ಸಾರಿಗೆ ನಿಗಮಗಳಲ್ಲಿ ಹೊರಗುತ್ತಿಗೆ ನೇಮಕ!

ಸುರಕ್ಷತೆ ವಿಷಯ ಹೊರಗುತ್ತಿಗೆ ಚಾಲಕರಿಂದ ನಿರೀಕ್ಷೆ ಸಾಧ್ಯವೇ

Team Udayavani, Sep 17, 2022, 5:58 PM IST

ಸಾರಿಗೆ ನಿಗಮಗಳಲ್ಲಿ ಹೊರಗುತ್ತಿಗೆ ನೇಮಕ!

ಹುಬ್ಬಳ್ಳಿ: ಸಾರಿಗೆ ನಿಗಮಗಳಲ್ಲಿ ವೆಚ್ಚ ತಗ್ಗಿಸಲು, ಸಿಬ್ಬಂದಿ ಕೊರತೆ ನೀಗಿಸುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಚಾಲಕರ ನೇಮಕ ಯತ್ನ ನಡೆದಿದೆ. ಇದು ಸಾರಿಗೆ ವ್ಯವಸ್ಥೆಯ ಖಾಸಗೀಕರಣದ ಹುನ್ನಾರವಾಗಿದೆ ಎಂಬುದು ಸಾರಿಗೆ ನೌಕರರ ಸಂಘಟನೆಗಳ ಆರೋಪವಾಗಿದ್ದು, ಇದರ ವಿರುದ್ಧ ಧ್ವನಿ ಎತ್ತಲು ನಿರ್ಧರಿಸಿವೆ.

ಸಾರಿಗೆ ನಿಗಮಗಳಲ್ಲಿ ನಿವೃತ್ತಿ, ವರ್ಗಾವಣೆ, ಇನ್ನಿತರ ಕಾರಣಗಳಿಗಾಗಿ ಖಾಲಿಯಾಗಿರುವ ಹುದ್ದೆಗಳಿಗೆ ಭರ್ತಿ ಮಾಡಿಕೊಳ್ಳಬೇಕಾಗಿದೆ. ಆದರೆ, ಸಾರಿಗೆ ಸಂಸ್ಥೆಗಳ ಬಲವರ್ಧನೆ ಹಾಗೂ ಆರ್ಥಿಕ ಸಂಕಷ್ಟದಿಂದ ಹೊರಬರುವ ನಿಟ್ಟಿನಲ್ಲಿ ಸರ್ಕಾರ ನೇಮಿಸಿದ್ದ ನಿವೃತ್ತ ಐಎಎಸ್‌ ಅಧಿಕಾರಿ ಆರ್‌.ಶ್ರೀನಿವಾಸ ಮೂರ್ತಿ ನೇತೃತ್ವದ ಕಮಿಟಿ, ವೆಚ್ಚ ಕಡಿತಗೊಳಿಸಲು, ಹೊಸ ಸಿಬ್ಬಂದಿ ನೇಮಕ ಮಾಡಿಕೊಳ್ಳದಿರಲು, ನಿರ್ವಾಹಕರ ರಹಿತ ಬಸ್‌ಗಳ ಸಂಚಾರ ಸೇರಿದಂತೆ ವಿವಿಧ ಶಿಫಾರಸುಗಳ ವರದಿ ನೀಡಿದ ಹಿನ್ನೆಲೆಯಲ್ಲಿ ಸರ್ಕಾರ ಸಾರಿಗೆ ನಿಗಮಗಳಲ್ಲಿ ಚಾಲಕ-ನಿರ್ವಾಹಕರ ಹುದ್ದೆಗಳ ನಿರ್ಮಾಣಕ್ಕೆ ಮುಂದಾಗುತ್ತಿಲ್ಲ ಎನ್ನಲಾಗಿದೆ.

ಸಾರಿಗೆ ನಿಗಮಗಳಲ್ಲಿ ಪ್ರಸ್ತುತ 1.25 ಲಕ್ಷ ಹುದ್ದೆಗಳು ಮಂಜೂರಾಗಿದ್ದರೆ, 1.07 ಲಕ್ಷ ಜನರು ಕಾರ್ಯನಿರ್ವಹಿಸುತ್ತಿದ್ದು, ಇನ್ನೂ 16 ಸಾವಿರ ಹುದ್ದೆಗಳು ಖಾಲಿಯಾಗಿಯೇ ಉಳಿದಿವೆ. ಕಲ್ಯಾಣ ಕರ್ನಾಟಕದಲ್ಲಿ ಸುಮಾರು 1,200 ಚಾಲಕರು ಕೊರತೆ ಇದ್ದರೆ, ಬಿಎಂಟಿಸಿಯಲ್ಲಿ 33 ಸಾವಿರ ಚಾಲಕರಲ್ಲಿ 29 ಸಾವಿರ ಚಾಲಕರು ಇದ್ದು, ಸುಮಾರು 4 ಸಾವಿರ ಚಾಲಕರ ಕೊರತೆ ಇದೆ.

ವಾಯವ್ಯ ಸಾರಿಗೆ ಹಾಗೂ ಕೆಎಸ್‌ ಆರ್‌ಟಿಸಿಯಲ್ಲೂ ಚಾಲಕರ ಕೊರತೆ ಎದ್ದು ಕಾಣುತ್ತಿದೆ. ಸರ್ಕಾರ ಅಂತರ್‌ ನಿಗಮಗಳ ವರ್ಗಾವಣೆಗೆ ಅವಕಾಶ ನೀಡಿದ್ದರಿಂದ ಹಲವರು ತಮ್ಮ ಸ್ವಂತ ಜಿಲ್ಲೆಗಳಿಗೆ ವರ್ಗಗೊಂಡಿದ್ದು, ಕೆಎಸ್‌ ಆರ್‌ಟಿಸಿ ಹಾಗೂ ಬಿಎಂಟಿಸಿಯವರು ನಿವೃತ್ತ ನೌಕರರಿಗೆ ಗುತ್ತಿಗೆ ಆಧಾರದಲ್ಲಿ ಆಗಮಿಸುವಂತೆ ಕೋರಿದರೂ ನಿರೀಕ್ಷಿತ ಫಲ ದೊರೆತಿಲ್ಲ. ಕೆಎಸ್‌ಆರ್‌ಟಿಸಿ ನಿಗಮದಲ್ಲಿ ಸುಮಾರು 8,206 ಬಸ್‌ ಗಳಿದ್ದರೆ, ವಾಯವ್ಯ ಸಾರಿಗೆ ನಿಗಮದಲ್ಲಿ 4,560 ಬಸ್‌ಗಳು, ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದಲ್ಲಿ 4,503 ಬಸ್‌ಗಳು, ಬಿಎಂಟಿಸಿಯಲ್ಲಿ 6,769 ಬಸ್‌ಗಳು ಇದ್ದು, ಎಲ್ಲ ಕಡೆಯೂ ಚಾಲಕರ ಕೊರತೆ ಸಾಕಷ್ಟು ಇದೆ.

ಕಕ ಸಾರಿಗೆಯಿಂದ 400 ಚಾಲಕರ ನೇಮಕ?: ಚಾಲಕರ ಕೊರತೆ ನೀಗಿಸುವ ನಿಟ್ಟಿನಲ್ಲಿ ಈಗಾಗಲೇ ವ್ಯಾಯವ್ಯ ಸಾರಿಗೆ ಹಾಗೂ ಕೆಎಸ್‌ಆರ್‌ಟಿಸಿಯಲ್ಲಿ ಹೊರಗುತ್ತಿಗೆ ಚಾಲಕರ ನೇಮಕ ನಿಟ್ಟಿನಲ್ಲಿ ಈಗಾಗಲೇ ಟೆಂಡರ್‌ ಕರೆಯಲಾಗಿದ್ದು, ಇದನ್ನು ಆಧಾರವಾಗಿಟ್ಟುಕೊಂಡೇ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ತಾನು ಹೊರಗುತ್ತಿಗೆ ಚಾಲಕರ ನೇಮಕಕ್ಕೆ ಟೆಂಡರ್‌ ಕರೆಯುವ ನಿರ್ಣಯ ಕೈಗೊಂಡಿದೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿ ಕಲಬುರಗಿಯಲ್ಲಿ ಸೆ.12-13ರಂದು ನಡೆದ ಸಭೆಯಲ್ಲಿ ಸುಮಾರು 400 ಜನ ಹೊರಗುತ್ತಿಗೆ ಚಾಲಕರನ್ನು ನೇಮಕಕ್ಕೆ ಟೆಂಡರ್‌ ಕರೆಯುವ ನಿರ್ಧಾರ ಕೈಗೊಳ್ಳಲಾಗಿದೆ. ವಾಯವ್ಯ-ಕೆಎಸ್‌ ಆರ್‌ಟಿಸಿ ನಿಗಮಗಳಲ್ಲಿ ಕೈಗೊಂಡ ಹೊರಗುತ್ತಿಗೆ ಚಾಲಕರ ನೇಮಕ ಟೆಂಡರ್‌ ಉಲ್ಲೇಖದಡಿ ಇದನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಲಾಗಿದೆ.

ಮಾಸಿಕ ವೇತನ ಎಷ್ಟು?
ಸಾರಿಗೆ ನಿಗಮಗಳಲ್ಲಿ ಹೊರಗುತ್ತಿಗೆಯಾಗಿ ನೇಮಕ ಮಾಡಿಕೊಳ್ಳುತ್ತಿರುವ ಚಾಲಕರಿಗೆ ಮಾಸಿಕ 20 ಸಾವಿರ ರೂ.ಗಳ ವೇತನ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ. ಕಾಯಂ ಚಾಲಕರಿಗೆ ನೀಡುವ ವೇತನಕ್ಕಿಂತ ಕಡಿಮೆ ಜತೆಗೆ ವಿವಿಧ ಭತ್ಯೆಗಳು, ಸೌಲಭ್ಯಗಳ ನೀಡಿಕೆಯೂ ತಪ್ಪಲಿದೆ ಎಂಬುದು ಸರ್ಕಾರದ ಲೆಕ್ಕಾಚಾರ. ಆದರೆ, ಕಾಯಂ ಚಾಲಕರಿಗೆ ಇರುವ ಕೆಲಸದ ಬದ್ಧತೆ, ಶಿಸ್ತು, ಸುರಕ್ಷತೆ ವಿಷಯ ಹೊರಗುತ್ತಿಗೆ ಚಾಲಕರಿಂದ ನಿರೀಕ್ಷೆ ಸಾಧ್ಯವೇ
ಎಂಬುದು ಸಾರಿಗೆ ನೌಕರರ ಸಂಘಟನೆಗಳ ಪ್ರಶ್ನೆಯಾಗಿದೆ.

ಮುಂದಿನ ದಿನಗಳಲ್ಲಿ ಸಾರಿಗೆ ನಿಗಮಗಳಲ್ಲಿ ನಿವೃತ್ತರಾಗುವ, ಮೃತರಾಗುವ ನೌಕರರ ಹುದ್ದೆಗಳು ಖಾಲಿಯಾದಾಗ ಅವುಗಳಿಗೆ ಕಾಯಂ ನೌಕರರನ್ನು ನೇಮಕ ಮಾಡದೆ ಹೊರಗುತ್ತಿಗೆ ನೌಕರರನ್ನು ನೇಮಕ ಮಾಡುತ್ತ ಹೋಗಿ ಮುಂದಿನ ದಿನಗಳಲ್ಲಿ ಇಡೀ ಸಾರಿಗೆ ವ್ಯವಸ್ಥೆಯನ್ನು ಖಾಸಗೀಕರಣಗೊಳಿಸುವ ಹುನ್ನಾರ ಸ್ಪಷ್ಟ ರೂಪದಲ್ಲಿ ಗೋಚರಿಸುತ್ತಿದೆ. ಆರ್‌.ಶ್ರೀನಿವಾಸ ಮೂರ್ತಿ ನೇತೃತದ ಕಮಿಟಿ ಈಗಾಗಲೇ ಸಾರಿಗೆ ನಿಮಗಳಲ್ಲಿನ ವರ್ಕ್‌ಶಾಪ್‌ಗ್ಳನ್ನು ಮುಚ್ಚುವಂತೆಯೂ, ರಿಪೇರಿ, ಇತರೆ ಕಾರ್ಯಗಳನ್ನು ಹೊರಗುತ್ತಿಗೆ ಮೂಲಕ ಕೈಗೊಳ್ಳುವಂತೆ, ನಿರ್ವಾಹಕ ರಹಿತ ಬಸ್‌ಗಳ ಸಂಚಾರ ಸೇರಿದಂತೆ ವಿವಿಧ ಶಿಫಾರಸುಗಳ ಜಾರಿಗೆ ಸರ್ಕಾರ ಒಂದೊಂದೆ ಹೆಜ್ಜೆ ಇರಿಸುತ್ತಿದೆ. ಸಾಮಾಜಿಕ ಚಿಂತನೆ, ಸೇವಾ ದೃಷ್ಟಿಯಿಂದ ಸಾರಿಗೆ ವ್ಯವಸ್ಥೆಯನ್ನು ರಾಷ್ಟ್ರೀಕರಣ ಮಾಡಲಾಗಿತ್ತೋ ಇದೀಗ ಅದೆಲ್ಲವನ್ನು ಮರೆತು ಸರ್ಕಾರ ಮತ್ತೆ ಖಾಸಗೀಕರಣದತ್ತ ಹೆಜ್ಜೆ ಹಾಕುತ್ತಿದೆ ಎಂಬುದು ಸಾರಿಗೆ ನೌಕರರ ಸಂಘಟನೆಗಳ ಆರೋಪವಾಗಿದೆ.

ಅಮರೇಗೌಡ ಗೋನವಾರ

ಟಾಪ್ ನ್ಯೂಸ್

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

SPB: ತಿರುವಳ್ಳೂರ್ ನಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮಾರಕ ನಿರ್ಮಾಣ

SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ

naa ninna bidalare movie releasing today

Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1

Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.