ಬರದಿಂದ ಜನ ತತ್ತರಿಸುತ್ತಿದ್ದರೆ ಸಿಎಂ ರೆಸಾರ್ಟ್‌ನಲ್ಲಿ ವಿಶ್ರಾಂತಿ: ಕರಂದ್ಲಾಜೆ
• ಅರಳಿಕಟ್ಟಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಐ. ಚಿಕ್ಕನಗೌಡ್ರ ಪರ ಪ್ರಚಾರ ಸಭೆ
Team Udayavani, May 15, 2019, 9:54 AM IST
ಹುಬ್ಬಳ್ಳಿ: ಅರಳಿಕಟ್ಟಿ ಗ್ರಾಮದಲ್ಲಿ ಸಭೆ ನಡೆಸಿ ಬಿಜೆಪಿ ಅಭ್ಯರ್ಥಿ ಪರ ಮತಯಾಚಿಸಲಾಯಿತು.
ಹುಬ್ಬಳ್ಳಿ: ಬರಗಾಲದಿಂದ ಜನರು ನೀರಿಗಾಗಿ ಪರದಾಡುತ್ತಿರುವಾಗ ಸಿಎಂ ಎಚ್.ಡಿ. ಕುಮಾರಸ್ವಾಮಿ ರೆಸಾರ್ಟ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.
ಕುಂದಗೋಳ ವಿಧಾನಸಭಾ ಕ್ಷೇತ್ರದ ಅರಳಿಕಟ್ಟಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಐ. ಚಿಕ್ಕನಗೌಡ್ರ ಪರ ಪ್ರಚಾರ ಸಭೆ ನಡೆಸಿ ಮಾತನಾಡಿದ ಅವರು, ಸರಕಾರದ ದುರಾಡಳಿತ ದಿಂದಾಗಿ ಕೂಲಿ ಕಾರ್ಮಿಕರಿಗೆ ಕೆಲಸವಿಲ್ಲದಾಗಿದೆ. ಸಮ್ಮಿಶ್ರ ಸರಕಾರವು ಗರ್ಭಿಣಿಯರಿಗೆ ಹುಳುವಿದ್ದ ಆಹಾರ ನೀಡುತ್ತಿದೆ. ಮುಖ್ಯಮಂತ್ರಿ ಆರಿಸಿ ಬಂದ 24 ತಾಸಿನೊಳಗೆ ರೈತರ ಸಾಲಮನ್ನಾ ಮಾಡುತ್ತೇನೆಂದು ಸುಳ್ಳು ಹೇಳಿದ್ದಾರೆ ಎಂದರು.
ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ, ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಣೆ, ರೈತರ ಪರವಾದ ಬಜೆಟ್, ಬಡ್ಡಿ ಮನ್ನಾ, ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ನೀಡಿದ ಹೆಗ್ಗಳಿಕೆ ಯಡಿಯೂರಪ್ಪ ಅವರಿಗೆ ಸಲ್ಲುತ್ತದೆ. ಗರ್ಭಿಣಿಯರ ಮಡಿಲಿಗೆ ಕಿಟ್, ಮಹಿಳೆಯರ ರಕ್ಷಣೆ, ಮಠ-ಮಂದಿರಗಳಿಗೆ, ಶಾಲೆ-ಹೈಸ್ಕೂಲ್ಗೆ ವಸತಿ ಕಟ್ಟಿಸಲಿಕ್ಕೆ ಅನುದಾನ ನೀಡಿದ್ದು, ಕೇಂದ್ರ ಸರಕಾರವು ರಾಜ್ಯ ಸರಕಾರಕ್ಕೆ 400 ಕೋಟಿ ರೂ. ಕೊಟ್ಟಿದೆ ಎಂದು ಹೇಳಿದರು.
ಪ್ರಧಾನಿ ಮೋದಿಯವರು ಪ್ರಧಾನಿಯಾದ ನಂತರ ಉಜ್ವಲ ಗ್ಯಾಸ್ ಯೋಜನೆಯಡಿ ಬಿಪಿಎಲ್ ಕಾರ್ಡ್‌ದಾರರಿಗೆ ಉಚಿತ ಗ್ಯಾಸ್ ವಿತರಣೆ, ರೈತರಿಗೆ ವರ್ಷಕ್ಕೆ 6 ಸಾವಿರ ರೂ., ಮುದ್ರಾ ಯೋಜನೆಯಡಿ ಸ್ವಯಂ ಉದ್ಯೋಗ, ಆಯುಷ್ಮಾನ್ ಭಾರತ ಯೋಜನೆಯಡಿ ಒಂದು ಕುಟುಂಬದಲ್ಲಿ ಯಾರಾದರೂ ಅನಾರೋಗ್ಯಕ್ಕೀಡಾದರೆ 5 ಲಕ್ಷ ರೂ. ವರೆಗೆ ಖಾಸಗಿ ಆಸ್ಪತ್ರೆ ವೆಚ್ಚ ಹೀಗೆ ಹತ್ತು ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದರು.
ಮುಖಂಡರಾದ ಪ್ರಭಾಕರ ಕೋರೆ, ಹನುಮಂತ ನಿರಾಣಿ, ಎಸ್.ವಿ. ಸಂಕನೂರ, ಮಹಾಂತೇಶ ಕವಟಗಿಮಠ, ಸೀಮಾ ಮಸೂತಿ, ಭಾರತಿ ಅಳವಂಡಿ, ಶಿವು ಮೆಣಸಿನಕಾಯಿ, ಮೇನಕಾ ಹುರಳಿ ಸೇರಿದಂತೆ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.