ಬೇಡಿಕೆ ಈಡೇರಿಸಲು ರೈಲ್ವೆ ಸಚಿವರಿಗೆ ಮನವಿ
Team Udayavani, Oct 27, 2019, 10:58 AM IST
ಹುಬ್ಬಳ್ಳಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ವಲಯ ರೈಲ್ವೆ ಬಳಕೆದಾರರ ಸಲಹಾ ಸಮಿತಿ ಸದಸ್ಯ ಮಹೇಂದ್ರ ಸಿಂಘಿ ಅವರು ರೈಲ್ವೆ ಸಹಾಯಕ ಸಚಿವ ಸುರೇಶ ಅಂಗಡಿ ಅವರಿಗೆ ಮನವಿ ಸಲ್ಲಿಸಿದರು.
ಮೈಸೂರು- ಉದಯಪುರ (19668) ರೈಲಿಗೆ ವಡೋದರ ಹಾಗೂ ರತ್ಲಾಂ ನಿಲ್ದಾಣಗಳ ಮಧ್ಯ ಇರುವ ಮೇಘನಗರ ನಿಲ್ದಾಣದಲ್ಲಿ ನಿಲುಗಡೆ ಕಲ್ಪಿಸಬೇಕು. ಇದರಿಂದ ಪವಿತ್ರ ಜೈನ ಕ್ಷೇತ್ರ ಮೋಹನಖೇಡಾಕ್ಕೆ ತೆರಳುವವರಿಗೆ ಅನುಕೂಲವಾಗುತ್ತದೆ. ಹುಬ್ಬಳ್ಳಿಯಿಂದ ಅರಸಿಕೆರೆ ಮಾರ್ಗವಾಗಿ ಮಂಗಳೂರಿಗೆ ತೆರಳುವ ನೂತನ ರೈಲು ಸೇವೆ ಒದಗಿಸಬೇಕು. ಇದರಿಂದ ಉಡುಪಿ, ಮಂಗಳೂರಿಗೆ ತೆರಳಲು ಅನುಕೂಲವಾಗುತ್ತದೆ. ಈ ಭಾಗದ ಹೊಟೇಲ್ ಮಾಲಿಕರು ತಮ್ಮ ಊರಿಗೆ ಹೋಗಲು ಅನುಕೂಲವಾಗುತ್ತದೆ. ಅಳ್ನಾವರ ಹಾಗೂ ದಾಂಡೇಲಿ ಮಧ್ಯೆ ಸರಕು ಹಾಗೂ ಪ್ರಯಾಣಿಕರ ರೈಲು ಸೇವೆ ಪುನರಾರಂಭಿಸಬೇಕು. ಇದರಿಂದ ಕೈಗಾರಿಕೆ ಕ್ಷೇತ್ರ ಹಾಗೂ ಪ್ರವಾಸೋದ್ಯಮ ಬೆಳೆಯಲು ಅನುಕೂಲವಾಗುತ್ತದೆ.
ಹುಬ್ಬಳ್ಳಿ ನಿಲ್ದಾಣದ ಅಂಡರ್ ಪಾಸ್‌ನಲ್ಲಿ ಪ್ಲಾಟ್‌ಫಾರ್ಮ್ ಟಿಕೆಟ್ ಕೌಂಟರ್ ಆರಂಭಿಸಬೇಕು. ಟಿಕೆಟ್ ವೆಂಡಿಂಗ್ ಯಂತ್ರ ಅಳವಡಿಸಿದರೆ ಅಂಡರ್ ಪಾಸ್ ಮೂಲಕ ನಿಲ್ದಾಣಕ್ಕೆ ಪ್ರವೇಶ ಪಡೆಯುವವರಿಗೆ ಅನುಕೂಲವಾಗುತ್ತದೆ. ಅಲ್ಲದೇ ಮುಖ್ಯ ದ್ವಾರದ ಟಿಕೆಟ್ ಕೌಂಟರ್ ನಲ್ಲಿ ಜನದಟ್ಟಣೆ ಕಡಿಮೆಯಾಗುತ್ತದೆ ಎಂದು ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.