Renukaswamy case; ಧಾರವಾಡ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಆದ ಧನರಾಜ್
Team Udayavani, Aug 29, 2024, 5:07 PM IST
ಧಾರವಾಡ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renukaswamy case) ಪ್ರಕರಣದ A9 ಆರೋಪಿ ಧನರಾಜ್ ನನ್ನು ಬೆಂಗಳೂರು ಪರಪ್ಪನ ಅಗ್ರಹಾರದಿಂದ ಧಾರವಾಡದ ಕೇಂದ್ರ ಕಾರಾಗೃಹಕ್ಕೆ ಬುಧವಾರ ಶಿಫ್ಟ್ ಮಾಡಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್ ಅವರಿಗೆ ರಾಜಾತಿಥ್ಯ ನೀಡಿದ ಪ್ರಕರಣ ಬೆಳಕಿಗೆ ಬಂದ ನಂತರ ದರ್ಶನ್ ಸೇರಿ ಆ ತಂಡದ ಮೂವರನ್ನು ಹೊರತುಪಡಿಸಿ ಉಳಿದೆಲ್ಲಾ ಸದಸ್ಯರನ್ನು ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.
A9 ಆರೋಪಿಯಾಗಿರುವ ಧನರಾಜ್ ನನ್ನು ಬೆಂಗಳೂರು ಪೊಲೀಸರು ಭದ್ರತೆ ಮಧ್ಯೆ ಧಾರವಾಡದ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಿದರು. ಇದರ ಜತೆಗೆ A14 ಆರೋಪಿಯಾಗಿರುವ ಪ್ರದೂಷ್ ನನ್ನು ಬೆಳಗಾವಿ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲಾಗಿದೆ.
ಮೊದಲಿಗೆ ಧನರಾಜ್ ನನ್ನು ಧಾರವಾಡದ ಕಾರಾಗೃಹಕ್ಕೆ ಶಿಫ್ಟ್ ಮಾಡಿದ ಪೊಲೀಸರು ಅದೇ ವಾಹನದಲ್ಲಿ ಪ್ರದೂಷ್ ನನ್ನು ಬೆಳಗಾವಿ ಕಾರಾಗೃಹಕ್ಕೆ ಕರೆದೊಯ್ದರು. ಧನರಾಜ್‌ನನ್ನು ಧಾರವಾಡದ ಕಾರಾಗೃಹಕ್ಕೆ ಕರೆದುಕೊಂಡು ಬಂದ ನಂತರ ಆತನ ಬ್ಯಾಗ್ ಗಳನ್ನು ಪರಿಶೀಲನೆ ಮಾಡಿ ನಂತರ ಒಳಗಡೆ ಕರೆದುಕೊಂಡು ಹೋಗಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.