ದಲಿತಪರ ಸಂಘಟನೆಗಳಿಂದ ಅಭಿನಂದನಾ ಸಮಾವೇಶ
Team Udayavani, Feb 14, 2020, 12:05 PM IST
ಸಾಂಧರ್ಬಿಕ ಚಿತ್ರ
ಹುಬ್ಬಳ್ಳಿ: ಪೌರತ್ವ ತಿದ್ದುಪಡಿ ಕಾನೂನು ಬೆಂಬಲಿಸಿ ಪ್ರಗತಿಪರ ದಲಿತ ಒಕ್ಕೂಟಗಳ ಮಹಾಸಭಾ ನೇತೃತ್ವದಲ್ಲಿ ವಿವಿಧ ದಲಿತಪರ ಸಂಘಟನೆಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುವ ಸಮಾವೇಶ ಗುರುವಾರ ನಡೆಯಿತು.
ಡಾ| ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಆರಂಭವಾದ ರ್ಯಾಲಿ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ನಡೆಯಿತು. ಸಮಾವೇಶಯುದ್ದಕ್ಕೂ ಸಿಎಎ, ಎನ್‌ಆರ್‌ಸಿ ಹಾಗೂ ಎನ್‌ಪಿಆರ್ ಪರವಾಗಿ ಘೋಷಣೆ ಕೂಗಿದರು. ನಂತರ ಸಂಗೊಳ್ಳಿ ರಾಯಣ್ಣ ವೃತ್ತಕ್ಕೆ ಆಗಮಿಸಿದ ತಹಶೀಲ್ದಾರ್ ಪ್ರಕಾಶ ನಾಸಿ ಅವರಿಗೆ ಮಹಾಸಭಾದ ಸಂಚಾಲಕರು ಅಭಿನಂದನಾ ಪತ್ರ ಸಲ್ಲಿಸಿದರು.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿ, ಪಾಕಿಸ್ತಾನ, ಅಫಘಾನಿಸ್ತಾನ ಹಾಗೂ ಬಾಂಗ್ಲಾ ದೇಶದಲ್ಲಿ ಧಾರ್ಮಿಕ ದೌರ್ಜನ್ಯಕ್ಕೊಳಗಾದ ಅಲ್ಲಿನ ಅಲ್ಪಸಂಖ್ಯಾತರಿಗೆ ಪೌರತ್ವ ಕೊಡುವುದನ್ನು ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು ವಿರೋಧ ಮಾಡುತ್ತಿವೆ. ದೌರ್ಜನ್ಯಕ್ಕೊಳಗಾಗಿರುವ ಬಹುತೇಕರು ದಲಿತ ವರ್ಗಕ್ಕೆ ಸೇರಿದವರಾಗಿದ್ದಾರೆ. ಅವರಿಗೆ ಪೌರತ್ವ ನೀಡಲು ಈ ಕಾಯ್ದೆ ತರಲಾಗಿದ್ದು, ಇದನ್ನು ವಿರೋಧ ಮಾಡುವ ಮೂಲಕ ಕಾಂಗ್ರೆಸ್ ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಮಾತನಾಡಿ, ಈ ಕಾಯ್ದೆಗಳಿಂದ ದೇಶದಲ್ಲಿ ನೆಲೆಸಿರುವ ಅಲ್ಪಸಂಖ್ಯಾತರು ಹಾಗೂ ದಲಿತರಿಗೆ ಯಾವುದೇ ಸಮಸ್ಯೆಯಿಲ್ಲ. ಈ ಕಾನೂನು ವಿರೋಧ ಮಾಡುವ ಕಾಂಗ್ರೆಸ್ ಹಾಗೂ ಇತರೆ ಪಕ್ಷಗಳು ದಲಿತ ವಿರೋಧಿಗಳು ಎಂದು ಹೇಳಿದರು.
ಮುಖಂಡರಾದ ಚಂದ್ರಶೇಖರ ಗೋಕಾಕ, ಲಕ್ಷ್ಮಣ ಬಿಳಗಿ, ಮಹೇಂದ್ರ ಕೌತಾಳ, ರಂಗನಾಯಕ ತಪೇಲಾ, ಅರುಣ ಹುದ್ಲಿ, ರಾಕೇಶ ದೊಡ್ಡಮನಿ, ಸುಭಾಸ ಅಂಕಲಕೋಟಿ, ಹನುಮಂತಪ್ಪ ದೊಡ್ಡಮನಿ, ಪರಶುರಾಮ ಪೂಜಾರ, ಶಶಿಕಾಂತ ಬಿಜವಾಡ, ಅನೂಪ ಬಿಜವಾಡ, ಬಸವರಾಜ ಅಮ್ಮಿನಬಾವಿ, ಮಂಜುನಾಥ ಬಿಜವಾಡ, ನಾಗರಾಜ ಟಗರಗುಂಟಿ ಪಾಲ್ಗೊಂಡಿದ್ದರು.
ಇತ್ತೀಚೆಗೆ ಸ್ಥಳೀಯ ಶಾಸಕರೊಬ್ಬರು ಆಯೋಜಿಸಿದ್ದ ಪ್ರತಿಭಟನೆಯಲ್ಲಿ ದಲಿತರು ಇಲ್ಲದಿದ್ದರೂ ದಲಿತರ ಹೋರಾಟ ಎಂದು ಕಪಟ ನಾಟಕ ಮಾಡಿದ್ದಾರೆ. ದೌರ್ಜನ್ಯಕ್ಕೊಳಗಾಗಿ ದೇಶಕ್ಕೆ ಬಂದಿರುವ ದಲಿತರಿಗೆ ಪೌರತ್ವ ಕೊಡುವುದು ತಪ್ಪಾ? ದಲಿತರು ಹಾಗೂ ಅಲ್ಪಸಂಖ್ಯಾತರು ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿಹಿಂದುಳಿಯುವಂತೆ ಮಾಡಿದ ಕೀರ್ತಿ ಕಾಂಗ್ರೆಸ್‌ಗೆ ಸಲ್ಲುತ್ತದೆ. –ಪ್ರಹ್ಲಾದ ಜೋಶಿ, ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.