ರೈಲ್ವೆ ಸೇವೆ ಖಾಸಗಿ ಪಾಲಾಗುವ ಅಪಾಯ
Team Udayavani, Nov 16, 2019, 11:02 AM IST
ಹುಬ್ಬಳ್ಳಿ: ರೈಲ್ವೆ ಸೇವೆಯನ್ನು ಖಾಸಗೀಕರಣಗೊಳಿಸಿರುವ ಕೇಂದ್ರ ಸರಕಾರದ ನಿರ್ಣಯದ ಬಗ್ಗೆ ಎಚ್ಚೆತ್ತುಕೊಳ್ಳದಿದ್ದರೆ, ಮುಂದೊಂದು ದಿನ ಇಡೀ ರೈಲ್ವೆ ಸೇವೆ ಖಾಸಗಿಯವರ ಪಾಲಾಗುವುದರಲ್ಲಿ ಎರಡು ಮಾತಿಲ್ಲ ಎಂದು ಅಖೀಲ ಭಾರತ ರೈಲ್ವೆ ಕಾರ್ಮಿಕ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಶಿವಗೋಪಾಲ ಮಿಶ್ರಾ ಹೇಳಿದರು.
ಗದಗ ರಸ್ತೆಯ ನೈಋತ್ಯ ರೈಲ್ವೆ ಮಜ್ದೂರ್ ಸಂಘದ 15ನೇ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದ ಅವರು, ಹಿಂದೆ ಹೊಸ ಪಿಂಚಣಿ ಯೋಜನೆ ವಿರುದ್ಧ ಎಚ್ಚೆತ್ತುಕೊಳ್ಳದ ಕಾರಣ ಇಂದು ಕಾರ್ಮಿಕರು ಸಮಸ್ಯೆಗೆ ಸಿಲುಕಿದ್ದಾರೆ. ಆರಂಭದಲ್ಲಿ ಇದರ ತೀವ್ರತೆ ಅರಿಯದಿದ್ದರೂ ದೀರ್ಘಾವಧಿಯಲ್ಲಿ ಇದರ ಕೆಟ್ಟ ಪರಿಣಾಮ ಊಹಿಸಲು ಸಾಧ್ಯವಿಲ್ಲ. ಇದೀಗ ರೈಲ್ವೆ ಸೇವೆಯನ್ನು ಖಾಸಗಿಯವರಿಗೆ ವಹಿಸುತ್ತಿರುವುದು ಕೂಡ ಮುಂದೊಂದು ದಿನ ದೊಡ್ಡ ಪ್ರಮಾಣದ ಸಂಕಷ್ಟ ಎದುರಿಸಬೇಕಾಗುತ್ತದೆ. ಹೀಗಾಗಿ ಪ್ರತಿಯೊಬ್ಬ ಕಾರ್ಮಿಕರು ಈ ಬಗ್ಗೆ ಎಚ್ಚೆತ್ತುಕೊಂಡು ಇದರ ವಿರುದ್ಧ ಹೋರಾಟಕ್ಕೆ ಸಿದ್ಧರಾಗಬೇಕು ಎಂದರು.
ಆರಂಭದಲ್ಲಿ 150 ರೈಲುಗಳು, 50 ನಿಲ್ದಾಣಗಳನ್ನು ಖಾಸಗಿಯವರಿಗೆ ನೀಡಲಾಗಿದೆ. ಖಾಸಗಿಯವರಿಗೆ ನೀಡಿದ ರೈಲುಗಳು ಲಾಭದಲ್ಲಿ ನಡೆಯುತ್ತಿವೆ ಎಂದು ಜನರನ್ನು ನಂಬಿಸುವ ಕೆಲಸ ಸರಕಾರದಿಂದ ನಡೆಯುತ್ತಿದೆ. ವಾಸ್ತವಾಂಶ ಹಾಗೂ ಸರಕಾರದ ಹಿಂದಿನ ಉದ್ದೇಶಗಳನ್ನು ಜನರಿಗೆ ಹಾಗೂ ಕಾರ್ಮಿಕರಿಗೆ ತಿಳಿಸುವ ಕೆಲಸ ಆಗಬೇಕು. ಜನರ ತೆರಿಗೆ ಹಣ ಸೇವೆಯ ಹೆಸರಲ್ಲಿ ಖಾಸಗಿಯವರ ಪಾಲಾಗಲಿದೆ. ಕಾರ್ಮಿಕ ಒಕ್ಕೂಟದ ಅನಿಸಿಕೆಗಳನ್ನು ಧಿಕ್ಕರಿಸಿ ರೈಲ್ವೆ ಆಡಳಿತ ಮಂಡಳಿ ಹಾಗೂ ಕೇಂದ್ರ ಸರಕಾರ ಇಂತಹ ನಿರ್ಣಯಗಳನ್ನು ಕೈಗೊಳ್ಳುತ್ತಿರುವುದು ಜನ ವಿರೋಧಿಯಾಗಿದೆ ಎಂದು ಹೇಳಿದರು.
ನೈಋತ್ಯ ರೈಲ್ವೆ ವಲಯ ಪ್ರಧಾನ ವ್ಯವಸ್ಥಾಪಕ ಅಜಯಕುಮಾರ ಸಿಂಗ್ ಮಾತನಾಡಿ, ರೈಲ್ವೆ ಸೇವೆಯಲ್ಲಿ ಪ್ರಮುಖವಾಗಿ ಸುರಕ್ಷತೆಗೆ ಮೊದಲ ಒತ್ತು ನೀಡಲಾಗುತ್ತಿದೆ. ಅಧಿಕಾರ ಸ್ವೀಕರಿಸಿದ ನಂತರ ಹಲವು ಸುಧಾರಣೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಎಲ್ಲ ಕಾರ್ಯಗಳಿಗೆ ಇಲ್ಲಿನ ಸಂಘಟನೆ ಸಹಕಾರ ನೀಡುತ್ತಿದೆ ಎಂದರು.
ಕಾರ್ಯಾಗಾರದಿಂದ ಸಂಘದ ಕಚೇರಿವರೆಗೂ ಮೆರವಣಿಗೆ ನಡೆಯಿತು. ಬೆಂಗಳೂರು, ಮೈಸೂರು ಹಾಗೂ ಹುಬ್ಬಳ್ಳಿ ವಿಭಾಗದಿಂದ ಆಗಮಿಸಿದ್ದ ನೌಕರರು ಪಾಲ್ಗೊಂಡಿದ್ದರು. ನೈಋತ್ಯ ರೈಲ್ವೆ ವಲಯ ಮಜ್ದೂರ್ ಸಂಘದ ಅಧ್ಯಕ್ಷ ಆರ್.ಆರ್. ನಾಯಕ, ಖಜಾಂಚಿ ವಿ.ಬಿ. ಚಾರಖಾನಿ, ಆಲ್ಬರ್ಟ್ ಡಿಕ್ರೂಜ್ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.