ಸೋತಾಗ ಚಿಕ್ಕನಗೌಡ್ರ ನೀರಿನ ಸಂಪರ್ಕ ಸ್ಥಗಿತಗೊಳಿಸಿದ್ದು ನೆನಪಿದೆಯಾ?: ಡಿಕೆಶಿ
Team Udayavani, May 13, 2019, 11:16 AM IST
ಹುಬ್ಬಳ್ಳಿ: ಈ ಹಿಂದೆ ಚುನಾವಣೆಯಲ್ಲಿ ಸೋತ ಸಂದರ್ಭದಲ್ಲಿ ಎಸ್.ಐ. ಚಿಕ್ಕನಗೌಡ್ರ ಕಡಿಮೆ ಮತಗಳು ಬಂದ ಕೆಲ ಗ್ರಾಮಗಳಿಗೆ ಕುಡಿಯುವ ನೀರಿನ ಸಂಪರ್ಕ ಸ್ಥಗಿತಗೊಳಸಿದ್ದು, ಬೂತ್ ಅಧ್ಯಕ್ಷರಿಂದ ಹಣ ವಾಪಸ್ ಪಡೆದಿರುವುದು ನಿಮಗೆಲ್ಲರಿಗೆ ನೆನಪಿದೆಯಾ ಎಂದು ಸಚಿವ ಡಿ.ಕೆ. ಶಿವಕುಮಾರ ಹೇಳಿದರು.
ನೂಲ್ವಿ ಗ್ರಾಮದಲ್ಲಿ ಪಾದಯಾತ್ರೆಯಲ್ಲಿ ಮಾತನಾಡಿದ ಅವರು, ಜನರ ನೀರಿಗಾಗಿ ಸಾಕಷ್ಟು ಹೋರಾಟ ಮಾಡಿದ ನಮ್ಮ ಸಿ.ಎಸ್. ಶಿವಳ್ಳಿ ಒಂದೆಡೆಯಾದರೆ, ತಮ್ಮ ಸೋಲಿಗೆ ಕಾರಣವಾದ ಗ್ರಾಮಗಳ ನೀರಿನ ಸಂಪರ್ಕ ಸ್ಥಗಿತೊಳಿಸುವ ಚಿಕ್ಕನಗೌಡರ ಹಾಗೂ ಬಿಜೆಪಿ ನಾಯಕರ ಮನಸ್ಥಿತಿಯನ್ನು ಈ ಕ್ಷೇತ್ರದ ಜನರು ಅರ್ಥ ಮಾಡಿಕೊಳ್ಳಬೇಕು ಎಂದರು.
ಸಾಲಗಾರರಂತೆ ನಿಮ್ಮ ಸೇವೆ: ಕುಂದಗೋಳ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕೆ ಇಡೀ ಮೈತ್ರಿ ಸರಕಾರವೇ ಶ್ರಮಿಸುತ್ತದೆ. ಮತಗಳನ್ನು ಸಾಲದ ಮೂಲಕ ನಮ್ಮ ಮೈತ್ರಿ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಅವರಿಗೆ ನೀಡಿ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ ಆದಿಯಾಗಿ ಈ ಕ್ಷೇತ್ರದ ಸಾಲಗಾರರಾಗಿ ನಿಮ್ಮ ಸೇವೆ ಮಾಡುತ್ತೇವೆ ಎಂದರು. ನಮ್ಮ ಸರಕಾರ ಐದು ವರ್ಷಗಳ ಕಾಲ ಆಡಳಿತ ಮಾಡುತ್ತದೆ. ಹಿಂದೆ ಆಪರೇಶನ್ ಕಮಲ ಮಾಡಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಹದಗೆಡಿಸಿದರು. ಇಂದು ನಮಗೂ ಆ ಶಕ್ತಿಯಿದೆ. ಆದರೆ ಅಧಿಕಾರ ದುರುಪಯೋಗ ಮಾಡಿಕೊಳ್ಳುವುದಿಲ್ಲ ಎಂದರು.
ಇಂದು ಕುಂದಗೋಳದಲ್ಲಿ ಸಿಎಂ ಕುಮಾರಸ್ವಾಮಿ ಪ್ರಚಾರ
ಬೆಂಗಳೂರು: ಕುಂದಗೋಳ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷಗಳ ಅಭ್ಯರ್ಥಿ ಕುಸುಮಾವತಿ ಪರ ಸೋಮವಾರ ಸಿಎಂ ಕುಮಾರಸ್ವಾಮಿ ಪ್ರಚಾರ ನಡೆಸಲಿದ್ದಾರೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಸೋಮವಾರ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿಗೆ ಆಗಮಿಸುವ ಸಿಎಂ ಸಂಜೆ 5 ಗಂಟೆಗೆ ಕುಂದಗೋಳದಲ್ಲಿ ಹಾಗೂ 7 ಗಂಟೆಗೆ ಹುಬ್ಬಳ್ಳಿ ತಾಲೂಕಿನ ವರೂರಿನಲ್ಲಿ ಸಮಾವೇಶದಲ್ಲಿ ಭಾಗವಹಿಸುವರು ಎಂದು ತಿಳಿಸಿದ್ದಾರೆ. ಇದಕ್ಕೂ ಮೊದಲು ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ್ದ ಡಿಕೆಶಿ, ತಮ್ಮನ್ನು ಪೇಪರ್ ಟೈಗರ್ ಎಂದು ಆರೋಪಿಸಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರಗೆ ತಿರುಗೇಟು ನೀಡಿದ್ದು, ನಾನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ನನಗೆ ಯಾವಾಗ ಏನು ಮಾಡಬೇಕೆಂದು ಗೊತ್ತಿದೆ ಎಂದು ತಿರುಗೇಟು ನೀಡಿದ್ದಾರೆ. ಅಲ್ಲದೇ ಮಂಡ್ಯದಲ್ಲಿ ಮೈತ್ರಿ ಧರ್ಮ ಪಾಲನೆ ಮಾಡದವರ ವಿರುದ್ಧ ಕ್ರಮ ಕೈಗೊಳ್ಳುವುದು ಕೆಪಿಸಿಸಿ ಅಧ್ಯಕ್ಷರಿಗೆ ಬಿಟ್ಟ ವಿಚಾರ ಎಂದು ಹೇಳಿದರು.
• ಡಿ.ಕೆ. ಶಿವಕುಮಾರ, ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.