ರೈಲ್ವೆ ಕೆಳ ಸೇತುವೆಗಳ ಕಾಮಗಾರಿ ಶೀಘ್ರ ಪೂರ್ಣ
Team Udayavani, Jan 3, 2021, 2:56 PM IST
ಹುಬ್ಬಳ್ಳಿ: ಇಲ್ಲಿನ ದೇಶಪಾಂಡೆನಗರ ಹಾಗೂ ಭವಾನಿನಗರ ಮಧ್ಯೆ ಸಂಪರ್ಕ ಕಲ್ಪಿಸುವ ರೈಲ್ವೆಕೆಳಸೇತುವೆಯನ್ನು ಒಂದು ತಿಂಗಳೊಳಗೆಹಾಗೂ ಉಣಕಲ್ ರೈಲ್ವೆ ನಿಲ್ದಾಣ ಬಳಿನೂತನವಾಗಿ ನಿರ್ಮಾಣವಾಗಲಿರುವ ರೈಲ್ವೆಕೆಳಸೇತುವೆಯನ್ನು ನಾಲ್ಕು ತಿಂಗಳೊಳಗೆ ಪೂರ್ಣಗೊಳಿಸಿ ಸಾರ್ವಜನಿಕರ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ ಹೇಳಿದರು.
ಇಲ್ಲಿನ ದೇಶಪಾಂಡೆ ನಗರ ಶ್ರೀಕೃಷ್ಣ ಮಂದಿರಬಳಿ ನಿರ್ಮಾಣವಾಗುತ್ತಿರುವ ರೈಲ್ವೆ ಕೆಳಸೇತುವೆಹಾಗೂ ಉಣಕಲ್ ರೈಲ್ವೆ ನಿಲ್ದಾಣದ ಸಮೀಪನಿರ್ಮಿಸಲು ಉದ್ದೇಶಿಸಲಾಗಿರುವ ನೂತನಕೆಳಸೇತುವೆ ನಿರ್ಮಾಣ ಕಾಮಗಾರಿ ಸ್ಥಳಗಳಿಗೆಭೇಟಿ ನೀಡಿ ಪರಿಶೀಲನೆ ನಡೆಸಿ ನಂತರಸುದ್ದಿಗಾರರೊಂದಿಗೆ ಮಾತನಾಡಿದರು.
ಸ್ಥಳೀಯ ಸಂಸದರು ಆಗಿರುವ ಕೇಂದ್ರಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದಜೋಶಿ ಅವರ ಕಾಳಜಿ ಮತ್ತು ಸಹಕಾರದಿಂದ ದೇಶಪಾಂಡೆ ನಗರ ಹಾಗೂ ಭವಾನಿನಗರಮಧ್ಯೆ ಸಂಪರ್ಕ ಕಲ್ಪಿಸುವ ರೈಲ್ವೆ ಕೆಳಸೇತುವೆಯಕಾಮಗಾರಿಯನ್ನು 4.5 ಕೋಟಿ ರೂ.ವೆಚ್ಚದಲ್ಲಿ ಕೈಗೊಳ್ಳಲಾಗಿದೆ. ಇನ್ನು ಒಂದು ತಿಂಗಳ ಅವಧಿ ಯಲ್ಲಿ ಈ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದರು.
ಈ ಹಿಂದೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ದಿ| ಸುರೇಶ ಅಂಗಡಿಯವರು ಈ ಭಾಗದ ರೈಲ್ವೆ ಸುಧಾರಣೆ ಮತ್ತು ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಕುರಿತ ಬೇಡಿಕೆಗಳಿಗೆ ತ್ವರಿತವಾಗಿ ಸ್ಪಂದಿಸಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಬೇಕು. .ಉಣಕಲ್ಲ ರೈಲ್ವೆ ನಿಲ್ದಾಣವನ್ನು ಬೆಂಗಳೂರಿನ ಯಶವಂತಪುರ ರೈಲ್ವೆ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿಪಡಿಸಿ ಹುಬ್ಬಳ್ಳಿ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣದ ಸಂಚಾರ ದಟ್ಟಣೆ ಕಡಿಮೆ ಮಾಡುವ ಅವಕಾಶಗಳಿವೆ. ಉಣಕಲ್ಲ ರೈಲ್ವೆ ನಿಲ್ದಾಣದ ಬಳಿ 6.5 ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ಕೆಳಸೇತುವೆ ನಿರ್ಮಾಣ ಮಾಡಲಾಗುವುದು. ಇನ್ನು ನಾಲ್ಕು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಈ ಸೇತುವೆಗಳ ನಿರ್ಮಾಣದಿಂದ ಅಶೋಕನಗರ ಮಾರ್ಗವಾಗಿ ಸುತ್ತುವರಿದು ಸಂಚರಿಸುವ ಸಮಸ್ಯೆ ಪರಿಹಾರವಾಗಲಿದೆ ಎಂದರು.
ಕೋವಿಡ್ ನಿಯಂತ್ರಣ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸಮರ್ಥ ಮಾರ್ಗದರ್ಶನದಲ್ಲಿ ದೇಶದಲ್ಲಿ ಕಟ್ಟುನಿಟ್ಟಿನ ಕ್ರಮಗಳಿಂದ ಕೋವಿಡ್ ನಿಯಂತ್ರಣಕ್ಕೆ ಬಂದಿದೆ. ಲಸಿಕೆ ವಿತರಣೆಯಲ್ಲೂ ಶಿಸ್ತಿನಿಂದ ಕಾರ್ಯ ನಿರ್ವಹಿಸಿ ಇತರೆ ದೇಶಗಳಿಗಿಂತ ಮುಂಚೂಣಿಯಲ್ಲಿರಲಿದ್ದೇವೆಂಬ ಭರವಸೆ ವ್ಯಕ್ತಪಡಿಸಿದರು.
ಹುಬ್ಬಳ್ಳಿಯಲ್ಲಿ ವಿವಿಧ ಉದ್ಯಮ ಸಂಸ್ಥೆಗಳ ಕೈಗಾರಿಕೆ ಸ್ಥಾಪನೆ ಕುರಿತು ಮಾತುಕತೆನಡೆದಿವೆ. ಈ ಭಾಗದ ಜನರಿಗೆ ಶೀಘ್ರ ಸಿಹಿ ಸುದ್ದಿ ಸಿಗಲಿದೆ. ಕೈಗಾರಿಕೆ ನಿವೇಶನಗಳ ಹಂಚಿಕೆಪಾರದರ್ಶಕವಾಗಿ ನಡೆದಿದೆ ಎಂದರು. ಮಾರ್ಜಕ ಮತ್ತು ಸಾಬೂನು ಮಂಡಳಿ ನಿರ್ದೇಶಕ ಮಲ್ಲಿಕಾರ್ಜುನ ಸಾವುಕಾರ, ಪಾಲಿಕೆಯ ಮಾಜಿ ಸದಸ್ಯರಾದ ತಿಪ್ಪಣ್ಣ ಮಜ್ಜಗಿ, ಉಮೇಶ ಕೌಜಗೇರಿ, ರೈಲ್ವೆ ಕಾಮಗಾರಿ ಗುತ್ತಿಗೆದಾರ ವಿಎಸ್‌ವಿ ಪ್ರಸಾದ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.