ಶೆಟ್ಟರ ನೇತೃತ್ವದಲ್ಲಿ ಪ್ರತಿಭಟನೆ

ಗೃಹ ಸಚಿವರಿಂದ ದಬ್ಟಾಳಿಕೆ-ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ•ತುರ್ತು ಪರಿಸ್ಥಿತಿ ನಿರ್ಮಾಣ

Team Udayavani, May 7, 2019, 10:19 AM IST

hubali-tdy-1..

ಧಾರವಾಡ: ನಗರದ ಡಿಸಿ ಕಚೇರಿ ಎದುರು ಜರುಗಿದ ಪ್ರತಿಭಟನಾ ಧರಣಿಯಲ್ಲಿ ಮಾಜಿ ಸಿಎಂ ಜಗದೀಶ ಶೆಟ್ಟರ ಮಾತನಾಡಿದರು.

ಧಾರವಾಡ: ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರಕಾರ ಹಾಗೂ ಗೃಹ ಸಚಿವರು ದಬ್ಟಾಳಿಕೆ ನಡೆಸುವುದರ ಜತೆಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮಾಜಿ ಸಿಎಂ ಜಗದೀಶ ಶೆಟ್ಟರ ನೇತೃತ್ವದಲ್ಲಿ ಬಿಜೆಪಿಯಿಂದ ನಗರದ ಡಿಸಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ಶೆಟ್ಟರ, ರಾಜ್ಯ ಸಮ್ಮಿಶ್ರ ಸರಕಾರದಿಂದ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಬಗ್ಗೆ ಮಾತನಾಡಿದವರ ಮೇಲೆ ಹಲ್ಲೆ ಮಾಡಲಾಗುತ್ತಿದೆ. ಸಮ್ಮಿಶ್ರ ಸರಕಾರ ಪತ್ರಕರ್ತರ ಮೇಲೂ ಹಲ್ಲೆ ಮಾಡಿಸಿ ಕ್ರಿಮಿನಲ್ ಪ್ರಕರಣಗಳನ್ನು ದಾಖಲಾಗುವಂತೆ ಮಾಡುತ್ತಿದೆ ಎಂದು ದೂರಿದರು.

ಸಮ್ಮಿಶ್ರ ಸರಕಾರ ಸಚಿವರು ಅಧಿಕಾರ ದುರ್ಬಳಕೆ ಮಾಡಿಕೊಂಡು ದುಂಡಾವರ್ತನೆ ತೋರುತ್ತಿದ್ದಾರೆ. ಎಂ.ಬಿ.ಪಾಟೀಲ ಗೃಹ ಸಚಿವರಾದ ಬಳಿಕ ತಮ್ಮ ವಿರುದ್ಧ ಮಾತನಾಡಿದವರ ಮೇಲೆ ದೂರು ದಾಖಲಿಸುವುದು, ಜಾಮೀನು ರಹಿತ ಪ್ರಕರಣಗಳನ್ನು ದಾಖಲಿಸುವ ಕೆಲಸ ಮಾಡುತ್ತಿದ್ದಾರೆ. ಲೋಕಸಭೆ ಚುನಾವಣೆ ಫಲಿತಾಂಶ ಬಳಿಕ ಎಲ್ಲ ಮೈತ್ರಿ ಸಚಿವರನ್ನು ಮನೆಗೆ ಕಳುಹಿಸಲು ಜನರು ಸಿದ್ಧರಾಗಿದ್ದಾರೆ. ಆ ಮೇಲೆ ನಿಖೀಲ್ ಎಲ್ಲಿದಿಯಪ್ಪಾ ಎನ್ನುವ ಪ್ರಸಂಗ ಕುಮಾರಸ್ವಾಮಿ ಜತೆಗೆ ಸಿದ್ದರಾಮಯ್ಯ ಸೇರಿದಂತೆ ಉಳಿದವರಿಗೂ ಬರಲಿದೆ ಎಂದರು.

ಸಾಮಾಜಿಕ ಜಾಲತಾಣದಲ್ಲಿ ರಾಜ್ಯ ಸರಕಾರವನ್ನು ಟೀಕಿಸಿದ ಕಾರಣಕ್ಕೆ ಬಿಜೆಪಿ ಅಭಿಮಾನಿಗಳು ಮತ್ತು ಹಿರಿಯ ಪತ್ರಕರ್ತರನ್ನು ಕಾರಾಗೃಹಕ್ಕೆ ಕಳುಹಿಸಲು ಸ್ವತಃ ರಾಜ್ಯ ಗೃಹ ಮಂತ್ರಿಗಳೇ ವಿಶೇಷ ಆಸಕ್ತಿ ವಹಿಸಿದ್ದಾರೆ. ಮಹೇಶ್‌ ವಿಕ್ರಮ್‌ ಹೆಗಡೆ, ಶೃತಿ ಬೆಳ್ಳಕ್ಕಿ, ಶಾರದಾ ಡೈಮಂಡ್‌, ಹೇಮಂತ್‌ಕುಮಾರ್‌ ಮತ್ತು ಅಜಿತ್‌ ಶೆಟ್ಟಿ ಹೇರಂಜಿ ಅವರ ಮೇಲೆ ನಿರಾಧಾರವಾದ ಪ್ರಕರಣಗಳನ್ನು ದಾಖಲಿಸಿ ಮಾನಸಿಕ ಕಿರುಕುಳ ನೀಡಲಾಗಿದೆ. ಹೀಗಾಗಿ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಎಲ್ಲರ ಹಕ್ಕು, ಸ್ವಾತಂತ್ರ್ಯ ರಕ್ಷಿಸುವ ಜವಾಬ್ದಾರಿಯನ್ನು ನಿಭಾಯಿಸುವಂತೆ ರಾಜ್ಯ ಸರಕಾರಕ್ಕೆ ತಾಕೀತು ಮಾಡಬೇಕು. ರಾಜಕೀಯ ದ್ವೇಷ ಬದಿಗಿಟ್ಟು ಆಡಳಿತ ನಡೆಸಲು ಸರಕಾರಕ್ಕೆ ಸೂಚಿಸುವಂತೆ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ವಿಧಾನ ಪರಿಷತ್‌ ಸದಸ್ಯ ಪ್ರದೀಪ ಶೆಟ್ಟರ, ನಾಗೇಶ ಕಲಬುರ್ಗಿ, ಸಂಜಯ ಕಪಟಕರ, ಶಿವು ಹಿರೇಮಠ, ವಿಜಯಾನಂದ ಶೆಟ್ಟಿ, ಶಿವಣ್ಣ ಬಡವನವರ, ಪ್ರಕಾಶ ಗೋಡಬೋಲೆ, ಯಲ್ಲಪ್ಪ ಅರವಾಳದ, ಈರಣ್ಣ ಹಪ್ಪಳಿ, ಈರೇಶ ಅಂಚಟಗೇರಿ, ವೀರೇಶ ಸಂಗಳದ, ಮೋಹನ ರಾಮದುರ್ಗ, ಸುಧೀರ ಸರಾಫ್‌, ಅರವಿಂದ ಏಗನಗೌಡರ, ಶರಣು ಅಂಗಡಿ, ಶಿವಾನಂದ ಮುತ್ತನವರ, ಅನಸೂಯಾ ಹಿರೇಮಠ, ರೂಪಾ ಈರೇಶನವರ ಸೇರಿದಂತೆ ಹಲವರು ಇದ್ದರು.

ರಾಜ್ಯದ ಗೃಹ ಸಚಿವ ಎಂ.ಬಿ.ಪಾಟೀಲ ನಾಲಾಯಕ್‌ ರಾಜಕಾರಣಿ ಆಗಿದ್ದಾರೆ. ಈ ಹಿಂದೆ ಎಂ.ಬಿ.ಪಾಟೀಲ ನೀರಾವರಿ ಸಚಿವರಿದ್ದಾಗ ಸೋನಿಯಾ ಗಾಂಧಿ ಅವರಿಗೆ ಲಿಂಗಾಯತ ಧರ್ಮದ ವಿಚಾರವಾಗಿ ಸಮಾಜ ಒಡೆಯುವ ಪ್ರಯತ್ನದಿಂದ ಬರೆದ ಪತ್ರ ಅಸಲಿಯೋ ಅಥವಾ ನಕಲಿ ಎಂಬುದನ್ನು ಅಂದೇ ತನಿಖೆ ಮಾಡಿ ಖಾತರಿ ಮಾಡಿಕೊಳ್ಳಬೇಕಿತ್ತು. ಆದರೆ, ಯಾಕೆ ತನಿಖೆ ಮಾಡಲಿಲ್ಲ. ಸದ್ಯ ಮತ್ತೆ ಪತ್ರದ ಬಗ್ಗೆ ಚರ್ಚೆ ಆಗುತ್ತಿದ್ದು, ತನಿಖೆ ಎಲ್ಲಿಗೆ ಬಂದಿದೆ ಎಂಬುದನ್ನು ತಿಳಿಸಬೇಕು. ಇದಲ್ಲದೇ ಈ ಪತ್ರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾತನಾಡಿದವರನ್ನು ಬಂಧನ ಮಾಡಲಾಗುತ್ತಿದೆ. ಹೀಗಾಗಿ ಎಂ.ಬಿ.ಪಾಟೀಲ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನಿಡಬೇಕು ಎಂದು ಶೆಟ್ಟರ ಆಗ್ರಹಿಸಿದರು.

ಟಾಪ್ ನ್ಯೂಸ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

INDvAUS: Is captain Rohit Sharma standing against to Shami?; Aussie tour difficult for pacer!

INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?;‌ ವೇಗಿಗೆ ಆಸೀಸ್‌ ಪ್ರವಾಸ ಕಷ್ಟ!

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

2-bntwl

Bantwala: ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್

The owner of the betting app promoted by Bollywood actresses is Pakistani!

Betting App; ಬಾಲಿವುಡ್‌ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್‌‌ ಮಾಲಕ ಪಾಕಿಸ್ತಾನಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.