ಗುಣಾತ್ಮಕ ಶಿಕ್ಷಣಕ್ಕೆ ಪೋಷಕರ ಸಹಕಾರ ಅಗತ್ಯ: ನಿಂಬಣ್ಣವರ
Team Udayavani, Jun 3, 2019, 11:57 AM IST
ಕಲಘಟಗಿ: ತಾಲೂಕು ಮಟ್ಟದ ವಿಶೇಷ ದಾಖಲಾತಿ ಆಂದೋಲನದ ಅಂಗವಾಗಿ ಅಕ್ಷರ ಬಂಡಿಯ ಮೆರವಣಿಗೆಗೆ ಶಾಸಕ ಸಿ.ಎಂ. ನಿಂಬಣ್ಣವರ ಚಾಲನೆ ನೀಡಿದರು.
ಕಲಘಟಗಿ: ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ಒದಗಿಸುವುದು ಸರ್ಕಾರ ಹಾಗೂ ಪೋಷಕರ ಕರ್ತವ್ಯವಾಗಿದ್ದು, ಸರ್ಕಾರ ಈ ನಿಟ್ಟಿನಲ್ಲಿ ಮುಂದಡಿ ಇಟ್ಟಿದೆ. ಇದಕ್ಕೆ ಪೋಷಕರೆಲ್ಲರ ಸಹಕಾರ ಅತೀ ಅವಶ್ಯ ಎಂದು ಶಾಸಕ ಸಿ.ಎಂ. ನಿಂಬಣ್ಣವರ ಹೇಳಿದರು.
ಹಿರೇಹೊನ್ನಿಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಸಾಮಾನ್ಯ ಮತ್ತು ವಿಶೇಷ ದಾಖಲಾತಿ ಆಂದೋಲನದ ಪ್ರಯುಕ್ತ ಅಕ್ಷರ ಬಂಡಿಯ ಮೆರವಣಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಸರ್ಕಾರಿ ಶಾಲೆಗಳಲ್ಲಿ ಖಾಸಗಿ ಶಾಲೆಗಳಲ್ಲಿನ ಕಲಿಕೆಗಿಂತಲೂ ಉತ್ಕೃಷ್ಟವಾದ ಬೋಧನೆ ಮಾಡುವ ಕೌಶಲ ಹೊಂದಿದ ಶಿಕ್ಷಕ ಬಳಗ ಇದೆ. ಇದರ ಸದುಪಯೋಗವನ್ನು ಎಲ್ಲ ಪೋಷಕರು ಪಡೆದುಕೊಂಡು ತಮ್ಮ ಮಕ್ಕಳ ಉಜ್ವಲ ಭವಿಷ್ಯ ರೂಪಿಸಲು ಮುಂದಾಗಬೇಕು ಎಂದರು.
ಗ್ರಾಪಂ ಅಧ್ಯಕ್ಷ ಸಹದೇವಪ್ಪ ಧನಿಗೊಂಡ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಬಸಾಪುರ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿಪಂ ಸದಸ್ಯೆ ಈರವ್ವ ದಾಸನಕೊಪ್ಪ, ತಾಪಂ ಅಧ್ಯಕ್ಷೆ ಸುನಿತಾ ಮ್ಯಾಗಿನಮನಿ, ಶಂಕ್ರವ್ವ ಮಡ್ಲಿ, ಬಸವರಾಜ ಮಾದಿ, ರಾಮಣ್ಣ ಬಮ್ಮಿಗಟ್ಟಿ, ಉಮೇಶ ಚಿಕ್ಕಣ್ಣವರ, ಶಿವಾನಂದ ಮಾದಿ, ರಾಜು ಚಿಕ್ಕಮಠ, ಶಿಕ್ಷಣ ಸಂಯೋಜಕ ಪುಟ್ಟಣ್ಣ ಭಜಂತ್ರಿ, ಸಿಆರ್‌ಪಿ ತಬಸ್ಸುಂ ಪಾಲ್ಗೊಂಡಿದ್ದರು. ಮಂಜುಳಾ ಅಂಬಿಗೇರ ಸ್ವಾಗತಿಸಿದರು. ಎಸ್.ಎಲ್. ದಾಸರ ವಂದಿಸಿದರು. ಆರಂಭದಲ್ಲಿ ವಿದ್ಯಾರ್ಥಿಗಳು, ಗಣ್ಯರು ಹಾಗೂ ಎಲ್ಲ ಶಿಕ್ಷಕರೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಅಲಂಕೃತ ಅಕ್ಷರ ಬಂಡಿಯ ಮೆರವಣಿಗೆ ನಡೆಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.