ಹೊಸ ವೇತನ ಆಯೋಗದ ರಚನೆಗೆ ಆಗ್ರಹಿಸಿ ಮನವಿ
Team Udayavani, May 5, 2017, 3:31 PM IST
ಧಾರವಾಡ: ಸರಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಆದಷ್ಟು ಬೇಗ ಹೊಸ ವೇತನ ಆಯೋಗದ ರಚನೆಗೆ ಆಗ್ರಹಿಸಿ ಅಖೀಲ ಕರ್ನಾಟಕ ರಾಜ್ಯ ಸರಕಾರಿ ನೌಕರರ ಒಕ್ಕೂಟದ ಜಿಲ್ಲಾ ಘಟಕದಿಂದ ಗುರುವಾರ ನಗರದ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಸಿ.ಎಂ. ಸಿದ್ದರಾಮಯ್ಯ ಹೊಸ ವೇತನ ಆಯೋಗ ರಚಿಸುವುದಾಗಿ 2017-18ನೇ ಸಾಲಿನ ಆಯ ವ್ಯಯದಲ್ಲಿ ಘೋಷಣೆ ಮಾಡಿ ಈತನಕ ವೇತನ ಆಯೋಗ ರಚಿಸದೇ ವಿಳಂಬ ನೀತಿ ಅನುಸರಿಸುತ್ತಿದ್ದು, ಮುಂದಿನ 6 ತಿಂಗಳೊಳಗೆ ಹೊಸ ವೇತನ ಆಯೋಗದಿಂದ ವರದಿ ತರಿಸಿಕೊಂಡು ವೇತನ ಪರಿಷ್ಕರಣೆ ಮಾಡಬೇಕು.
2017ರ ಜನವರಿ ತಿಂಗಳಿಂದ ಪೂರ್ವಾನುವನ್ವಯ ಎಲ್ಲ ರಾಜ್ಯ ಸರಕಾರಿ ನೌಕರರಿಗೆ ಶೇ.30ರಷ್ಟು ಮಧ್ಯಂತರ ಪರಿಹಾರ (ಐ.ಆರ್.) ಘೋಷಿಸಬೇಕು ಎಂದು ಆಗ್ರಹಿಸಲಾಯಿತು.1966ರಿಂದ 2011ರವರೆಗೆ 10 ವೇತನ ಆಯೋಗಗಳ ಮೂಲಕ ವೇತನ ಪರಿಷ್ಕರಣೆ ಮಾಡಬೇಕಿತ್ತು. ಆದರೆ, ರಾಜ್ಯ ಸರ್ಕಾರ ಇದುವರೆಗೆ ಕೇವಲ ಐದು ವೇತನ ಆಯೋಗಗಳನ್ನಷ್ಟೇ ರಚಿಸಿ ನೌಕರರ ವೇತನ ಮತ್ತು ಭತ್ಯೆ ಪರಿಷ್ಕರಿಸಿದೆ.
ಇದರಿಂದ, ಕೇಂದ್ರ ಸರ್ಕಾರಿ ನೌಕರರ ಮತ್ತು ರಾಜ್ಯ ಸರ್ಕಾರಿ ನೌಕರರ ವೇತನದ ನಡುವಿನ ವ್ಯತ್ಯಾಸ ಸುಮಾರು ಶೇ. 44ರಷ್ಟಾಗಿದೆ. ಈಗ ಕೇಂದ್ರದ 7 ನೇ ವೇತನ ಆಯೋಗದ ಶಿಫಾರಸುಗಳು ಅನುಷ್ಠಾನಗೊಂಡಲ್ಲಿ ಈ ವ್ಯತ್ಯಾಸವು ಶೇ. 65ಕ್ಕೆ ಏರಲಿದೆ ಎಂಬ ಸಂಗತಿಗಳನ್ನು ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ ತಿಳಿಸಲಾಗಿದೆ.
ಖಂಡನೆ: ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸರಕಾರಿ ನೌಕರರು ಸಮಾವೇಶಗೊಂಡು ಸರಕಾರದ ವಿಳಂಬ ನೀತಿಯನ್ನು ಖಂಡಿಸಿ ಘೋಷಣೆ ಕೂಗಿದರು. ಸರಕಾರಿ ನೌಕರರ ಪರವಾದ ಯಾವುದೇ ಹೋರಾಟಗಳನ್ನು ಕೈಗೆತ್ತಿಕೊಳ್ಳದೇ ರಾಜ್ಯದ 6.5 ಲಕ್ಷ ಸರಕಾರಿ ನೌಕರರಿಗೆ ನ್ಯಾಯ ಒದಗಿಸಲು ಹೋರಾಟ ಕೈಕೊಂಡ ಅಖೀಲ ಕರ್ನಾಟಕ ರಾಜ್ಯ ಸರಕಾರಿ ನೌಕರರ ಒಕ್ಕೂಟದ ಹೋರಾಟ ವಿಫಲಗೊಳಿಸಲು ಯತ್ನಿಸಿದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ನಡೆಯನ್ನು ಖಂಡಿಸಲಾಯಿತು.
ಸರಕಾರಿ ನೌಕರರ ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ರಾಮಚಂದ್ರ ಮುದಗಣ್ಣವರ, ಉಪಾಧ್ಯಕ್ಷ ಗುರುಮೂರ್ತಿ ಯರಗಂಬಳಿಮಠ, ಪ್ರಧಾನ ಕಾರ್ಯದರ್ಶಿ ಮುರುಘೇಶ ಸವಣೂರ, ರಾಜ್ಯ ಪರಿಷತ್ ಸದಸ್ಯ ಎಚ್.ಬಿ. ವಾದಿರಾಜ, ಜಿ.ಜಿ.ಜಿನ್ನೂರ, ಮಂಜುನಾಥ ಹೆಗಡೆ, ಪ್ರಭು ಅಗಡಿ, ಜಿ.ಐ.ಗಣಾಚಾರಿ, ಗುರುಪೋಳ, ಶಂಕರ ಘಟ್ಟಿ, ಎಂ.ಜಿ. ಮರಚರೆಡ್ಡಿ, ಗುಡಿ, ಭಾರತಿ ಭಟ್, ನರಸಾಪೂರ, ಸಿ.ಎಸ್. ಹಿರೇಮಠ, ವಿನೋದಾ ಉಪ್ಪಲದಿನ್ನಿ, ನಾಗವೇಣಿ, ರೇಣುಕಾ, ವಾಯಿದಾ, ಹರಕುಣಿ ಪ್ರತಿಭಟನೆಯಲ್ಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.