ಹೆಸರು ಖರೀದಿ ವಿಳಂಬ ಖಂಡಿಸಿ ಪ್ರತಿಭಟನೆ
Team Udayavani, Sep 26, 2018, 5:31 PM IST
ನವಲಗುಂದ: ಸರಕಾರ ಬೆಂಬಲ ಬೆಲೆ ಯೋಜನೆಯಡಿ ಹೆಸರು ಖರೀದಿ ನೋಂದಣಿ ಮುಗಿದು 10 ದಿನ ಗತಿಸಿದರೂ ಇನ್ನೂವರೆಗೆ ರೈತರಿಂದ ಹೆಸರು ಖರೀದಿ ಪ್ರಾರಂಭಿಸದಿರುವುದನ್ನು ಖಂಡಿಸಿ ಪಕ್ಷಾತೀತ ಹೋರಾಟ ಸಮಿತಿ ರೈತ ಹೋರಾಟಗಾರರು ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ ಒಂದು ಗಂಟೆಗೂ ಹೆಚ್ಚು ಕಾಲ ತಡೆದು ಪ್ರತಿಭಟಿಸಿದರು.
ನೋಂದಣಿ ವೇಳೆ ರೈತರಿಂದ 10 ಕ್ವಿಂಟಲ್ ಹೆಸರು ಖರೀದಿಸುವ ಕುರಿತು ವಾಗ್ಧಾನ ಮಾಡಿದ್ದ ಸರಕಾರಗಳು ಈಗ ಹೊಸ ಆದೇಶ ಪ್ರಕಟಿಸಿ ಕೇವಲ ನಾಲ್ಕು ಕ್ವಿಂಟಲ್ ಖರೀದಿಗೆ ಮುಂದಾಗಿದ್ದು, ರೈತರಿಗೆ ದಿಕ್ಕು ತೋಚದಂತಾಗಿದೆ. ರೈತರು ಅನಿವಾರ್ಯವಾಗಿ ಬೀದಿಗೆ ಇಳಿಯುವ ಪರಿಸ್ಥಿತಿ ನಿರ್ಮಾಣಗೊಂಡಿದೆ ಎಂದು ಉಭಯ ಸರಕಾರಗಳ ವಿರುದ್ಧ ಕಿಡಿಕಾರಿದರು. ಕೂಡಲೇ ಹೊಸ ಆದೇಶ ಹಿಂಪಡೆದು 10 ಕ್ವಿಂಟಲ್ ಹೆಸರು ಖರೀದಿಗೆ ಸರಕಾರ ಮುಂದಾಗಬೇಕು. ಸೆ. 30ರ ಒಳಗಾಗಿ ಖರೀದಿ ಆರಂಭಿಸಬೇಕು. ಜೊತೆಗೆ ಬಾಕಿ ಉಳಿದ ರೈತರ ನೋಂದಣಿ ಕಾರ್ಯವನ್ನು ಮಾಡಿ ರೈತರ ನೆರವಿಗೆ ಧಾವಿಸದೇ ಹೋದರೆ ಅ. 1ರಿಂದ ಸರಕಾರಿ ಕಚೇರಿಗಳಿಗೆ ಬೀಗ ಜಡಿದು ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ರೈತ ಹೋರಾಟಗಾರು ಎಚ್ಚರಿಸಿದರು. ಬಳಿಕ ತಹಶೀಲ್ದಾರ್ ನವೀನ ಹುಲ್ಲೂರ ಅವರಿಗೆ ಮನವಿ ಸಲ್ಲಿಸಿದರು.
ಪಕ್ಷಾತೀತ ಹೋರಾಟ ಸಮಿತಿ ಅಧ್ಯಕ್ಷ ಬಸಪ್ಪ ಬೀರಣ್ಣವರ, ರೈತ ಮುಖಂಡ ಡಿ.ವಿ. ಕುರಹಟ್ಟಿ, ಸುಭಾಸಚಂದ್ರಗೌಡ ಪಾಟೀಲ, ಬಸಯ್ಯ ಮಠಪತಿ, ಸಿದ್ದಪ್ಪ ಮುಪ್ಪಯ್ಯನವರ, ಮಲ್ಲಪ್ಪ ರಡ್ಡೇರ, ರಘುನಾಥ ನಡವಿನಮನಿ, ಆರ್.ಎಂ. ನಾಯ್ಕರ, ಸಿದ್ದಲಿಂಗಪ್ಪ ಹಳ್ಳದ, ನಾಗರಾಜ ಭೋವಿ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Fraud: ಸೈಟ್ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.