ಕಾರ್ಮಿಕ ಸಂಘಟನೆಗಳ ಪ್ರತಿಭಟನೆ
Team Udayavani, Mar 29, 2022, 11:55 AM IST
ಧಾರವಾಡ: ಎಐಯುಟಿಯುಸಿ ಸೇರಿದಂತೆ 10 ಕೇಂದ್ರೀಯ ಕಾರ್ಮಿಕ ಸಂಘಟನೆಗಳು ಮತ್ತು ಫೆಡರೇಶನ್‌ಗಳಿಂದ ಅಖೀಲ ಭಾರತ ಸಾರ್ವತ್ರಿಕ ಮುಷ್ಕರ ಅಂಗವಾಗಿ ನಗರದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಎಐಯುಟಿಯುಸಿ ಜಿಲ್ಲಾ ಉಪಾಧ್ಯಕ್ಷ ಭುವನ ಬಳ್ಳಾರಿ ಮಾತನಾಡಿ, ಕೋವಿಡ್ ಸಂಕಷ್ಟದಲ್ಲಿ ಕೇಂದ್ರ ಸರ್ಕಾರವು ಕರಾಳ ಮಸೂದೆಗಳು, ಸುಗ್ರೀವಾಜ್ಞೆಗಳು ಮತ್ತು ನೀತಿಗಳ, ಕಾರ್ಮಿಕರ ಹೋರಾಟಗಳ ಮೂಲಕ ಗಳಿಸಿರುವ ಹಲವಾರು ಹಕ್ಕುಗಳನ್ನು ಕಿತ್ತುಕೊಂಡಿವೆ. ಆಶಾ, ಅಂಗನವಾಡಿ, ಬಿಸಿಯೂಟ ಕಾರ್ಮಿಕರು ಹಾಗೂ ಅಸಂಘಟಿತ ವಲಯದ ನೌಕರರು ಮತ್ತು ಸ್ಕೀಮ್ ವರ್ಕರ್‌ಗಳು, ದಿನಗೂಲಿ ನೌಕರರ ಜೀವನ ತೀವ್ರ ಸಂಕಷ್ಟದಲ್ಲಿದೆ ಎಂದರು.
ಕಾರ್ಮಿಕರ ಡೌನ್ ಸೈಜಿಂಗ್, ಲಕ್ಷಾಂತರ ಕಾರ್ಖಾನೆ ಮತ್ತು ಕಂಪನಿಗಳಿಗೆ ಬೀಗ ಜಡಿದ, ಉದ್ಯೋಗ ಕಡಿತದಲ್ಲಿ ಹೆಚ್ಚಳ, ಸರ್ಕಾರದ ಇಲಾಖೆಗಳು ಮತ್ತು ಉದ್ದಿಮೆಗಳಲ್ಲಿ ಹೊಸ ನೇಮಕಾತಿಗಳಲ್ಲಿ ತಡೆಯಾಜ್ಞೆ, ಅವಧಿಗೆ ಮುಂಚೆಯೇ ಒತ್ತಾಯದ ನಿವೃತ್ತಿ, ಇತ್ಯಾದಿ ಕಾರಣಗಳಿಂದ ನಿರುದ್ಯೋಗ ಸಮಸ್ಯೆ ತಾರಕಕ್ಕೇರಿದೆ. ಈ ಅಸಮಾನತೆ ವಿರುದ್ಧ, ಶೋಷಕ ವ್ಯವಸ್ಥೆ ಕಿತ್ತೂಗೆದು ಸಮಾಜವಾದಿ ಸಮಾಜ ಕಟ್ಟಲು ಎಲ್ಲಾ ಕಾರ್ಮಿಕರು ಸಜ್ಜಾಗಬೇಕು ಎಂದರು. ನಂತರ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರಾದ ನಿಂಗಮ್ಮ ಹುಡೆದು, ಸವಿತಾ ಜಾದವ್, ಚಾಂದಬಿ ಹೊಸಟ್ಟಿ, ಸುನಂದ ಹೊಂಗಲ್, ಸುನಿತಾ ಚವನ್, ರೇಣುಕಾ ಹೊಂಗಲ್ ಸೇರಿದಂತೆ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಡಬಲ್ ಗೇಮ್; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು
Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್
Hubli: ಹಣಕಾಸು ಆಯೋಗದ ಅನ್ಯಾಯದ ಬಗ್ಗೆ ಬಿಜೆಪಿಯರಿಂದ ಮೌನ: ಸಿದ್ದರಾಮಯ್ಯ ಕಿಡಿ
Hubli: ಜನರ ದಿಕ್ಕು ತಪ್ಪಿಸಲು ಬಿಜೆಪಿಯಿಂದ ವಕ್ಫ್ ಹೋರಾಟ: ಸಿಎಂ ಸಿದ್ದರಾಮಯ್ಯ
By Election: ಶಿಗ್ಗಾವಿ ಸಮರ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಮುಖಂಡರ ಸಭೆ
MUST WATCH
ಹೊಸ ಸೇರ್ಪಡೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.