ಪ್ರಾದೇಶಿಕ ಪಕ್ಷಗಳ ಒಗ್ಗೂಡುವಿಕೆ ವ್ಯರ್ಥ ಪ್ರಯತ್ನ
Team Udayavani, Apr 15, 2017, 9:18 AM IST
ಹುಬ್ಬಳ್ಳಿ: ಪ್ರಾದೇಶಿಕ ಪಕ್ಷಗಳು ಒಗ್ಗೂಡಿಕೊಂಡು ಚುನಾವಣೆ ಎದುರಿಸಿದರೆ ಬಿಜೆಪಿ ಗೆಲುವು ತಡೆಗಟ್ಟಲು ಸಾಧ್ಯವೆಂದು ಎನ್‌ಸಿಪಿ ಮುಖ್ಯಸ್ಥ ಶರದ ಪವಾರ ಹೇಳಿರುವುದು ಅವರ ಹುಚ್ಚು ಕಲ್ಪನೆ.ಇಂತಹ ಯತ್ನಗಳಿಂದ ಬಿಜೆಪಿ ಗೆಲುವು ತಡೆಯಲು ಸಾಧ್ಯವಿಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಜಗದೀಶ ಶೆಟ್ಟರ ಅಭಿಪ್ರಾಯಪಟ್ಟರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರಮಟ್ಟದಲ್ಲಿ ಬಿಜೆಪಿ ಗೆಲುವಿನ ನಾಗಾಲೋಟ ತಡೆಯಬೇಕಾದರೆ ಪ್ರಾದೇಶಿಕ ಪಕ್ಷಗಳು ಒಗ್ಗೂಡಬೇಕೆಂಬ ಶರದ ಪವಾರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಉತ್ತರ ಪ್ರದೇಶದಲ್ಲಿ ಇಂತಹುದೆ ಯತ್ನಕ್ಕೆ ಮುಂದಾಗಿ ಸಮಾಜವಾದಿ ಪಕ್ಷ ತೀವ್ರ ಹಿನ್ನಡೆ ಅನುಭವಿಸಿದೆ ಎಂದರು.
ನಂಜನಗೂಡು, ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ್ದು ಅಧಿಕಾರ ಮತ್ತು ಹಣದ ಗೆಲುವಾಗಿದೆ. ಇದು ಬಿಜೆಪಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಹೊಂದಿರುವ 150 ಸ್ಥಾನಗಳಲ್ಲಿ ಗೆಲ್ಲುವ ಗುರಿಗೆ ಯಾವುದೇ ಹಿನ್ನಡೆಯಾಗಲ್ಲ. ಉಪಚುನಾವಣೆಯ ಫಲಿತಾಂಶವನ್ನು ಅದಕ್ಕೆ ಪರಿಗಣಿಸಲಾಗದು. ಪಕ್ಷವು 150ಕ್ಕೂ ಅಧಿಕ ಸೀಟುಗಳನ್ನು ಜಯಿಸಿ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್
Congress; ಸುರ್ಜೇವಾಲ ವಿರುದ್ಧ ಸಚಿವರಿಂದಲೇ ದೂರು?: ಸತೀಶ್ ಜಾರಕಿಹೊಳಿ ಹೇಳಿದ್ದೇನು?
BJP Rift; ಯತ್ನಾಳ್ ಪರ ಬ್ಯಾಟಿಂಗ್ ಮಾಡಿದ ಶಾಸಕ ಬಿ.ಪಿ. ಹರೀಶ್
ಜ.21 ರಂದು ಬೆಳಗಾವಿ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ
MUST WATCH
ಹೊಸ ಸೇರ್ಪಡೆ
Padubidri: ಸ್ಕೂಟಿಗೆ ಈಚರ್ ವಾಹನ ಢಿಕ್ಕಿ; ಸವಾರನಿಗೆ ಗಾಯ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
ಅಖಿಲ ಭಾರತ ಅಂತರ್ ವಿ.ವಿ.ವೇಟ್‌ಲಿಫ್ಟಿಂಗ್:ಮಂಗಳೂರು ವಿವಿ ರನ್ನರ್ ಅಪ್
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.