ಡಿಪೋ ಮ್ಯಾನೇಜರ್‌ ವಿರುದ್ಧ ಸೂಕ್ತ ಕ್ರಮ


Team Udayavani, May 3, 2017, 4:11 PM IST

hub5.jpg

ಧಾರವಾಡ: ರಜೆ ಕೇಳಿದಕ್ಕಾಗಿ ಡಿಪೋ ಮ್ಯಾನೇಜರ್‌ ನಿಂದ ಹಲ್ಲೆಗೊಳಗಾಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಂಡಕ್ಟರ್‌ ಮಂಜುನಾಥ ಉಪ್ಪೇರಿ ಅವರನ್ನು ವಾಯವ್ಯ ಸಾರಿಗೆ ವ್ಯವಸ್ಥಾಪಕ ನಿರ್ದೇಶಕ ಪ್ರಭು ನಾಯಕ ಹಾಗೂ ಅಧ್ಯಕ್ಷ ಸದಾನಂದ ಡಂಗನವರ ಮಂಗಳವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. 

ಜಿಲ್ಲಾಸ್ಪತ್ರೆಗೆ ತೆರಳಿ ಮಂಜುನಾಥ ಜೊತೆ ಘಟನೆ ಕುರಿತು ಮಾಹಿತಿ ಪಡೆದ ಇಬ್ಬರೂಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ,  ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಸ್ಪತ್ರೆ ವೈದ್ಯರಿಗೆ ಸೂಚನೆ ನೀಡಿದರು. ತಪ್ಪು ಮಾಡಿದವರ ವಿರುದ್ದ ಕ್ರಮ ಕೈಗೊಳ್ಳುವುದಾಗಿ ಹಲ್ಲೆಗೊಳಗಾಗಿರುವ ಮಂಜುನಾಥನಿಗೆ ಭರವಸೆ ನೀಡಿದರು. 

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ವಾಯವ್ಯ ಸಾರಿಗೆ ವ್ಯವಸ್ಥಾಪಕ  ನಿರ್ದೇಶಕ ಪ್ರಭು ನಾಯಕ್‌, ನಾನು ಈಗಷ್ಟೇ ಅಧಿಕಾರ ವಹಿಸಿಕೊಂಡಿದ್ದು, ಈ ಬಗ್ಗೆ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಳ್ಳುತ್ತೇನೆ. ಈ ರೀತಿಯ ಘಟನೆ ಮುಂದಿನ ದಿನಗಳಲ್ಲಿ ಮರುಕಳಿಸದಂತೆ ಆಡಳಿತದಲ್ಲಿ ಸುಧಾರಣೆ ತರಲು ಪ್ರಯತ್ನಿಸುವುದಾಗಿ ಹೇಳಿದರು. 

ರಜೆ ಕೇಳಿದ ಮಾತ್ರಕ್ಕೆ ಕಂಡಕ್ಟರ್‌ ಕೈ ಮುರಿಯುವ ರೀತಿ ಹಲ್ಲೆ ಮಾಡಿದ್ದು ತಪ್ಪು. ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ, ಡಿಪೋ ಮ್ಯಾನೇಜರ್‌ ವಿರುದ್ಧ 2-3 ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಸದಾನಂದ ಡಂಗನವರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. 

ಸಚಿವರ ಮನೆಯಲ್ಲಿ ಸಭೆ: ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಬಳಿಕ ಸಚಿವರ ಮನೆಗೆ ತೆರಳಿದ ನಾಯಕ ಮತ್ತು ಡಂಗನವರ ಸಚಿವರೊಂದಿಗೆ ಚರ್ಚಿಸಿದ್ದು, ಈ ವೇಳೆ ಸಚಿವ ವಿನಯ ಕುಲಕರ್ಣಿ, ಹಲ್ಲೆ ಮಾಡಿರುವ ಡಿಪೋ ಮ್ಯಾನೇಜರ್‌ ದೀಪಕ ಜಾಧವ ಅವರನ್ನು ಅಮಾನತು ಮಾಡುವಂತೆ ಸೂಚಿಸಿದ್ದಾರೆ.

ಇದಕ್ಕೆ ಸ್ಪಂದಿಸಿದ ಪ್ರಭು ನಾಯಕ, ಶೀಘ್ರವೇ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಈ ಕುರಿತು “ಉದಯವಾಣಿ’ಯೊಂದಿಗೆ ಮಾತನಾಡಿದ ವಾಯವ್ಯ ಸಾರಿಗೆ ಸಂಸ್ಥೆ ನಿರ್ದೇಶಕ ಮನೋಜ ಕರ್ಜಗಿ, ಡಿಪೋ ಮ್ಯಾನೇಜರ್‌ ವಿರುದ್ಧ ಕ್ರಮ ಶತಸಿದ್ಧ. ಇದರಲ್ಲಿ ಎರಡು ಮಾತಿಲ್ಲ.

ಆದರೆ ಕಾನೂನಾತ್ಮಕವಾಗಿ ಅಮಾನತು ಮಾಡಲು ಕೆಲ ಪ್ರಕ್ರಿಯೆಗಳು ಆಗಬೇಕಿದ್ದು, ಅದಕ್ಕಾಗಿ ತಯಾರಿ ನಡೆದಿದೆ. ಈಗಂತೂ ದೀಪಕ ಜಾಧವ ಅವರನ್ನು ಡಿಪೋದಲ್ಲಿ ಕಾರ್ಯ ಮಾಡದಂತೆ, ವರ್ಗಾವಣೆ ಮಾಡಲು ಸೂಚಿಸಿದ್ದು, ಈ ಬಗ್ಗೆ ವರದಿ ಬಂದ ಬಳಿಕ ಅಮಾನತು ಮಾಡಲು ನಿರ್ಧರಿಸಲಾಗಿದೆ. 

ಸ್ಟಾಫ್‌ ಆ್ಯಂಡ್‌ ವರ್ಕರ್ಸ್‌ ಯೂನಿಯನ್‌ ಅವರೊಂದಿಗೆ ಚರ್ಚಿಸಿ, ಕ್ರಮ ಕೈಗೊಳ್ಳುವ ಭರವಸೆ ನೀಡಲಾಗಿದೆ. ಈಗಾಗಲೇ ಈ ಕುರಿತಂತೆ ಶಹರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದ್ದಾರೆ.  

ಟಾಪ್ ನ್ಯೂಸ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

6

Kundapura: ವಿಶ್ವ ವಿಖ್ಯಾತ ಮರವಂತೆಯಲ್ಲಿ ಬಸ್‌ ನಿಲ್ದಾಣವೇ ಇಲ್ಲ !

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

5

Puttur: ಗ್ರಾಮ ಚಾವಡಿಗೆ 150 ವರ್ಷ ಹಳೆಯ ಕಟ್ಟಡವೇ ಗತಿ!

4

Sullia: ಉಪಟಳ ಮಾಡುವ ಕೋತಿಗಳಿಗೆ ಶಾಕ್‌ ಟ್ರೀಟ್‌ಮೆಂಟ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.