ಪ್ರತಿಭಟನೆ-ಸಭೆ-ಮನವಿ ಸ್ವಾಮೀಜಿ ಉಪವಾಸಾಂತ್ಯ

Team Udayavani, Oct 16, 2017, 2:14 PM IST

protest-hub4.jpg

ಕುಂದಗೋಳ: ಪಟ್ಟಣದಲ್ಲಿ ಟಿಪ್ಪು ಸ್ಮಾರಕ ಉದ್ಘಾಟನೆಗೆ ಅವಕಾಶ ನೀಡುವುದಿಲ್ಲ ಎಂದು ಹಿರೇಮಠದಿಂದ ಭೂತೇಶ್ವರ ದೇವಸ್ಥಾನದ ವರೆಗೆ ಶ್ರೀ ಶಿತಿಕಂಠೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ರವಿವಾರ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಪ್ರತಿಭಟನಾ ಸ್ಥಳಕ್ಕೆ ಎಸಿ ಮಹೇಶ ಕರ್ಜಗಿ ಹಾಗೂ ಡಿಎಸ್‌ಪಿ ಬಿ.ಪಿ. ಚಂದ್ರಶೇಕರ, ತಹಶೀಲ್ದಾರ್‌  ನವೀನ ಹುಲ್ಲೂರ, ಪಪಂ ಮುಖ್ಯಾಧಿಕಾರಿ ಎಸ್‌.ಎಸ್‌. ಇಬ್ರಂಡಿ ಆಗಮಿಸಿ ಪ್ರತಿಭಟನಾಕಾರರ ಜೊತೆಗೆ ಮಾತುಕತೆಗೆ ಮುಂದಾದರು.

ಆದರೆ, ಜನರ ಗಲಾಟೆ ಹೆಚ್ಚಾದ್ದರಿಂದ ಅಧಿಕಾರಿಗಳು ಮುಖಂಡರೊಂದಿಗೆ ದೇವಾಲಯದ ಕೋಣೆ ಸೇರಿ ಸಭೆ ನಡೆಸಿದರು. ಇದರಿಂದ ರೊಚ್ಚಿಗೆದ್ದ ಜನರು ಜೈಘೋಷ ಕೂಗುತ್ತ ಸ್ಮಾರಕದ ಕಡೆ ತೆರಳಲು ಅಣಿಯಾದರು. ಪರಿಸ್ಥಿತಿ ವಿಕೋಪಕ್ಕೆ ಹೋಗುವುದನ್ನು ಅರಿತ ಶ್ರೀಗಳು ದೇವಸ್ಥಾನದಿಂದ ಹೊರ ಬಂದು ಮಾತನಾಡಿ, ಅಧಿಕಾರಿಗಳೊಂದಿಗೆ ಸಮಾಲೋಚಿಸುತ್ತಿದ್ದು, ಭಾವೋದ್ವೇಗಗೊಳ್ಳದೆ ಸ್ವಲ್ಪ ಕಾಯಿರಿ.

ಮಾತುಕತೆ ನಂತರ ಮುಂದಿನ ಹೆಜ್ಜೆ ಇಡೋಣ ಎಂದು ಜನರನ್ನು ಶಾಂತಗೊಳಿಸಿದರು. ಸಭೆಯ ನಂತರ ಜನರನ್ನುದ್ದೇಶಿಸಿ ಎಸಿ ಮಹೇಶ ಕರ್ಜಗಿ ಮಾತನಾಡಿ, ಸ್ಮಾರಕ ಉದ್ಘಾಟನೆಗೆ ಇಲಾಖೆಯಿಂದ ಯಾವುದೇ ಅನುಮತಿ ಇಲ್ಲದೆ ಮುಂದಾಗಿರುವುದು ಕಂಡುಬಂದಿದೆ.

ಈ ಕುರಿತು ಪಪಂ ಮುಖ್ಯಾಧಿಕಾರಿಗೆ ಸೂಚಿಸಲಾಗಿದೆ. ಯಾವುದೇ ಕಾರಣಕ್ಕೂ ಸ್ಮಾರಕ ಉದ್ಘಾಟನೆಗೊಳ್ಳದಂತೆ ಮುಂಬಾಲಿಗೆ ಬೀಗ ಹಾಕಿ ಬಂದೋಬಸ್ತ್ ಮಾಡಲಾಗಿದೆ. ಟಿಪ್ಪು ಉತ್ಸವ ಮಾಡಲು ಅವಕಾಶ ನೀಡಲಾಗಿದೆ. ಯಾರೂ ಕಾನೂನು ಬಾಹಿರವಾಗಿ ಮುಂದುವರಿಯ  ಬಾರದು ಎಂದು ಹೇಳಿದರು. ಪರಿಸ್ಥಿತಿ ತಿಳಿಗೊಂಡಿತು. ಪ್ರತಿಭಟನಾಕಾರರು ಎಸಿಗೆ ಮನವಿ ನೀಡಿದರು. 

ಪಟ್ಟಣದಲ್ಲಿ ರವಿವಾರ ಬೆಳಗಿನಿಂದಲೆ ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್‌ ಮಾಡಿರುವುದು ಕಂಡುಬಂತು. ಯಾವುದೇ ಅಹಿತಕರ ಘಟನೆಯಾಗದಂತೆ ಪೊಲೀಸ್‌ ಇಲಾಖೆ ಸೂಕ್ತ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿತ್ತು. ಡಿಎಸ್ಪಿ, 6 ಜನ ಪಿಎಸ್‌ಐ, 15 ಎಎಸ್‌ಐ, 4 ಡಿಆರ್‌ ತುಕಡಿ, 2 ಕೆಎಸ್‌ಆರ್‌ಪಿ, 100 ಪೊಲೀಸ್‌ ಸಿಬ್ಬಂದಿ ನಿಯೋಜನೆಗೊಂಡಿದ್ದರು. 

ಟಾಪ್ ನ್ಯೂಸ್

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Manipur: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

DK-Shivakumar

Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

KLE Technological University: Awarded Honorary Doctorate to Murugesh Nirani

KLE Technological University: ಮುರುಗೇಶ್‌ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.