ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ
Team Udayavani, Jan 14, 2020, 10:49 AM IST
ಕುಂದಗೋಳ: ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ಎನ್‌ಆರ್‌ಸಿ ಹಾಗೂ ಸಿಎಎ ಕಾಯ್ದೆಯಿಂದಾಗಿ ಮುಸ್ಲಿಮರಿಗೆ ಅನಾನುಕೂಲತೆ ಹಾಗೂ ಅನ್ಯಾಯವಾಗುವ ಸಾಧ್ಯತೆ ಹೆಚ್ಚಾಗಿದೆ. ಜಾತ್ಯತೀತ ರಾಷ್ಟ್ರದಲ್ಲಿ ಜಾತಿ-ಧರ್ಮಗಳ ಮಧ್ಯ ವೈಮನಸ್ಸು ಉಂಟಾಗುತ್ತದೆ. ಕೂಡಲೇ ಈ ಕಾಯ್ದೆಯನ್ನು ಹಿಂಪಡೆಯಬೇಕೆಂದು ಮುಸ್ಲಿಂ ಧರ್ಮಗುರು ತಾಜುದ್ದೀನ ಪೀರಾ ಒತ್ತಾಯಿಸಿದರು.
ಪಟ್ಟಣದ ಶಾದಿಮಹಲ್‌ನಲ್ಲಿ ತಾಲೂಕು ಅಂಜುಮನ್ ಇಸ್ಲಾಂ ಕಮಿಟಿಯವರು ಎನ್ ಆರ್‌ಸಿ ಹಾಗೂ ಸಿಎಎ ರದ್ದುಗೊಳಿಸುವಂತೆ ಆಗ್ರಹಿಸಿ ಹಮ್ಮಿಕೊಂಡಿದ್ದ ಪ್ರತಿಭಟನಾಸಮಾವೇಶದಲ್ಲಿ ಅವರು ಮಾತನಾಡಿದರು. ದೇಶದ ಸಂವಿಧಾನವೇ ಪರಮೋಚ್ಚವಾಗಿದ್ದು, ಈ ಸಂವಿಧಾನದಡಿ ಎಲ್ಲ ಸಮುದಾಯದವರು ಬಾಳುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರ ಒಂದು ಧರ್ಮಯನ್ನು ತುಳಿದು ಇನ್ನೊಂದು ಧರ್ಮವನ್ನು ಮೇಲೆತ್ತುವ ಹುನ್ನಾರ ನಡೆಸಿದೆ. ಇದರಿಂದ ಮುಸ್ಲಿಂ ಸಮುದಾಯವು ತುಳಿತಕ್ಕೆ ಒಳಗಾಗುತ್ತದೆ. ಕೂಡಲೇ ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ ಕಾಯ್ದೆಯನ್ನು ಹಿಂಪಡೆಯುವಂತೆ ಮಾಡಬೇಕು. ಇಲ್ಲವಾದರೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುತ್ತದೆ ಎಂದರು.
ಮಾಜಿ ಸಚಿವ ಎ.ಎಂ. ಹಿಂಡಸಗೇರಿ ಮಾತನಾಡಿ, ನಮ್ಮ ಸಮುದಾಯದಲ್ಲಿ 46ರಷ್ಟು ಅನಕ್ಷರಸ್ಥರು ಇದ್ದು, ಈ ಕಾಯ್ದೆಯಿಂದ ದಾಖಲಾತಿಗಳನ್ನು ಕೇಳುತ್ತಾರೆ. ನಿತ್ಯವು ಕೂಲಿನಾಲಿ ಮಾಡುತ್ತಾ ಬದುಕುವ ನಮ್ಮ ಸಮುದಾಯವು ದಾಖಲಾತಿ ಒದಗಿಸದಿದ್ದರೆ ಪೌರತ್ವವನ್ನೇ ಪಡೆಯುವುದಿಲ್ಲ. ಕೂಡಲೇ ಕೇಂದ್ರ ಸರ್ಕಾರ ಕಾಯ್ದೆ ಹಿಂಪಡೆಯದಿದ್ದರೆ ದೇಶದಲ್ಲಿ 15 ಕೋಟಿಗೂ ಹೆಚ್ಚು ನಾಗರಿಕರು ಅನ್ಯಾಯಕ್ಕೆ ಒಳಗಾಗುತ್ತಾರೆ ಎಂದರು.
ಮಾಜಿ ಶಾಸಕ ಎನ್.ಎಚ್. ಕೋನರಡ್ಡಿ ಮಾತನಾಡಿ, ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದ್ದು ವಿದ್ಯಾವಂತರು ಉದ್ಯೋಗವಿಲ್ಲದೆ ಅಲೆಯುತ್ತಿದ್ದಾರೆ. ಉದ್ಯೋಗ ಸೃಷ್ಟಿಸುವ ಬದಲು ಇಂತಹ ನಿರುಪಯುಕ್ತ ಕಾಯ್ದೆಗಳನ್ನು ಜಾರಿಗೆ ತರುತ್ತಿದ್ದಾರೆ. ಸಿಎಎ ವಿರೋಧಿ ಹೋರಾಟವನ್ನು ಜೆಡಿಎಸ್ ಪಕ್ಷ ಬೆಂಬಲಿಸಲಿದೆ ಎಂದರು.
ಮುಖಂಡರಾದ ಅರವಿಂದ ಕಟಗಿ, ಶಿವಾನಂದ ಬೆಂತೂರ, ಅಜುಮನ್ ಕಮಿಟಿ ಅಧ್ಯಕ್ಷ ರಾಯೇಸಾಬ ಕಳ್ಳಿಮನಿ, ಮುತ್ತು ಶಿವಳ್ಳಿ, ಅನಿಲಕುಮಾರ ಪಾಟೀಲ, ಚಂದ್ರಶೇಖರ ಜುಟ್ಟಲ, ಶಾಕೀರ ಸನದಿ, ಪೀತಾಂಬರಪ್ಪ ಬೀಳಾರ ಮಾತನಾಡಿದರು. ಶಾಸಕಿ ಕುಸುಮಾವತಿ ಶಿವಳ್ಳಿ, ಹಜರತಲಿಜೋಡಮನಿ, ಜಿ.ಡಿ. ಘೋರ್ಪಡೆ, ವಿ.ಡಿ. ಹಿರೇಗೌಡ್ರ, ಎಚ್.ಎಲ್. ನದಾಫ, ರಾಮನಗೌಡ ಪಾಟೀಲ, ದಯಾನಂದ ಕುಂದೂರ, ಬಾಬಾಜಾನ ಮಿಶ್ರಿಕೋಟಿ, ಕಹಿಂ ನಾಲಬಂದ, ಬಾಬಾಜಾನ ಮುಲ್ಲಾ, ಹುಲಗೂರ, ಸುರೇಶ ಗಂಗಾಯಿ, ಎ.ಬಿ. ಉಪ್ಪಿನ, ಬೀರಪ್ಪ ಕುರಬರ, ಸಕ್ರು ಲಮಾಣಿ ಇದ್ದರು. ಪ್ರತಿಭಟನೆಗೆ ತಾಲೂಕಾ ಕಾಂಗ್ರೆಸ್ ಸಮಿತಿಯವರೂ ಬೆಂಬಲ ವ್ಯಕ್ತಪಡಿಸಿ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.