ಅನಧಿಕೃತ ಬಡಾವಣೆಗಳ ತೆರವಿಗೆ ಶೆಟ್ಟರ ಸೂಚನೆ
Team Udayavani, Jul 7, 2020, 3:51 PM IST
ಹುಬ್ಬಳ್ಳಿ: ಅವಳಿ ನಗರದ ಅನಧಿಕೃತ ಬಡಾವಣೆಗಳ ತೆರವಿಗೆ ಎಲ್ಲ ಜನಪ್ರತಿನಿಧಿಗಳು ಬೆಂಬಲ ನೀಡಿದ್ದು, ಕಾರ್ಯಾಚರಣೆ ನಿರಂತರ ನಡೆಸುವಂತೆ ಹು-ಧಾ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಿಗೆ ತಿಳಿಸಲಾಗಿದೆ ಎಂದು ಸಚಿವ ಜಗದೀಶ ಶೆಟ್ಟರ ತಿಳಿಸಿದರು.
ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಹಿಂದೆ ಕೂಡ ಅನಧಿಕೃತ ಬಡಾವಣೆಗಳ ತೆರವು ಮಾಡುವಂತೆ ತಿಳಿಸಲಾಗಿತ್ತು. ಆದರೆ ಹಿಂದಿನ ಬಹುತೇಕ ಹುಡಾ ಅಧ್ಯಕ್ಷರು ಇದನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಕೆಲವರು ಆರಂಭಶೂರತ್ವ ತೋರಿಸಿ, ನಂತರ ಕಡೆಗಣಿಸಿದರು. ಅನಧಿಕೃತ ಬಡಾವಣೆಗಳನ್ನು ತೆರವುಗೊಳಿಸಿದರೆ ಮಾತ್ರ ನಗರ ಯೋಜನೆಯನ್ವಯ ಬೆಳೆಯಲು ಸಾಧ್ಯವಾಗುತ್ತದೆ ಎಂದರು. ಕಾಂಪ್ರಹೆನ್ಸಿವ್ ಡೆವಲಪ್‌ಮೆಂಟ್ ಪ್ಲ್ಯಾನ್ (ಸಿಡಿಪಿ) ಈಗಾಗಲೇ ಮಾನ್ಯತೆ ಪಡೆದುಕೊಂಡಿದ್ದು, ಇದಕ್ಕೆ ಕೆಲವು ತಿದ್ದುಪಡಿಗಳನ್ನು ತರುವ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ಕ್ರೆಡೈ ನೀಡಿದ ಮನವಿಯನ್ನು ಪರಿಗಣಿಸಿದ್ದು, ಸೂಕ್ತವಾದ ಸಲಹೆಗಳನ್ನು ಸರಕಾರದ ನಗರಾಭಿವೃದ್ಧಿ ಇಲಾಖೆಗೆ ಪ್ರಸ್ತಾವನೆ ಕಳಿಸಲಾಗುವುದು ಎಂದು ತಿಳಿಸಿದರು.
ಹೊಸ ಬಡಾವಣೆಗಳನ್ನು ನಿರ್ಮಿಸುವಾಗ ಉದ್ಯಾನಕ್ಕೆ ಮೀಸಲಾದ ಶೇ.10ರಷ್ಟು ಜಾಗವನ್ನು ಒಂದೇ ಕಡೆ ನೀಡುವ ಕುರಿತು ಸೂಚಿಸಲಾಗಿದೆ. ಇದರಿಂದ ಬಡಾವಣೆಗಳಲ್ಲಿ ದೊಡ್ಡ ಹಾಗೂ ವ್ಯವಸ್ಥಿತ ಉದ್ಯಾನ ನಿರ್ಮಿಸಲು ಸಾಧ್ಯವಾಗುತ್ತದೆ ಎಂದರು. ಕಳೆದ ಹಲವು ವರ್ಷಗಳಿಂದ ಹುಡಾ ಹೊಸ ಬಡಾವಣೆಗಳನ್ನು ನಿರ್ಮಾಣ ಮಾಡಿಲ್ಲ. ಜಮೀನು ಸಿಗದಿದ್ದರಿಂದ ಬಡಾವಣೆ ಮಾಡಲು ಸಾಧ್ಯವಾಗಿರಲಿಲ್ಲ. ಈಗ ಕೆಲ ರೈತರು ಹುಡಾಕ್ಕೆ ಜಮೀನು ನೀಡಲು ಮುಂದೆ ಬರುತ್ತಿದ್ದಾರೆ ಎಂದು ತಿಳಿಸಿದರು. ರಸ್ತೆ ಅತಿಕ್ರಮಣ ತೆರವು ಕಾರ್ಯಾಚರಣೆ ಕುರಿತು ಜಿಲ್ಲಾಧಿಕಾರಿಯೊಂದಿಗೆ ಚರ್ಚಿಸಲಾಗಿದೆ. ಶೀಘ್ರ ಕಾರ್ಯಾಚರಣೆ ಆರಂಭಗೊಳ್ಳಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Organ Donation: ಸಾವಿನ ನಂತರವೂ ನೆರವಾದ ಜೀವ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.