
ಆನ್‌ಲೈನ್ ಪರೀಕ್ಷೆ ವಿರೋಧಿಸಿ ಎಐಡಿವೈಒ ಪ್ರತಿಭಟನೆ-ಮನವಿ
Team Udayavani, Dec 28, 2019, 11:32 AM IST

ಧಾರವಾಡ: ಐಟಿಐ ತರಬೇತುದಾರರಿಗೆ ತರಲು ಉದ್ದೇಶಿಸಿರುವ ಆನ್‌ಲೈನ್ ಪರೀಕ್ಷಾ ಪದ್ಧತಿ ರದ್ದುಗೊಳಿಸಲು ಆಗ್ರಹಿಸಿ, ಪರೀಕ್ಷಾ ಶುಲ್ಕ ಹೆಚ್ಚಳ ಹಾಗೂ ಪರೀಕ್ಷಾ ಶುಲ್ಕಕ್ಕೆ ಜಿಎಸ್‌ಟಿ ವಿಧಿಸಿದ್ದನ್ನು ವಿರೋಧಿಸಿ ನಗರದಲ್ಲಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಸಂಘಟನೆ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.
ಕಲಾಭವನ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ಕೈಗೊಂಡು, ಡಿಸಿ ಮೂಲಕ ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು. ಎಐಡಿವೈಒ ಜಿಲ್ಲಾಧ್ಯಕ್ಷ ಭವಾನಿಶಂಕರ್ ಎಸ್.ಗೌಡ ಮಾತನಾಡಿ, ಐಟಿಐ ಪರೀಕ್ಷಾ ಶುಲ್ಕಕ್ಕೆ ಜಿಎಸ್‌ಟಿ ಹಾಕುವ ಪದ್ಧತಿ ಜಾರಿಗೆ ಬಂದಿದೆ. ಇದು ಅತ್ಯಂತ ಖಂಡನೀಯ ಕ್ರಮವಾಗಿದೆ. ಡಿಜಿಇಟಿ ಆನ್‌ಲೈನ್ ಪರೀಕ್ಷಾ ಪದ್ಧತಿಯನ್ನು ಜಾರಿಗೆ ತರಲು ಸುತ್ತೋಲೆ ಹೊರಡಿಸಿರುವುದು ಖಂಡನೀಯ. ಐಟಿಐ ತರಬೇತುದಾರರಿಗೆ ಆನ್‌ಲೈನ್ ಪರೀಕ್ಷಾ ಪದ್ದತಿಯನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಕಾರ್ಯದರ್ಶಿ ಹನುಮೇಶ ಹುಡೇದ ಮಾತನಾಡಿ, ಐಟಿಐ ಸಂಸ್ಥೆಗಳು ಆನ್‌ಲೈನ್ ಪರೀಕ್ಷೆಗಳನ್ನು ನಡೆಸಲು ತಯಾರಿಯನ್ನೇ ಮಾಡಿಕೊಂಡಿಲ್ಲ. ಅದರಲ್ಲೂ ಸರ್ಕಾರಿ ಸಂಸ್ಥೆಗಳೇ ಸೂಕ್ತ ತಯಾರಿಯನ್ನು ಮಾಡಿಕೊಂಡಿಲ್ಲ. ಇನ್ನು ಖಾಸಗಿ ಸಂಸ್ಥೆಗಳ ಪರಿಸ್ಥಿತಿಯನ್ನು ವಿವರಿಸುವುದೇ ಬೇಡ. ಇಂತಹ ಸಂದರ್ಭದಲ್ಲಿ, ಆನ್‌ಲೈನ್ ಪರೀಕ್ಷೆಗಳನ್ನು ನಡೆಸುವುದು ಸೂಕ್ತವಲ್ಲ ಎಂದರು.
ಜಿಲ್ಲಾ ಉಪಾಧ್ಯಕ್ಷ ಕೊಟ್ರೇಶ ಹುಬ್ಬಳ್ಳಿ, ಶರಣು ಬಸವ ಪಾಟೀಲ, ಶೋಯಬ್, ಸುಧಾ, ಬಸವರಾಜ, ಅಮರ್‌ಸಿಂಗ್, ಮಹಮದ್ ಜಾಫರ್, ಅಝೀಮ್ ಕುಂದಗೋಳ ಮೊದಲಾದವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್

Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ಹೊಸ ಸೇರ್ಪಡೆ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.