ಮಳೆ ಅಬ್ಬರ; ನವಲಗುಂದದಲ್ಲಿ ಹಾನಿ ಅಪಾರ 

Team Udayavani, May 31, 2018, 5:25 PM IST

31-may-22.jpg

ನವಲಗುಂದ: ಮಂಗಳವಾರ ಸುರಿದ ಮಳೆಗೆ ತಾಲೂಕಿನ ವಿವಿಧೆಡೆ ಅಪಾರ ಹಾನಿ ಸಂಭವಿಸಿದ್ದು, ಜನಜೀವನ ಅಸ್ತವ್ಯಸ್ತಗೊಂಡಿತ್ತು. ರಸ್ತೆ, ಸೇತುವೆ, ತೋಟಗಾರಿಕೆ ಬೆಳೆಗಳು ಹಾನಿಗೊಳಗಾಗಿದ್ದು, ಜಾವೂರ ಗ್ರಾಮದಲ್ಲಿ ಯುವಕನೊಬ್ಬ ಸಿಡಿಲಿಗೆ ಬಲಿಯಾದ ಘಟನೆ ನಡೆದಿದೆ.

ಹಾಲಕುಸುಗಲ್‌ ಗ್ರಾಮದಲ್ಲಿ ಎರಡು ಬಣವೆಗಳು ಸಿಡಿಲಿಗೆ ಆಹುತಿಯಾಗಿವೆ. ಹಣಸಿ ಗ್ರಾಮದಲ್ಲಿ ಸುಮಾರು 55 ಮನೆಗಳಿಗೆ ನೀರು ನುಗ್ಗಿ ಜಲಾವೃತಗೊಂಡಿದ್ದು, ನಾಲ್ಕು ಮನೆಗಳ ಭಾಗಶಃ ಗೋಡೆಗಳು ಬಿದ್ದಿವೆ. ಅಲ್ಲದೇ ಅದೇ ಗ್ರಾಮದಲ್ಲಿ ಸುಮಾರು 15 ಮೇವಿನ ಬಣವೆ, ಕಡಲೆ, ಗೋದಿ,
ಜೋಳ ಬೆಳೆ ಜಲಾವೃತಗೊಂಡು ಅಪಾರ ಪ್ರಮಾಣದ ಹಾನಿಯಾಗಿದೆ. ಎರಡು ಬಣವೆ ನೀರಿನ ರಭಸಕ್ಕೆ ತೇಲಿ ಹೋಗಿದೆ. ತಿರ್ಲಾಪುರ-ಮೊರಬ ರಸ್ತೆಯ ಸೇತುವೆಗಳು ಶಿಥಿಲಗೊಂಡು ಒಡೆದು ಹೋಗಿದ್ದು, ರಸ್ತೆಯೂ ಸಂರ್ಪೂಣ ಹದಗೆಟ್ಟಿದೆ. ಶಿರಕೋಳ ಮತ್ತು ಹಣಸಿ ಗ್ರಾಮದ ರಸ್ತೆ ಸಂಪರ್ಕ ಕಡಿತಗೊಂಡಿದೆ. ಮೊರಬ ಜಿಪಂ ಕ್ಷೇತ್ರ ವ್ಯಾಪ್ತಿಯ ಹೊಲದ ಒಡ್ಡುಗಳು ಒಡೆದು ಹಾಳಾಗಿವೆ.

ಶಾಸಕರಿಂದ ಪರಿಶೀಲನೆ: ಮೊರಬ, ಶಿರಕೋಳ, ಹಣಸಿ, ತುಪ್ಪತ ಕುರಹಟ್ಟಿ ಗ್ರಾಮದಲ್ಲಿ ಹಾನಿಯಾದ ಪ್ರದೇಶಗಳಿಗೆ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಭೇಟಿ ನೀಡಿ ಪರಿಶೀಲಿಸಿದರು. ಹಾನಿ ಪ್ರದೇಶದಲ್ಲಿ ಶಾಶ್ವತ ಪರಿಹಾರ ಕಂಡುಕೊಳ್ಳುವ ಭರವಸೆ ನೀಡಿದರು.

ಮೊರಬ ಗ್ರಾಮಕ್ಕೆ ಶಾಸಕರು ಭೇಟಿ ನೀಡಿದ್ದ ವೇಳೆ, ಪ್ರತಿ ಬಾರಿ ಮಳೆಯಾದ ಸಂದರ್ಭದಲ್ಲಿ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಆವರಣದಲ್ಲಿ ನೀರು ನುಗ್ಗಿ ವಿದ್ಯಾರ್ಥಿಗಳಿಗೆ-ಶಿಕ್ಷಕರಿಗೆ ಹೋಗಲು ಸಾಧ್ಯವಾಗದೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು ದೂರಿತ್ತರು. ಅದಕ್ಕೆ ಸ್ಪಂದಿಸಿದ ಶಾಸಕ ಮುನೇನಕೊಪ್ಪ, ಕೂಡಲೇ ಜೆಸಿಬಿ ಯಂತ್ರ ಬಳಸಿ ಅಕ್ಕಪಕ್ಕದ ಹೂಳು ತೆರವುಗೊಳಿಸಿ ನೀರು ಸಲೀಸಾಗಿ ಹೋಗಲು ದಾರಿ ಮಾಡಬೇಕೆಂದು ತಹಶೀಲ್ದಾರ್‌ ಕೆ.ಬಿ. ಕೋರಿಶೆಟ್ಟರ ಅವರಿಗೆ ಸೂಚನೆ ನೀಡಿದರು.

ಹಣಸಿ ಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಬಸವರಾಜ ಜಕಾತಿ ಎಂಬ ಸಂತ್ರಸ್ತ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಅವರ ಕಾಲು ಹಿಡಿದು ನನ್ನ ಮನೆ ನೋಡ ಬನ್ನಿ, ಎಲ್ಲ ಮೇಂಬರುಗಳು ಇಲ್ಲಿಯೇ ಇದ್ದೀರಿ ಎಂದು ಗೋಗರೆದು ಗಮನ ಸೆಳೆದನು.

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

CM-siddu

Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ

b s yediyurappa

By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್‌ ವೈ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.