ಹಿಜಾಬ್- ಕೇಸರಿ ವಿವಾದ ಬಗೆಹರಿಸಲು ಮಧ್ಯಸ್ಥಿಕೆ ವಹಿಸಲು ಸಿದ್ದ: ಬಸವರಾಜ ಹೊರಟ್ಟಿ
Team Udayavani, Feb 11, 2022, 2:30 PM IST
ಹುಬ್ಬಳ್ಳಿ: ಹಿಜಾಬ್- ಕೇಸರಿ ವಿವಾದ ರಾಜಕೀಯಮಯವಾಗಿದ್ದು, ಸಮಸ್ಯೆ ಬಗೆಹರಿಸಲು ಬೇಕಾದರೆ ನಾನು ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರ ಈ ಸಮಸ್ಯೆ ಬಗೆಹರಿಸುವಲ್ಲಿ ಎಡವಿದೆ. ತನ್ನ ಜವಾಬ್ದಾರಿಯಿಂದ ವಿಮುಖವಾಗಿದೆ. ಪ್ರಕರಣದ ಬಗ್ಗೆ ಗಂಭೀರತೆ ಇಲ್ಲ. ಶಿಕ್ಷಣ ಸಚಿವರು ಆರಾಮವಾಗಿದ್ದರೆ ಹೇಗೆ? ಶಾಲಾ-ಕಾಲೇಜ್ ಗೆ ರಜೆ ಕೊಟ್ಟದ್ದು ಸರಿಯಲ್ಲ ಎಂದರು.
ಇದನ್ನೂ ಓದಿ:ಸಿದ್ದರಾಮಯ್ಯ ರಾಜಕೀಯ ಸ್ಕೋರ್ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ: ಶ್ರೀರಾಮುಲು
ರಾಮನ ಭಕ್ತರೇ ಇರಲಿ, ಹನುಮನ ಭಕ್ತರೇ ಇರಲಿ. ಮಕ್ಕಳ ಜೊತೆ ರಾಜಕೀಯ ಮಾಡಬಾರದು. ಕೆಲ ಸಂಘಟನೆಗಳು ರಾಜಕೀಯ ನಾಯಕರ ಸಂಬಂಧಿಗಳು ಇದ್ದಹಾಗೆ. ಕುಮ್ಮಕ್ಕು ಕೊಟ್ಟು ಈ ರೀತಿ ಮಾಡಲಾಗುತ್ತಿದೆ. ಸಮಾಜದಲ್ಲಿ ಜವಾಬ್ದಾರಿ ಇರುವವರು ನಮ್ಮ ಊರು, ನಮ್ಮ ಜಿಲ್ಲೆ, ರಾಜ್ಯದ ಮಕ್ಕಳು ಎನ್ನುವುದನ್ನು ಮರೆತು, ಹೊಲಸು ರಾಜಕೀಯ ಮಾಡುತ್ತಿದ್ದಾರೆ. ಈ ರೀತಿ ಮಾಡುವುದು ಒಂದೇ ಕೊಲೆ ಮಾಡುವುದು ಎರಡೂ ಒಂದೇ. ನ್ಯಾಯಾಲಯದಿಂದ ಯಾವುದೇ ತೀರ್ಮಾನ ಆದರೂ ಮಕ್ಕಳಲ್ಲಿ ಈ ವಿಷ ಹಾಗೇ ಇರುತ್ತೆ. ನಾನೇ ಉಸ್ತುವಾರಿ ತೆಗೆದುಕೊಂಡು ಸಮಸ್ಯೆ ಬಗೆಹರಿಸು ಅಂದರೆ ಮಾಡುತ್ತೇನೆ. ಪೋಷಕರು, ಕಾಲೇಜು ಆಡಳಿತ ಮಂಡಳಿ, ಶಿಕ್ಷಣ ಸಚಿವರ ಜೊತೆ ಸಭೆ ಮಾಡುತ್ತೇನೆ. ಈ ಬಗ್ಗೆ ಸಿಎಂ ಅಂಥವರು ನನಗೆ ಹೇಳಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.