ಎಸ್‌ಡಿಎಂ ನಾರಾಯಣ ಹೃದಯಾಲಯ ವೈದ್ಯರಿಂದ ಅಪರೂಪದ ಶಸ್ತ್ರಚಿಕಿತ್ಸೆ


Team Udayavani, Oct 23, 2020, 5:43 PM IST

Hubali-tdy-2

ಧಾರವಾಡ: ಹೃದಯ ಮಹಾಪಧಮನಿಯಲ್ಲಿ ದೋಷದಂತಹ ಗಂಭೀರ ಹೃದಯ ರೋಗ ಸಮಸ್ಯೆಯಿಂದ ಬಳಲುತ್ತಿದ್ದ 20 ದಿನದ ಹೆಣ್ಣು ಮಗುವಿಗೆ ಎಸ್‌ಡಿಎಮ್‌ ನಾರಾಯಣ ಹಾರ್ಟ್‌ ಸೆಂಟರ್‌ನ ವೈದ್ಯರು ಅಪರೂಪದ ಯಶಸ್ವಿ ಹೃದಯ ಚಿಕಿತ್ಸೆ ಮಾಡಿ ಗಮನ ಸೆಳೆದಿದ್ದಾರೆ.

ನವಜಾತ ಶಿಶುವಿಗೆ ಸಂಕೀರ್ಣ ಹೃದ್ರೋಗ ಹಸ್ತಕ್ಷೇಪ ಎನಿಸಿದ ಎಡ ಶೀರ್ಷಧಮನಿ ಅಪಧಮನಿ ಕತ್ತರಿಸುವಿಕೆ (ಲೆಫ್ಟ್‌ಕರೋಟಿಡ್‌ ಆರ್ಟರಿ) ಮತ್ತು ಬಲೂನ್‌ ಮೂಲಕ ಹಿಗ್ಗಿಸುವಿಕೆ (ಬಲೂನ್‌ ಡೈಲೇಷನ್‌ ಆಫ್‌ ಕೋಆರ್ಕಟೇಶನ್‌ ಸೆಗ್‌ಮೆಂಟ್‌) ಮಾಡಿ ಆ ಭಾಗವನ್ನು ಒಂದುಗೂಡಿಸುವ ಪ್ರಕ್ರಿಯೆಯನ್ನು ವೈದ್ಯರು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.

ಹುಬ್ಬಳ್ಳಿ ಮೂಲದ 20 ದಿನದ ಮಗು ಕೇವಲ 2.3 ಕೆ.ಜಿ. ತೂಕವಿತ್ತು. ಈ ಮಗುವಿನ ಹೃದಯದಲ್ಲಿ ರಕ್ತ ಪರಿಚಲನೆಯ ಸಮಸ್ಯೆಯ ಕಾರಣದಿಂದ ಧಾರವಾಡದ ಎಸ್‌ಡಿಎಮ್‌ ನಾರಾಯಣ ಹಾರ್ಟ್‌ ಸೆಂಟರ್‌ಗೆ ಕರೆ ತರಲಾಗಿತ್ತು. ಈ ಮಗುವಿನ ಆರೋಗ್ಯ ತಪಾಸಣೆ ನಡೆಸಿದಾಗ ಮಗುವಿಗೆ ಹೃದಯದ ಮಹಾಪಧಮನಿಯಲ್ಲಿ ದೊಡ್ಡ ಪ್ರಮಾಣದ ದೋಷವಿರುವ ಕಾರಣ ರಕ್ತ ಪರಿಚಲನೆಯ ಸಮಸ್ಯೆ ಇರುವುದು ಧೃಢಪಟ್ಟಿತ್ತು.

ಈ ಪ್ರಕರಣದ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಎಸ್‌ಡಿಎಮ್‌ ನಾರಾಯಣ ಹಾರ್ಟ್‌ ಸೆಂಟರ್‌ನ ಮುಖ್ಯ ಹೃದಯ ಶಸ್ತ್ರಚಿಕಿತ್ಸಕ ಡಾ| ರವಿವರ್ಮ ಪಾಟೀಲ್‌, ಚಿಕ್ಕ ಮಕ್ಕಳಿಗೆ ಶಸ್ತ್ರಚಿಕಿತ್ಸೆ ನಡೆಸುವುದು ಅತ್ಯಧಿಕ ಅಪಾಯ ಸಾಧ್ಯತೆಯುಂಟು. ಹೀಗಿರುವಾಗ ಅತಿ ಕಡಿಮೆ ತೂಕದ 2.3 ಕೆಜಿಯ 20 ದಿನದ ಮಗುವಿಗೆ ಈ ಶಸ್ತ್ರಚಿಕಿತ್ಸೆ ಮಾಡುವುದು ಸವಾಲಾಗಿತ್ತು. ಮಗುವಿನ ಕತ್ತಿನ ಭಾಗದ ಅಪಧಮನಿಯು 3 ರಿಂದ 4 ಮಿಲಿ ಮೀಟರ್‌ ಮಾತ್ರ ವ್ಯಾಸ ಇರುವ ಕಾರಣ ಅದನ್ನು ಪ್ರವೇಶಿಸುವುದು ತೀರಾ ಕಷ್ಟಕರವಾಗಿತ್ತು. ಆದರೆ ಇದನ್ನು ಕತ್ತರಿಸಿ, ವೈದ್ಯಕೀಯ ಪ್ರಕ್ರಿಯೆ ಮುಗಿಸಿದ ಬಳಿಕ ಹೊಲಿಗೆ ಹಾಕುವುದು ತೀರಾ ಸವಾಲುದಾಯಕವಾಗಿತ್ತು. ಈ ಸಂಕೀರ್ಣತೆಯ ಪರಿಣಾಮ ಮಗುವಿಗೆ ಮೆದುಳಿನ ಸ್ರಾವದ ಸಾಧ್ಯತೆಯೂ ಇತ್ತು. ಇವೆಲ್ಲದರ ನಡುವೆಯೂ ಮಗುವಿನ ಜೀವ ರಕ್ಷಿಸಿದ ಬಗ್ಗೆ ನಮಗೆ ಹೆಮ್ಮೆ ಇದೆ ಎಂದರು.

ಸೆಂಟರ್‌ನ ವ್ಯವಸ್ಥಾಪಕ ನಿರ್ದೇಶಕ ಶಶಿಕುಮಾರ್‌ ಪಟ್ಟಣಶೆಟ್ಟಿ, ಮಾರುಕಟ್ಟೆ ವಿಭಾಗದ ಮೇಲ್ವಿಚಾರಕ ಅಜಯ್‌ ಹುಲಮನಿ, ದುಂಡೇಶ ತಡಕೋಡರ, ವಿನಾಯಕ್‌ ಗಂಜಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಸೂಕ್ತ ಚಿಕಿತ್ಸೆ ನೀಡದಿದ್ದಲ್ಲಿ ಮಗುವಿಗೆ ಗಂಭೀರ ಆರೋಗ್ಯ ಸಮಸ್ಯೆ ಎದುರಾಗುವ ಸಾಧ್ಯತೆ ಇತ್ತು. ಇದಕ್ಕೆ ಹುಟ್ಟಿದ ತಕ್ಷಣ ಶಸ್ತ್ರಚಿಕಿತ್ಸೆ ಅಥವಾ ಇತರ ವೈದ್ಯಕೀಯ ನೆರವು ಅಗತ್ಯವಿತ್ತು. ಸದ್ಯ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನೆರೆವೇರಿಸಿದ್ದು, ಮಗು ಸಹಜ ಸ್ಥಿತಿಗೆ ಮರಳಿದೆ. ಡಾ|ಅರುಣ್‌ ಕೆ.ಬಬಲೇಶ್ವರ, ಮಕ್ಕಳ ಹೃದಯ ರೋಗ ತಜ್ಞ

ಧಾರವಾಡ ಎಸ್‌ಡಿಎಮ್‌ ನಾರಾಯಣ ಹಾರ್ಟ್‌ ಸೆಂಟರ್‌ನ ವೈದ್ಯರನ್ನು ಭೇಟಿ ಮಾಡಿ ಚರ್ಚಿಸುವವರೆಗೂ ಬಹುತೇಕ ಎಲ್ಲ ಆಸೆ ಕೈಬಿಟ್ಟಿದ್ದೆವು. ಬಿಪಿಎಲ್‌ ಕಾರ್ಡ್‌ ಹಾಗೂ ಆಯುಷ್ಮಾನಭವ ಕಾರ್ಡ್‌ನಿಂದ ಉಚಿತವಾಗಿ ಶಸ್ತ್ರಚಿಕಿತ್ಸೆ ಸಿಗುವಂತೆ ಮಾಡಿ ಮಗುವಿನ ಜೀವ ರಕ್ಷಿಸಿದ ವೈದ್ಯರಿಗೆ ನಾವೆಂದಿಗೂ ಅಭಾರಿ ಆಗಿದ್ದೇವೆ. ಮೊಹಮ್ಮದ್‌ ಫಾರೂಕ್‌ ಯಲಿಗಾರ, ಮಗುವಿನ ತಂದೆ, ಹುಬ್ಬಳ್ಳಿ

ಟಾಪ್ ನ್ಯೂಸ್

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

CM-siddu

Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ

b s yediyurappa

By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್‌ ವೈ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.