗಳಿವೆ. ಹೊಸ ಉದ್ದಿಮೆದಾರರನ್ನು ಈ ಭಾಗಕ್ಕೆ ಕರೆತರುವ ಪ್ರಯತ್ನ ಮಾಡುತ್ತೇವೆ. ಇದಕ್ಕೆ ಪೂರಕವಾಗಿ ಎಲ್ಲ ಇಲಾಖೆಯ ಅಧಿಕಾರಿಗಳು ಕೆಲಸ ನಿರ್ವಹಿಸಬೇಕು. ಇಲ್ಲಿನ ಕೈಗಾರಿಕೆ ಗಮನಾರ್ಹ ಬೆಳವಣಿಗೆಗೆ ಎಲ್ಲರೂ ಶ್ರಮಿಸಬೇಕು ಎಂದರು.

ಮಾರ್ಗಸೂಚಿ ಸರಿಯಿಲ್ಲ: ಕೆಐಎಡಿಬಿ ನಿವೇಶನಗಳಿಗೆ ಹೋಲಿಸಿದರೆ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ನಿವೇಶನಗಳು ಸಾಕಷ್ಟು ದುಬಾರಿಯಾಗಿವೆ. ವರ್ಷದಿಂದ ವರ್ಷಕ್ಕೆ ದರ ಹೆಚ್ಚಿಸುತ್ತಿರುವುದು ಇದು ಸರಿಯಾದ ಮಾರ್ಗಸೂಚಿಯಲ್ಲ. ಕೈಗಾರಿಕೆಗಳ ನಿವೇಶನ ದುಬಾರಿಯಾಗುವುದರಿಂದ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಸಾಧ್ಯವಿಲ್ಲ. ಒಂದು ಎಕರೆ ಭೂಮಿಗೆ 3 ಕೋಟಿ ರೂ. ನಿಗದಿ ಮಾಡಿರುವುದರಿಂದ ಸಣ್ಣ ಕೈಗಾರಿಕೆಗಳ ಆರಂಭ ಅಸಾಧ್ಯವಾಗಿದೆ. ಎರಡು ವರ್ಷಗಳಿಂದ ಕೆಐಎಡಿಬಿ ನಿವೇಶನಗಳಿಗೆ ಹೆಚ್ಚು ಬೇಡಿಕೆ ಬಂದಿರುವ ಹಿನ್ನೆಲೆಯಲ್ಲಿ ಮಾರ್ಗಸೂಚಿಗಳಿಗಾಗಿ ಕಾಯುತ್ತಿರುವುದು ಸರಿಯಲ್ಲ. ಇದರಿಂದ ಕೈಗಾರಿಕಾಭಿವೃದ್ಧಿಗೆ ಹಿನ್ನಡೆಯಾಗುತ್ತದೆ. ಇಂತಹ ಹಲವು ಸಮಸ್ಯೆಗಳ ಕುರಿತು ಆ. 30ರಂದು ರಾಜ್ಯದ ಮಟ್ಟದಲ್ಲಿ ನಡೆಯಲಿರುವ ಅಧಿಕಾರಿಗಳ ಸಭೆಯಲ್ಲಿ ಚರ್ಚಿಸಿ ಸೂಕ್ತ ನಿರ್ಧರಿಸಲಾಗುವುದು.

ಟೌನ್‌ಶಿಪ್‌ಗೆ ಪ್ರಸ್ತಾವನೆ: ಜಿಲ್ಲಾ ಕೈಗಾರಿಕೆ ಕೇಂದ್ರದ ಜಂಟಿ ನಿರ್ದೇಶಕ ಪಿ. ನಾಗೇಶ ಮಾತನಾಡಿ, ತಾರಿಹಾಳ ಕೈಗಾರಿಕಾ ಪ್ರದೇಶವನ್ನು ಟೌನ್‌ಶಿಪ್‌ ಎಂದು ಪರಿವರ್ತಿಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೆಲ ಮಾಹಿತಿಗಳ ಸ್ಪಷ್ಟನೆ ಕೇಳಲಾಗಿದ್ದು, ಅದನ್ನು ಒದಗಿಸಲಾಗುವುದು. ಇಲ್ಲಿನ ರಾಜ್ಯ ಹಣಕಾಸು ನಿಗಮದ ಡಿಜಿಎಂ ಹುದ್ದೆಯನ್ನು ರದ್ದುಗೊಳಿಸಿ ಎಜಿಎಂ ಹುದ್ದೆಗೆ ಸೀಮಿತಗೊಳಿಸಲಾಗಿದೆ. ಈ ಹುದ್ದೆಗೆ 2 ಕೋಟಿ ರೂ. ಕೈಗಾರಿಕೆ ಸಾಲ ಮಾತ್ರ ಮಂಜೂರು ಮಾಡಲು ಅವಕಾಶವಿದೆ. ಹಿಂದಿನಂತೆ ಡಿಜಿಎಂ ಹುದ್ದೆ ಮುಂದುವರಿಸಿದರೆ 5 ಕೋಟಿ ರೂ. ವರೆಗೆ ಮಂಜೂರು ಮಾಡಬಹುದಾಗಿದೆ. ಈ ಹುದ್ದೆ ರದ್ದಾಗಿರುವ ಪರಿಣಾಮ ಬೆಂಗಳೂರಿಗೆ ಓಡಾಡುವಂತಾಗಿದೆ ಎಂದು ವಿವರಿಸಿದರು.

ಜಿಲ್ಲಾಧಿಕಾರಿ ದೀಪಾ ಚೋಳನ್‌, ಜಿಪಂ ಸಿಇಒ ಡಾ| ಬಿ.ಸಿ. ಸತೀಶ, ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ, ಉಪವಿಭಾಗಾಧಿಕಾರಿ ಮಹ್ಮದ್‌ ಜುಬೇರ್‌, ಕೆಐಡಿಬಿ ಅಧಿಕಾರಿ ಮನೋಹರ ವಡ್ಡರ ಇನ್ನಿತರರಿದ್ದರು.

ಟಾಪ್ ನ್ಯೂಸ್

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್

1-dee

Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ

1-ani

Mangaluru; ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ : ಮೂವರ ಬಂಧನ

ಕಳಕಮಲ್ಲಯ್ಯ ಕ್ಷೇತ್ರ: ದಕ್ಷಿಣ ಕಾಶಿ ಪ್ರಸಿದ್ಧಿಯ ಸುಕ್ಷೇತ್ರ ಶ್ರೀಕಾಲ ಕಾಲೇಶ್ವರ…

ಕಳಕಮಲ್ಲಯ್ಯ ಕ್ಷೇತ್ರ: ದಕ್ಷಿಣ ಕಾಶಿ ಪ್ರಸಿದ್ಧಿಯ ಸುಕ್ಷೇತ್ರ ಶ್ರೀಕಾಲ ಕಾಲೇಶ್ವರ…

ಇದು ವಿಶ್ವದ ಅತಿ ಎತ್ತರದ ಏಕಶಿಲಾ ಬೆಟ್ಟ… Online ನೋಂದಣಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ

ಇದು ವಿಶ್ವದ ಅತಿ ಎತ್ತರದ ಏಕಶಿಲಾ ಬೆಟ್ಟ… Online ನೋಂದಣಿ ಇಲ್ಲದೆ ಚಾರಣಕ್ಕೆ ಅವಕಾಶವಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯತ್ನಾಳ್‌

Hubli: ಸರ್ಕಾರ ಮತ್ತು ವಿಜಯೇಂದ್ರ ನಡುವೆ ಉತ್ತಮ ಅಡ್ಜಸ್ಟ್‌ಮೆಂಟ್ ಇದೆ: ಯತ್ನಾಳ್‌ ಆರೋಪ

Hubli: ಕಸದ ವಾಹನಕ್ಕೆ ಸ್ಕೂಟಿ ಡಿಕ್ಕಿ: ಓರ್ವ ವಿದ್ಯಾರ್ಥಿ ಸಾವು, ಮತ್ತೋರ್ವ ಗಂಭೀರ

Hubli: ಕಸದ ವಾಹನಕ್ಕೆ ಸ್ಕೂಟಿ ಡಿಕ್ಕಿ: ಓರ್ವ ವಿದ್ಯಾರ್ಥಿ ಸಾವು, ಮತ್ತೋರ್ವ ಗಂಭೀರ

BJP ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಗೊತ್ತಿಲ್ಲ: ಸಚಿವ ಜೋಶಿ

BJP ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಗೊತ್ತಿಲ್ಲ: ಸಚಿವ ಜೋಶಿ

BJP ರಾಜ್ಯಾಧ್ಯಕ್ಷರ ನೇಮಕ ಹೈಕಮಾಂಡ್‌ ನಿರ್ಧಾರ: ಅರವಿಂದ ಬೆಲ್ಲದ

BJP ರಾಜ್ಯಾಧ್ಯಕ್ಷರ ನೇಮಕ ಹೈಕಮಾಂಡ್‌ ನಿರ್ಧಾರ: ಅರವಿಂದ ಬೆಲ್ಲದ

Hubli: ಮೀಟರ್‌ ಬಡ್ಡಿಗೆ ಮನನೊಂದು ಲಾರಿ ಚಕ್ರದಡಿ ಬಿದ್ದು ವ್ಯಕ್ತಿ ಆತ್ಮಹ*ತ್ಯೆ

Hubli: ಮೀಟರ್‌ ಬಡ್ಡಿಗೆ ಮನನೊಂದು ಲಾರಿ ಚಕ್ರದಡಿ ಬಿದ್ದು ವ್ಯಕ್ತಿ ಆತ್ಮಹ*ತ್ಯೆ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-wl

ಅಖಿಲ ಭಾರತ ಅಂತರ್‌ ವಿ.ವಿ.ವೇಟ್‌ಲಿಫ್ಟಿಂಗ್‌:ಮಂಗಳೂರು ವಿವಿ ರನ್ನರ್ ಅಪ್‌

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್

1-dee

Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.