ಶುದ್ಧ-ಸ್ಪಷ್ಟ ಕನ್ನಡ ಉಳಿಸಿ-ಬೆಳೆಸಬೇಕಿದೆ; ಮಹೇಶ ಜೋಶಿ
ಕನ್ನಡ ಭಾಷೆಗಳು ಮಾತ್ರ ಶುದ್ಧ ಎಂಬ ಕೀರ್ತಿಗೆ ಪಾತ್ರವಾಗಿವೆ.
Team Udayavani, Dec 9, 2021, 5:48 PM IST
ಧಾರವಾಡ: ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಶುದ್ಧ ಕನ್ನಡ ಭಾಷೆ ಮಾಡುವವರ ಸಂಖ್ಯೆ ಶೇ.26 ಮಾತ್ರ ಇದ್ದು, ಅದರಲ್ಲೂ ಅ ಕಾರ ಮತ್ತು ಹ ಕಾರ ವ್ಯತ್ಯಾಸ ತಿಳಿದ ಕನ್ನಡಿಗರು ತುಂಬಾ ಕಡಿಮೆಯೇ ಇದ್ದಾರೆಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಅಭಿಪ್ರಾಯ ಪಟ್ಟರು.
ಇಲ್ಲಿನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷ ಡಾ|ಲಿಂಗರಾಜ ಅಂಗಡಿ ಅವರ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಾದೇಶಿಕವಾರು ಭಾಷೆಯ ಉಚ್ಛಾರ ಬದಲಾಗುತ್ತದೆ. ಆದರೆ ಶುದ್ಧ-ಸ್ಪಷ್ಟ ಕನ್ನಡವನ್ನು ನಾವು ಉಳಿಸಿ-ಬೆಳೆಸಬೇಕಿದೆ. ಇಡೀ ಜಗತ್ತಿನಲ್ಲಿ ಸಂಸ್ಕೃತ ಮತ್ತು ಕನ್ನಡ ಭಾಷೆಗಳು ಮಾತ್ರ ಶುದ್ಧ ಎಂಬ ಕೀರ್ತಿಗೆ ಪಾತ್ರವಾಗಿವೆ. ಇದನ್ನು ಉಳಿಸಿಕೊಂಡು ಹೋಗುವ ಹೊಣೆ ಕನ್ನಡಿಗರಾದ ನಮ್ಮ ಮೇಲಿದೆ ಎಂದರು.
ಬರುವ ವರ್ಷದೊಳಗೆ 3ಲಕ್ಷ ಹೊಸ ಸದಸ್ಯರನ್ನು ಮಾಡುವ ಗುರಿ ಹೊಂದಲಾಗಿದೆ. ರಾಜ್ಯದ ಪ್ರತಿ ಗ್ರಾಮಗಳಲ್ಲಿ ಕೂಡ ನಾನು ಪಾದಯಾತ್ರೆ ಮಾಡುತ್ತೇನೆ. ಮುಂದಿನ ಬಾರಿ ಮೊಬೈಲ್ ಆ್ಯಪ್ ಬಳಸಿ ಸುರಕ್ಷಿತವಾಗಿ ಮತ ಚಲಾಯಿಸುವಂತೆ ಮಾಡುತ್ತೇನೆ ಎಂದರು. ದೂರದರ್ಶನದಲ್ಲಿ ಚಂದನ ವಾಹಿನಿಯನ್ನು ಟಿವಿ 9 ಎಂದು ಕರೆಯುತ್ತಿದ್ದರು. ಆದರೆ ಅತ್ತರ್ (ಸುಗಂಧದ್ರವ್ಯ)ದಂತೆ ತಲೆ ನೋವು ಬರಿಸದೇ ಎಲ್ಲರಿಗೂ ಹಿತವಾದ ಕಂಪನ್ನೇ ಇದು ನೀಡುತ್ತಿತ್ತು. ಚಂದನ ಎಂದು
ಹೆಸರಿಟ್ಟು ಅದನ್ನು ಎಲ್ಲೆಡೆ ಪಸರಿಸುವಂತೆ ಮಾಡಿದೆ. ಅದೇ ಮಾದರಿಯಲ್ಲೇ ಕನ್ನಡ ಸಾಹಿತ್ಯ ಪರಿಷತ್ತಿನ ಧ್ಯೇಯೋಧ್ಯೇಶಗಳನ್ನು ಈಡೇರಿಸುವ ಕೆಲಸ ಮಾಡುತ್ತೇನೆ ಎಂದರು.
ಕಸಾಪ ಚುನಾವಣೆಯಲ್ಲಿ ನಾನು ಒಂದು ಪಕ್ಷದ ಬೆಂಬಲ ಪಡೆದುಕೊಂಡೆ ಎನ್ನುವ ಆರೋಪವಿದೆ. ಆದರೆ ನಾನು ಯಾವುದೇ ಪಕ್ಷದ ಬೆಂಬಲ ಪಡೆಯದೇ ಎಲ್ಲ ಸಿದ್ಧಾಂತಗಳನ್ನು ಒಪ್ಪಿಕೊಂಡು ಕೆಲಸ ಮಾಡುತ್ತೇನೆ.
ಮಹೇಶ ಜೋಶಿ,
ಕಸಾಪ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
BJP ಡಬಲ್ ಗೇಮ್; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು
Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್
Hubli: ಹಣಕಾಸು ಆಯೋಗದ ಅನ್ಯಾಯದ ಬಗ್ಗೆ ಬಿಜೆಪಿಯರಿಂದ ಮೌನ: ಸಿದ್ದರಾಮಯ್ಯ ಕಿಡಿ
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.