ಟರ್ಮಿನಲ್‌ ಕಟ್ಟಡ ವಿಸ್ತರಣೆಗೆ ಪ್ರಸ್ತಾವನೆ

Team Udayavani, Dec 8, 2018, 4:57 PM IST

8-december-18.gif

ಹುಬ್ಬಳ್ಳಿ: ಇಲ್ಲಿನ ವಿಮಾನ ನಿಲ್ದಾಣದ ಟರ್ಮಿನಲ್‌ ಕಟ್ಟಡ ಇನ್ನಷ್ಟು ವಿಸ್ತಾರಗೊಳ್ಳಲಿದ್ದು, ಈ ನಿಟ್ಟಿನಲ್ಲಿ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ನಗರಕ್ಕೆ ಆಗಮಿಸುವ ವಿಮಾನಗಳ ಸಂಖ್ಯೆ ಹೆಚ್ಚತೊಡಗಿದ್ದು, ಪ್ರಯಾಣಿಕರ ಸಂಖ್ಯೆಯೂ ದಿನದಿಂದ ದಿನಕ್ಕೆ ವೃದ್ಧಿಸುತ್ತಿದೆ. ಭದ್ರತಾ ದೃಷ್ಟಿಯಿಂದ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಪ್ರಯಾಣಿಕರು ಹಾಗೂ ಅವರ ಸರಕಗಳ ತಪಾಸಣೆ ಮಾಡುವುದು, ನಿರ್ವಹಿಸುವುದು ಕಷ್ಟಕರವೆನಿಸುತ್ತಿದೆ. ಈಗಿರುವ ಟರ್ಮಿನಲ್‌ ಕಟ್ಟಡ, ಅಪ್ರಾನ್‌ ಸ್ಥಳ ಚಿಕ್ಕದೆನಿಸುತ್ತಿದೆ. ಅದನ್ನು ವಿಸ್ತರಿಸುವ ನಿಟ್ಟಿನಲ್ಲಿ ಸ್ಥಳೀಯ ವಿಮಾನ ನಿಲ್ದಾಣದ ನಿರ್ದೇಶಕರು ಕೇಂದ್ರ ವಿಮಾನಯಾನ ಸಚಿವರ ಸಲಹೆ ಮೇರೆಗೆ ವಿಮಾನ ನಿಲ್ದಾಣದ ಹೆಡ್‌ಕ್ವಾರ್ಟರ್ಸ್‌ಗೆ ಟರ್ಮಿನಲ್‌ ಕಟ್ಟಡ ವಿಸ್ತರಣೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಕೇಂದ್ರ ವಿಮಾನಯಾನ ಸಚಿವ ಜಯಂತ ಸಿನ್ಹಾ ಅವರು ಇತ್ತೀಚೆಗೆ ನಗರಕ್ಕೆ ಆಗಮಿಸಿದ್ದಾಗ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ಗಮನಿಸಿದ್ದರು. ಅಲ್ಲದೆ ಸಂಸದ ಪ್ರಹ್ಲಾದ ಜೋಶಿ ಮತ್ತು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರು ಟರ್ಮಿನಲ್‌ ಕಟ್ಟಡ ವಿಸ್ತರಣೆ ಕುರಿತು ಪ್ರಸ್ತಾಪಿಸಿದ್ದಕ್ಕೆ ಸ್ಥಳೀಯ ವಿಮಾನ ನಿಲ್ದಾಣ ನಿರ್ದೇಶಕರಿಗೆ ಟರ್ಮಿನಲ್‌ ಕಟ್ಟಡ ವಿಸ್ತರಣೆಗೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದ್ದರು ಎಂದು ತಿಳಿದುಬಂದಿದೆ.

ಅಂತಾರಾಷ್ಟ್ರೀಯ ಗುಣಮಟ್ಟ: ನಗರದ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ಗುಣಮಟ್ಟಕ್ಕೆ ತಕ್ಕಂತೆ ಅಂದಾಜು 141 ಕೋಟಿ ರೂ. ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗಿದೆ. ರನ್‌ ವೇ 2,600 ಮೀಟರ್‌ ಉದ್ದ ಹಾಗೂ 45 ಮೀಟರ್‌ ಅಗಲ ಇದೆ. ಟರ್ಮಿನಲ್‌ ಕಟ್ಟಡ 5,400 ಚಮೀ ವಿಸ್ತೀರ್ಣ ಹೊಂದಿದ್ದು, ಸಂಪೂರ್ಣ ಕೇಂದ್ರೀಯ ಹವಾನಿಯಂತ್ರಿತ (ಸಿಎಸಿ) ವ್ಯವಸ್ಥೆ ಹೊಂದಿದೆ. ಪ್ರಯಾಣಿಕರ ಸುರಕ್ಷತೆ, ಭದ್ರತೆಗಾಗಿ 80 ಸಿಸಿಟಿವಿ ಹಾಗೂ ಸರಕು ತಪಾಸಣೆಗಾಗಿ ಆರು ಎಕ್ಸರೇ ಯಂತ್ರಗಳನ್ನು ಅಳವಡಿಸಲಾಗಿದೆ. ಈ ಕಟ್ಟಡದಲ್ಲಿ ಏಕಕಾಲಕ್ಕೆ 200ಕ್ಕೂ ಅಧಿಕ ಪ್ರಯಾಣಿಕರು ಕುಳಿತುಕೊಳ್ಳಬಹುದಾಗಿದೆ. 6ಕ್ಕೂ ಅಧಿಕ ಏರ್‌ ಲೈನ್ಸ್‌ ಕೌಂಟರ್‌ಗಳಿವೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರಬಹುದಾದ ಎಲ್ಲ ಬಗೆಯ ಆಧುನಿಕ ಸೌಲಭ್ಯಗಳನ್ನು ಇಲ್ಲಿನ ಟರ್ಮಿನಲ್‌ ಹೊಂದಿದೆ.

ಹುಬ್ಬಳ್ಳಿ ವಿಮಾನ ನಿಲ್ದಾಣ ಟರ್ಮಿನಲ್‌ ಕಟ್ಟಡದಲ್ಲಿ ಪ್ರಯಾಣಿಕರದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರಿಂದಾಗಿ ಟರ್ಮಿನಲ್‌ ಕಟ್ಟಡ ಸಾಲುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕಟ್ಟಡವನ್ನು ವಿಸ್ತರಿಸಲು ಯೋಜಿಸಲಾಗಿದ್ದು, ಕೇಂದ್ರ ವಿಮಾನಯಾನ ಸಚಿವರ ಸೂಚನೆ ಮೇರೆಗೆ ಈಗಾಗಲೇ ವಿಮಾನ ನಿಲ್ದಾಣದ ಹೆಡ್‌ ಕ್ವಾರ್ಟರ್ಸ್‌ಗೆ ಪ್ರಸ್ತಾವನೆ ಕೂಡ ಸಲ್ಲಿಸಲಾಗಿದೆ.
. ಅಹಲ್ಯಾ ಎಸ್‌. ಕಾಕೋಡಿಕರ,
  ಹುಬ್ಬಳ್ಳಿ ವಿಮಾನ ನಿಲ್ದಾಣ ನಿರ್ದೇಶಕರು.

ಶಿವಶಂಕರ ಕಂಠಿ

ಟಾಪ್ ನ್ಯೂಸ್

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು

Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Delhi-Cong

Delhi Polls: ದಿಲ್ಲಿಯ ಮಹಿಳಾ ಮತದಾರರ ಸೆಳೆಯಲು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ನನ್ನ ಮಗಳ ಬಾಯ್‌ಫ್ರೆಂಡ್‌ ಫೋಟೋ ರಿವೀಲ್‌ ಮಾಡಿದರೆ 21 ಲಕ್ಷ ಬಹುಮಾನ: ಬಿಗ್‌ ಬಾಸ್‌ಗೆ ಸವಾಲು

ನನ್ನ ಮಗಳ ಬಾಯ್‌ಫ್ರೆಂಡ್‌ ಫೋಟೋ ರಿವೀಲ್‌ ಮಾಡಿದರೆ 21 ಲಕ್ಷ ಬಹುಮಾನ: ಬಿಗ್‌ ಬಾಸ್‌ಗೆ ಸವಾಲು

Mahakumbh Mela: ಪ್ರಯಾಗ್ ರಾಜ್‌ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು‌ ಬೆದರಿಕೆ

Mahakumbh Mela: ಪ್ರಯಾಗ್ ರಾಜ್‌ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು‌ ಬೆದರಿಕೆ

siddanna-2

HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

cyber crime

MRPL ನಲ್ಲಿ ಉದ್ಯೋಗ ಆಮಿಷ: ಯುವಕನಿಗೆ 1 ಲಕ್ಷ ರೂ.ವಂಚನೆ

1anna

Karkala; ಕೋರ್ಟ್‌ಗೆ ಹಾಜರಾದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ

Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು

Miracle: ಗುಳಿ ಗುಳಿ ಶಂಕರ ಎಂಬ ಮಾಂತ್ರಿಕ ಕೊಳ… ಇಲ್ಲಿದೆ ಹಲವು ಚಮತ್ಕಾರಿ ವಿಚಾರಗಳು

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Table Space: ಟೇಬಲ್‌ ಸ್ಪೇಸ್‌ ಸ್ಥಾಪಕ ಅಮಿತ್‌ ಬ್ಯಾನರ್ಜಿ ಹೃದಯಾಘಾತದಿಂದ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.