ಖಾತ್ರಿ ಕೂಲಿ ಹಣ ಪಾವತಿಸಲು ಆಗ್ರಹಿಸಿ ನಿರಶನ
Team Udayavani, Aug 22, 2018, 5:45 PM IST
ಗಂಗಾವತಿ: ಕಳೆದ ಮೂರು ತಿಂಗಳ ಹಿಂದೆ ಮಾಡಿದ ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಹಣ ಪಾವತಿಸುವಂತೆ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ನೇತೃತ್ವದಲ್ಲಿ ಹಣವಾಳ ಗ್ರಾಮದಿಂದ ತಾಪಂ ಕಚೇರಿ ವರೆಗೆ ಪಾದಯಾತ್ರೆ ಮೂಲಕ ಆಗಮಿಸಿ ಪ್ರತಿಭಟನೆ ನಡೆಸಿದರು.
ಕಳೆದ ಮೂರು ತಿಂಗಳ ಹಿಂದೆ ಖಾತ್ರಿ ಯೋಜನೆಯಡಿ ಮಾಡಿದ ಕೂಲಿ ಹಣ ಇನ್ನೂ ಪಾವತಿಯಾಗಿಲ್ಲ. ಹಲವು ಭಾರಿ ಗ್ರಾಪಂ, ತಾಪಂಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಈ ಸಮಸ್ಯೆ ಕುರಿತು ಕನಕಗಿರಿ ಶಾಸಕ ದಡೇಸೂಗೂರು ಬಸವರಾಜ ಅವರ ಗಮನ ಸೆಳೆದರೂ ಪ್ರಯೋಜನವಾಗಿಲ್ಲ. ಆದ್ದರಿಂದ ಪಾದಯಾತ್ರೆ ನಡೆಸುವ ಮೂಲಕ ಸಾರ್ವಜನಿಕರ ಗಮನ ಸೆಳೆಯಲಾಗಿದೆ. ಕೂಲಿ ಹಣ ಪಾವತಿ ಮಾಡುವ ತನಕ ಅಹೋರಾತ್ರಿ ಧರಣಿ ನಡೆಸಲು ಕಾರ್ಮಿಕರು ನಿರ್ಧರಿಸಿದ್ದಾರೆ.
ಎಂ.ಬಸವರಾಜ, ಕಾರ್ಯದರ್ಶಿ ಕೆ.ಹುಸೇನ, ಸಿಐಟಿಯು ಜಿಲ್ಲಾಧ್ಯಕ್ಷ ನಿರುಪಾದಿ ಬೆಣಕಲ್, ಮುಖಂಡ ಜಿ.ನಾಗರಾಜ, ಗಂಗಾಧರಸ್ವಾಮಿ, ಶಿವ ಬೆಣಕಲ್, ಮರಿನಾಘ, ದುರುಗೇಶ ಹಣವಾಳ, ಬಸಮ್ಮ, ದುರುಗಮ್ಮ, ನಿಂಗಪ್ಪ, ಬಸಮ್ಮ ಹಾಗೂ ದುರುಗಮ್ಮ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಡಾ. ವೀಣಾ ಶಾಂತೇಶ್ವರ, ಎಸ್.ಜಿ. ಸಿದ್ಧರಾಮಯ್ಯರಿಗೆ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ
Dharwad: ಔಡಲಹಣ್ಣು ತಿಂದು ಏಳು ಮಕ್ಕಳು ಅಸ್ವಸ್ಥ: ಜಿಲ್ಲಾಸ್ಪತ್ರೆಗೆ ದಾಖಲು
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧರ ಹಾವಳಿ ಹೆಚ್ಚಾಗಿದೆ: ಪ್ರಹ್ಲಾದ್ ಜೋಶಿ
Hubli: ಅಮಿತ್ ಶಾ ಅಣಕು ಶವ ಸಂಸ್ಕಾರದ ಅಸ್ಥಿ ವಿಸರ್ಜಿಸಿ ಪ್ರತಿಭಟನೆ
Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ
MUST WATCH
ಹೊಸ ಸೇರ್ಪಡೆ
Jammu Kashmir: ಸೋನ್ಮಾರ್ಗ್‌ನಲ್ಲಿ ಝಡ್-ಮೋರ್ಹ್ ಸುರಂಗವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ
ನಭದಲ್ಲಿ ಕಣ್ಣು-ನೆಲದಲ್ಲಿ ಕಾಲು: ಮೌನ ಕ್ರಾಂತಿ: ಭೂ ಸಾಮರ್ಥ್ಯ ವೃದ್ಧಿಸಿದ ಬಾಹ್ಯಾಕಾಶ ಶಕ್ತಿ
ಹತ್ಯೆಗೈಯಲು ಹೇಳಿದ್ದು ಪ್ರೇಯಸಿಯ ಪತಿಯನ್ನು, ಬಾಡಿಗೆ ಹಂತಕರು ಕೊಂದಿದ್ದು Taxi ಚಾಲಕನನ್ನು
Editorial: ಇಂಟರ್‌ನೆಟ್-ನೆಟ್‌ವರ್ಕ್ ಸುಧಾರಣೆಗೆ ಸರಕಾರ ಮುಂದಾಗಲಿ
Sanju Weds Geetha 2: ಜ.17ಕ್ಕೆ ಬರಲಿದೆ ಸಂಜು ವೆಡ್ಸ್ ಗೀತಾ-2
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.