ಹು-ಧಾ ಪೊಲೀಸ್ರಿಗೆ ಶೀಘ್ರ ವಾರದ ರಜೆ
Team Udayavani, Aug 1, 2017, 12:22 PM IST
ಹುಬ್ಬಳ್ಳಿ: ಹು-ಧಾ ಮಹಾನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಸಿಬ್ಬಂದಿಗೆ ವಾರದ ರಜೆ (ವೀಕ್ಲಿ ಆಫ್)ಮಂಜೂರಾಗಿದ್ದು, ಶೀಘ್ರದಲ್ಲಿಯೇ ಅನುಷ್ಠಾನಗೊಳ್ಳಲಿದೆ ಎಂದು ಹು-ಧಾ ಕಮೀಷನರೇಟ್ ನ ನಿವೃತ್ತ ಪೊಲೀಸ್ ಆಯುಕ್ತ ಪಾಂಡುರಂಗ ಎಚ್. ರಾಣೆ ಹೇಳಿದರು.
ಕಾರವಾರ ರಸ್ತೆಯ ಹಳೆಯ ಶಹರ ಸಶಸ್ತ್ರ ಮೀಸಲು ಪಡೆ (ಸಿಎಆರ್) ಮೈದಾನದಲ್ಲಿ ಸೇವಾ ನಿವೃತ್ತಿ ಹಿನ್ನೆಲೆಯಲ್ಲಿ ಇಲಾಖೆ ವತಿಯಿಂದ ಸೋಮವಾರ ಆಯೋಜಿಸಿದ್ದ ಕವಾಯತು ಮತ್ತು ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು. ವಾರದ ರಜೆ ವಿಷಯವಾಗಿ ಸಿಬ್ಬಂದಿಯ ಬಹುದಿನಗಳ ಬೇಡಿಕೆ ತನ್ಮೂಲಕ ಈಡೇರಿದಂತಾಗಿದೆ ಎಂದರು.
ಮಹಾನಗರ ಪೊಲೀಸ್ ಇಲಾಖೆಯಲ್ಲಿ 2,700ಕ್ಕೂ ಅಧಿಕ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರೆಲ್ಲ ಒತ್ತಡದಿಂದ ಕೆಲಸ ಮಾಡಬೇಕಾಗಿದೆ. ಖಾಲಿ ಹುದ್ದೆಗಳ ಭರ್ತಿಗಾಗಿ ಸಿಬ್ಬಂದಿ ನೇಮಕಗೊಳಿಸಿದ್ದು, ಅವರೆಲ್ಲ ತರಬೇತಿ ಪಡೆದು ತಿಂಗಳೊಳಗೆ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಇದರಿಂದ ಪೊಲೀಸ್ ಇಲಾಖೆ ಮತ್ತಷ್ಟು ಬಲಗೊಳ್ಳಲಿದೆ.
ಕವಾಯತು ನಡೆಸಲು ವಿಶಾಲವಾದ ಮೈದಾನದ ಅಗತ್ಯವಿರುವ ಹಿನ್ನೆಲೆಯಲ್ಲಿ 5 ಎಕರೆ ಭೂಮಿ ಮಂಜೂರು ಮಾಡುವಂತೆ ಬೇಡಿಕೆ ಸಲ್ಲಿಸಲಾಗಿತ್ತು. ಅದಕ್ಕೆ ಜಿಲ್ಲಾಧಿಕಾರಿಗಳು ಅನುಮತಿ ಸೂಚಿಸಿದ್ದು, ಶೀಘ್ರದಲ್ಲೇ ಸುಸಜ್ಜಿತ ಮೈದಾನದ ಕಾಮಗಾರಿಗೆ ಚಾಲನೆ ದೊರೆಯಲಿದೆ.
ಜೊತೆಗೆ ಇಲಾಖೆಯ ಸಿಬ್ಬಂದಿ ಮತ್ತು ಅವರ ಕುಟುಂಬ ವರ್ಗದವರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಬೃಹತ್ ಕಲ್ಯಾಣ ಭವನ ನಿರ್ಮಿಸುವ ಯೋಜನೆ ಹಾಕಿಕೊಳ್ಳಲಾಗಿತ್ತು. ಅದಕ್ಕಾಗಿ ಜಾಗ ಗುರುತಿಸಲಾಗಿದೆ ಎಂದರು. ಅವಳಿ ನಗರದ ಬಹುತೇಕ ಪೊಲೀಸ್ ಠಾಣೆಗಳಿಗೆ ಸ್ವಂತ ಕಟ್ಟಡವಿಲ್ಲ ಹಾಗೂ ಜಾಗದ ಸಮಸ್ಯೆ ಎದುರಿಸುವಂತಾಗಿದೆ.
ಕಾರಣಾಂತರಗಳಿಂದ ನನ್ನ ಸೇವಾವಧಿಯಲ್ಲಿ ಈ ಕೆಲಸ ಈಡೇರಿಸಲು ಆಗದೆ ಬಾಕಿ ಉಳಿದುಕೊಂಡಿದೆ ಎಂದರು. ಕಳೆದ ಎರಡು ವರ್ಷಗಳ ಸೇವೆಯಲ್ಲಿ ಕಮೀಷನರೇಟ್‌ನ ಸಿಬ್ಬಂದಿಯು ಉತ್ತಮ ಸಹಕಾರ, ಬೆಂಬಲ ನೀಡಿದ್ದರಿಂದ ಅವಳಿ ನಗರದಲ್ಲಿ ಶಾಂತಿ ನೆಲೆಸುವಂತೆ ಆಯಿತು ಎಂದು ಹೇಳಿದರು.
ಪಾಂಡುರಂಗ ಎಚ್. ರಾಣೆ ಅವರನ್ನು ತೆರೆದ ಜೀಪಿನಲ್ಲಿ ಕರೆದೊಯ್ದು ಗೌರವ ವಂದನೆ ಸಲ್ಲಿಸಲಾಯಿತು. ಪೊಲೀಸ್ ತಂಡಗಳು ಗೌರವ ಸಮರ್ಪಿಸಿದವು. ಡಿಸಿಪಿಗಳಾದ ರೇಣುಕಾ ಸುಕುಮಾರ, ಬಿ.ಎಸ್. ನೇಮಗೌಡ, ಎಸಿಪಿಗಳಾದ ಎನ್.ಬಿ. ಸಕ್ರಿ, ಎಚ್.ಡಿ. ದಾವೂದ್‌ಖಾನ್, ಎಂ.ವಿ. ನಾಗನೂರ, ವಾಸುದೇವರಾವ್ ಎನ್., ನಿವೃತ್ತ ಪೊಲೀಸ್ ಅಧಿಕಾರಿಗಳು, ಇನ್ಸ್‌ಪೆಕ್ಟರ್‌ಗಳು, ಪಿಎಸ್‌ಐಗಳು, ಎಎಸ್‌ಐಗಳು ಹಾಗೂ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.