ಆರ್‌ಎಸ್‌ಎಸ್-ಜೋಶಿ ವಿರುದ್ಧ ಪ್ರತಿಭಟನೆ
Team Udayavani, Apr 30, 2019, 11:48 AM IST
ಧಾರವಾಡ: ಸಂಸದ ಪ್ರಹ್ಲಾದ ಜೋಶಿ ಅವರು ವೀರಶೈವ ಮತ್ತು ಲಿಂಗಾಯತ ಧರ್ಮದಲ್ಲಿ ಬಿರುಕು ಮೂಡಿಸಿ ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ಅಖೀಲ ಭಾರತ ವೀರಶೈವ ಮಹಾಸಭಾ ವತಿಯಿಂದ ಸೋಮವಾರ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು.
ನಗರದ ಕಡಪಾ ಮೈದಾನದಿಂದ ಆರಂಭವಾದ ಪ್ರತಿಭಟನಾ ರ್ಯಾಲಿ ಬಸವೇಶ್ವರ ವೃತ್ತ, ಅಂಜುಮನ್ ವೃತ್ತ ಸೇರಿ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡಿತು.
ರ್ಯಾಲಿಯುದ್ದಕ್ಕೂ ಪ್ರತಿಭಟನಾಕಾರರು ವೀರಶೈವ ಲಿಂಗಾಯತ ಧರ್ಮದಲ್ಲಿ ಒಡಕು ಮೂಡಿಸುತ್ತಿರುವ ಸಂಸದ ಪ್ರಹ್ಲಾದ ಜೋಶಿ, ಶಾಸಕ ಅರವಿಂದ ಬೆಲ್ಲದ ಹಾಗೂ ಆರ್‌ಎಸ್‌ಎಸ್ ಸಂಘಟನೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಅಖೀಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕ ಅಧ್ಯಕ್ಷ ಗುರುರಾಜ ಹುಣಸಿಮರದ ಮಾತನಾಡಿ, ಗರಗ ಗ್ರಾಮದ ಸಾಮಾನ್ಯ ಮಹಿಳೆಯೊಬ್ಬಳನ್ನು ಬಳಸಿಕೊಂಡು ಆ ಮೂಲಕ ಲಿಂಗಾಯತ ಸ್ವತಂತ್ರ ಧರ್ಮ ಹೋರಾಟ ಕುರಿತು ಇಲ್ಲಸಲ್ಲದ ಆಧಾರ ರಹಿತ ಆರೋಪ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಮಾತುಗಳನ್ನು ಹರಿಬಿಟ್ಟಿದ್ದಾರೆ. ಅಲ್ಲದೆ ಹೋರಾಟದ ಮುಂದಾಳತ್ವ ವಹಿಸಿದ್ದ ಪ್ರಮುಖ ನಾಯಕರಾದ ಗೃಹ ಸಚಿವ ಎಂ.ಬಿ. ಪಾಟೀಲ, ಮಾಜಿ ಸಚಿವ ವಿನಯ ಕುಲಕರ್ಣಿ ಹಾಗೂ ಇನ್ನಿತರ ವೀರಶೈವ-ಲಿಂಗಾಯತ ಮುಖಂಡರಿಗೆ ಅವಮಾನಕಾರಿ ಮಾತುಗಳನ್ನಾಡಿ ಅವರನ್ನು ಹಾಗೂ ಲಿಂಗಾಯತ ಸಮುದಾಯವನ್ನು ಅವಮಾನಿಸಿದ್ದಾರೆ ಎಂದರು.
ಶೃತಿ ಅವರು ತಮ್ಮ ಮಾತಿನಲ್ಲಿ ವೀರಶೈವ ಲಿಂಗಾಯತ ಸ್ವತಂತ್ರ ಧರ್ಮ ಹೋರಾಟಕ್ಕೆ ಇಸ್ಲಾಮಿಕ್ ಹಾಗೂ ಕ್ರಿಶ್ಚಿಯನ್ ಸಂಘಟನೆಗಳಿಂದ ಹಣ ಪಡೆದಿದ್ದಾರೆ ಎಂದು, ಗಂಭೀರ ಆಧಾರ ರಹಿತ ಆರೋಪ ಮಾಡಿದ್ದಾರೆ. ಈ ಕುರಿತು ಈಗಾಗಲೇ ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದರು.
ಶೃತಿ ಬೆಳ್ಳಕ್ಕಿ ಮಾಡಿದ ಎಲ್ಲ ಆರೋಪಗಳ ಹಿಂದೆ ಬಿಜೆಪಿ ಹಾಗೂ ಆರ್‌ಎಸ್‌ಎಸ್ ಸಂಘಟನೆ ಹಾಗೂ ಪ್ರಹ್ಲಾದ ಜೋಶಿ ಅವರ ಪ್ರಚೋದನೆ ಇರುವುದು ಮೇಲ್ನೋಟಕ್ಕೆ ಕಂಡು ಬರುತ್ತದೆ. ಬೆಳ್ಳಕ್ಕಿ ಅವರ ಮಾತುಗಳಲ್ಲಿ ಆರ್‌ಎಸ್‌ಎಸ್ ಸಂಘಟನೆ ಕುರಿತು ಪದೇ ಪದೇ ಪ್ರಸ್ತಾಪಿಸಿದ್ದಾರೆ ಎಂದು ಆರೋಪಿಸಿದರು.
ಮುಖಂಡರಾದ ಶಿವಶಂಕರ ಹಂಪಣ್ಣವರ, ರಮೇಶ ತಳಗೇರಿ, ಅಜ್ಜಪ್ಪ ಗುಲಾಲದವರ, ಬಸವರಾಜ ಲೋಕೂರ, ಪ್ರದೀಪ ಪಾಟೀಲ, ನಿಂಗಣ್ಣ ಕರಿಕಟ್ಟಿ, ಸುರೇಶ ಯಲಿಗಾರ, ಮಲ್ಲನಗೌಡ ಪಾಟೀಲ, ಸಿದ್ದಪ್ಪ ಸಪೂರಿ, ಶ್ರೀಶೈಲ ಭಾವಿಕಟ್ಟಿ, ಶಂಭು ಸಾಲಿಮನಿ, ಪ್ರಕಾಶ ಬಾವಿಕಟ್ಟಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.