ಭೂ ಸುಧಾರಣೆ ತಿದ್ದುಪಡಿ ಖಂಡಿಸಿ ಪ್ರತಿಭಟನೆ
Team Udayavani, Jun 14, 2020, 12:54 PM IST
ಸಾಂದರ್ಭಿಕ ಚಿತ್ರ
ಹುಬ್ಬಳ್ಳಿ: ರಾಜ್ಯ ಸರಕಾರ ರಾಜ್ಯದ ಕೃಷಿ ಜಮೀನುಗಳನ್ನು ಯಾರು ಬೇಕಾದರೂ ಹೊಂದಲು ಅವಕಾಶ ನೀಡುವ ಉದ್ದೇಶದಿಂದ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಖಂಡಿಸಿ ಜೂ.16ರಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ) ಸಿಪಿಐಎಂ ಧಾರವಾಡ ಜಿಲ್ಲಾ ಸಮಿತಿ ಪ್ರತಿಭಟನೆ ಹಮ್ಮಿಕೊಂಡಿದೆ.
ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಮಾಡುತ್ತಿರುವುದು ರಾಜ್ಯವನ್ನು ಅಧೋಗತಿ ತಳ್ಳುವ ಮತ್ತು ಕಾರ್ಪೊರೇಟ್ ಕಂಪನಿಗಳ ವಶ ಮಾಡುವ ಗುಲಾಮಿತನದ ಹಾಗೂ ಶತಮೂರ್ಖತನದ ಪ್ರತೀಕವಾಗಿದೆ. ಇದು ವ್ಯವಸಾಯದಲ್ಲಿ ತೊಡಗಿರುವ ಎಲ್ಲ ರೈತರು ಹಾಗೂ ಗೇಣಿದಾರರು, ಕೃಷಿ ಕೂಲಿಕಾರರು, ಕಾರ್ಮಿಕರು, ಕಸುಬುದಾರರು, ಅವರನ್ನು ಆಧರಿಸಿದ ಸಣ್ಣ ವ್ಯಾಪಾರಿಗಳು, ಕೃಷಿ ವ್ಯಾಪಾರಿಗಳು, ಒಟ್ಟಾರೇ ಗ್ರಾಮೀಣ ಪ್ರದೇಶವನ್ನೇ ಮಸಣ ಮಾಡುವ ಮತ್ತು ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳನ್ನು ನಾಶ ಮಾಡುವ, ಕಾರ್ಪೊರೇಟ್ ಕಂಪನಿಗಳಿಗೆ ಜಮೀನುಗಳನ್ನು ನೇರವಾಗಿ ಒದಗಿಸುವ ಹಾಗೂ ಆ ಮೂಲಕ ರಾಜ್ಯವನ್ನು ತೀವ್ರ ಸಂಕಟಕ್ಕೀಡು ಮಾಡುವ ದುಷ್ಕೃತ್ಯವಾಗಿದೆ. ಇದು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕಾರ್ಪೊàರೇಟ್ ಕಂಪನಿಗಳ ಸೇವೆಯನ್ನು ಪೈಪೋಟಿಯಲ್ಲಿ ಕೈಗೊಳ್ಳುತ್ತಿರುವುದನ್ನು ಬಹಿರಂಗ ಪಡಿಸುತ್ತಿದೆ. ಇದನ್ನು ಖಂಡಿಸಿ ಸಿಪಿಐಎಂ ಪ್ರತಿಭಟನೆ ನಡೆಸಲಿದೆ ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.